ಪ್ರಜಾಪ್ರಭುತ್ವ ಕಗ್ಗೊಲೆ ಆರೋಪ; ಎಸ್‌ಐಆರ್ ವಿರುದ್ಧ ಕಲಬುರಗಿಯಲ್ಲಿ ಪ್ರತಿಭಟನೆ

Date:

ರಾಜ್ಯದಲ್ಲಿ ಎಸ್‌ಐಆರ್ (ಮತದಾರರ ತೀವ್ರ ಪರಿಷ್ಕರಣೆ) ಪ್ರಕ್ರಿಯೆ ವಿರೋಧಿಸಿ ಜಾತ್ಯತೀತ ಪಕ್ಷಗಳು, ಜನಪರ ಸಂಘಟನೆಗಳು ಹಾಗೂ ಪ್ರಗತಿಪರ ವೇದಿಕೆಗಳ ಒಕ್ಕೂಟದ ವತಿಯಿಂದ ಶನಿವಾರ ಕಲಬುರಗಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

“ಕರ್ನಾಟಕ ಪ್ರತಿರೋಧ” ಹೆಸರಿನಲ್ಲಿ ನಡೆದ ಪ್ರತಿಭಟನೆಯ ಅಂಗವಾಗಿ ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಪ್ರತಿಭಟನಾಕಾರರು ಮಾತನಾಡಿ, ‘ಕೇಂದ್ರ ಚುನಾವಣಾ ಆಯೋಗವು ಎಸ್‌ಐಆರ್ ಹೆಸರಿನಲ್ಲಿ ಕೋಟ್ಯಂತರ ಜನರ ಮತದಾನದ ಹಕ್ಕು ಕಸಿಯಲು ಮುಂದಾಗಿದೆ ಎಂದು ಆರೋಪಿಸಿದರು. ಹಲವು ರಾಜ್ಯಗಳಲ್ಲಿ ಜಾರಿಗೊಂಡಿರುವ ಈ ಪ್ರಕ್ರಿಯೆಯಿಂದ ಲಕ್ಷಾಂತರ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿದಿದ್ದು, ಗ್ರಾಮೀಣ ಬಡವರು, ಕೂಲಿ ಕಾರ್ಮಿಕರು, ವಿವಾಹಿತ ಮಹಿಳೆಯರು, ದಲಿತರು, ಆದಿವಾಸಿಗಳು ಹಾಗೂ ಅಲ್ಪಸಂಖ್ಯಾತರು ಸಂಕಷ್ಟ ಎದುರಿಸುತ್ತಿದ್ದಾರೆ’ ಎಂದು ದೂರಿದರು.

“ಲಾಜಿಕಲ್ ಡಿಸ್ಕ್ರೆಪೆನ್ಸಿ” ಸಾಫ್ಟ್‌ವೇರ್ ಬಳಸಿ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಟ್ಟುಕೊಂಡು ಮತದಾರರ ಹೆಸರುಗಳನ್ನು ಕೈಬಿಡಲಾಗುತ್ತಿದೆ. ಇದು ಮತದಾನದ ಹಕ್ಕಿನ ಮೇಲಿನ ದಾಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಎಸ್‌ಐಆರ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಬೇಕು, ಮತದಾರರ ಪಟ್ಟಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯಗೊಳಿಸಬೇಕು ಹಾಗೂ ಗ್ರಾಮಸಭೆ-ವಾರ್ಡ್ ಸಭೆಗಳ ಮೂಲಕ ಪಾರದರ್ಶಕ ಪರಿಶೀಲನೆ ನಡೆಸಬೇಕು’ ಎಂದು ಒತ್ತಾಯಿಸಿದರು.

“ಇದು ಬಿಹಾರವೂ ಅಲ್ಲ, ಬಂಗಾಳವೂ ಅಲ್ಲ; ಬಸವಣ್ಣರ ಕರ್ನಾಟಕ” ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಯಿತು.

ಇದನ್ನು ಓದಿದ್ದೀರಾ? ಪ್ರಜಾಪ್ರಭುತ್ವ ಉಳಿಸಿ, ಮತದಾರರ ಹಕ್ಕು ರಕ್ಷಿಸಿ: ಎಸ್‌ಐಆರ್ ವಿರುದ್ಧ ಯಾದಗಿರಿಯಲ್ಲಿ ಬೃಹತ್ ಪ್ರತಿಭಟನೆ

ಈ ಸಂದರ್ಭದಲ್ಲಿ ಸಂವಿಧಾನ ರಕ್ಷಣಾ ಸಮಿತಿ ಮುಖಂಡ ಭೀಮರಾಬ್ ಟಿ.ಟಿ., ರೇಣುಕಾ ಸಿಂಗೆ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ಜಿಲ್ಲಾಧ್ಯಕ್ಷ ಸಲೀಂ ಅಹ್ಮದ್ ಚಿತ್ತಾಪುರ, ಸುನೀಲ್ ಮಲಪಡೆ, ಅಬ್ದುಲ್ ಖಾದರ್, ಮೈಲಾರಿ ದೊಡ್ಡಮನಿ, ಬಾಲಾಜಿ ಕಾಂಬಳೆ, ಅನುರಾಧ, ಲಕ್ಷ್ಮೀ, ಗೀತಾ, ಶೀಲಾ ಗಾಯಕವಾಡ್, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ, ಅಮ್ ಆದಮಿ ಪಕ್ಷದ ಮುಖಂಡ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...