ಕಲಬುರಗಿ | ಬಿಕ್ಕಟ್ಟಿನ ಸ್ಥಿತಿಯಲ್ಲಿವೆ ಅಂಗನವಾಡಿ ಕೇಂದ್ರಗಳು

Date:

ಅಂಗನವಾಡಿ ಕೇಂದ್ರಗಳು ಸಮುದಾಯದ ಆರೋಗ್ಯ ಕಾಪಾಡಲು ಹಾಗೂ ಮಕ್ಕಳು ಮತ್ತು ಗರ್ಭಿಣಿಯರಿಗೆ ಪೌಷ್ಠಿಕಾಂಶವುಳ್ಳ ಆಹಾರ ಒದಗಿಸುವ ಸೇವೆ ನೀಡುವ ದೃಢವಾದ ವೇದಿಕೆಗಳಾಗಿವೆ. ಅಂಗನವಾಡಿಗಳು ಮಗುವಿನ ಮಾನಸಿಕ, ದೈಹಿಕ ಮತ್ತು ಸಾಮಾಜಿಕ ಬೆಳವಣಿಗೆಗೆ ಬಲವಾದ ಅಡಿಪಾಯವನ್ನು ಹಾಕುವ ಸಮುದಾಯ ಸ್ಥಳಗಳಾಗಿವೆ. ಅಂಗನವಾಡಿ ಕೇಂದ್ರಗಳ ಸೇವಾ ವಿತರಣೆಯು ಸಮುದಾಯದ ಒಳಗೊಳ್ಳುವಿಕೆಯ ಮೇಲೆ ಅವಲಂಬಿತವಾಗಿದೆ. ಮೂಲಸೌಕರ್ಯ ಲಭ್ಯತೆ ಜೊತೆಗೆ ಅಂಗನವಾಡಿ ಕಾರ್ಯಕರ್ತೆಯ ಸಾಮರ್ಥ್ಯ ಕೂಡ ಮುಖ್ಯವಾಗುತ್ತದೆ.

ಸ್ಥಳೀಯವಾಗಿ ಇಷ್ಟೆಲ್ಲ ಸೇವೆ ಒಗಿಸವು ಅಂಗನವಾಡಿ ಕೇಂದ್ರಗಳು ಕಲಬುರಗಿ ಜಿಲ್ಲೆಯಲ್ಲಿ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸುತ್ತಿವೆ. ಜಿಲ್ಲೆಯ ಆಳಂದ ತಾಲ್ಲೂಕಿನ ಕೊಡಲಹಂಗರಗಾ ಗ್ರಾಮದ ಅಂಗನವಾಡಿ ಕೇಂದ್ರಗಳ ಸ್ಥಿತಿಯಂತೂ ಹೇಳತೀರದಂತಿದೆ.

ಗ್ರಾಮದ ಅಂಗನವಾಡಿ ಕೇಂದ್ರ ಸಂ.2ರಲ್ಲಿ ವಿದ್ಯುತ್ ಸಮಸ್ಯೆಯಿಂದ ಮಕ್ಕಳು ಬೇಸಿಗೆಯ ಬೇಗೆಯಲ್ಲಿ ಬಳಲುವಂತಾಗಿದೆ. ಕೇಂದ್ರದಲ್ಲಿ ಫ್ಯಾನ್‌ ಇದ್ದರೂ, ಅದನ್ನು ಉಪಯೋಗಿಸಲಾಗುತ್ತಿಲ್ಲ. ಅಡುಗೆ ಕೋಣೆ ಮಳೆಗಾಲದಲ್ಲಿ ಸೋರುತ್ತದೆ. ಶೌಚಾಲಯ ಇದ್ದರೂ, ಅದಕ್ಕೆ ನೀರಿನ ವ್ಯವಸ್ಥೆ ಇಲ್ಲ. ಅಂಗನವಾಡಿಗೆ ಕಾಂಪೌಡ್ ಗೊಡೆಯೂ ಇಲ್ಲ. ಸಣ್ಣ ಮಕ್ಕಳು ರಸ್ತೆಗೆ ಹೋದರೆ, ಅನಾಹುತ ಎದುರಾಗುವ ಭೀತಿ ಅಂಗನವಾಡಿ ಕಾರ್ಯಕರ್ತೆಯರನ್ನು ಕಾಡುತ್ತಲೇ ಇದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಅಂಗನವಾಡಿ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯ ಧೋರಣೆ ತಳೆದಿದೆ. ಮಕ್ಕಳ ಪೋಷಕರು ಸಮಸ್ಯೆಗಳ ಬಗ್ಗೆ ನಮ್ಮನ್ನು ಪ್ರಶ್ನಿಸುತ್ತಾರೆ. ಅದರೆ, ನಾವು ಏನು ಮಾಡಲಾಗದ ಪರಿಸ್ಥಿತಿಯಲ್ಲಿದ್ದೇವೆ” ಎಂದು ಈದಿನ.ಕಾಮ್‌ ಜೊತೆ ಮಾತನಾಡಿದ ಅಂಗನವಾಡಿ ಕಾರ್ಯಕರ್ತೆ ಉಮಾದೇವಿ ಹೇಳುತ್ತಾರೆ.

ಇನ್ನು, ಗ್ರಾಮದ ಅಂಗನವಾಡಿ ಕೇಂದ್ರ ಸಂ.3ರಲ್ಲಿ ಅಂಗನವಾಡಿಗೆ ಸ್ವತ ಕಟ್ಟಡವೇ ಇಲ್ಲ. 13 ವರ್ಷಗಳಿಂದ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿದೆ. ಹಲವು ಸಂದರ್ಭಗಳಲ್ಲಿ ಸರಿಯಾಗಿ ಬಾಡಿಗೆ ಪಾವತಿಸದೆ, ಕಟ್ಟಡದ ಮಾಲೀಕರು ಖಾಲಿ ಮಾಡಿಸಿರುವ ಪ್ರಹಸನಗಳೂ ನಡೆದಿವೆ. ಒಂದು ಕಟ್ಟಡದಿಂದ ಮತ್ತೊಂದು ಕಟ್ಟಡಕ್ಕೆ ಅಂಗನವಾಡಿ ಸ್ಥಳಾಂತರವಾಗುತ್ತಲೇ ಇದೆ.

“ಕೆಲವು ಸಂದರ್ಭಗಳಲ್ಲಿ ಬಾಡಿಗೆ ಮನೆಗಳು ಸಿಗದೆ, ನನ್ನ ಸ್ವಂತ ಮನೆಯಲ್ಲಿ ಅಂಗನವಾಡಿ ಕೇಂದ್ರ ನಡೆಸಿದ್ದೇನೆ. ಮಕ್ಕಳಿಗೆ ಪೂರ್ವ ಶಾಲಾ ಶಿಕ್ಷಣ ಅತಿ ಮುಖ್ಯ. ಆದರೆ, ಅಂಗನವಾಡಿಗೆ ಸ್ವಂತ ಕಟ್ಟಡವೇ ಇಲ್ಲದಿರುವುದು ಬೇಸರ ತಂದಿದೆ” ಎಂದು ಅಂಗನವಾಡಿ ಕಾರ್ಯಕರ್ತೆ ರೇಣುಕಾ ಹೇಳಿದ್ದಾರೆ.

ಈದಿನ.ಕಾಮ್‌ ಜೊತೆ ಮಾತನಾಡಿದ ಗ್ರಾಮದ ಅಂಗನವಾಡಿ ಕೇಂದ್ರ ಸಂ.1ರ ಕಾರ್ಯಕರ್ತೆ ಸುನೀತಾ, “ಅಂಗನವಾಡಿಗೆ ಸ್ವಂತ ಕಟ್ಟಡವಿದೆ. ಆದರೆ, ಒಂದೇ ಕೋಣೆ ಇರುವ ಕಾರಣ ಬಾಡಿಗೆ ಮನೆ ಮೊರೆ ಹೋಗುವ ಪರಿಸ್ಥಿತಿ ಎದುರಾಗಿದೆ. ಇರುವ ಕಟ್ಟಡವು ಮಳೆಗಾಲದಲ್ಲಿ ಸೋರುತ್ತದೆ. ಮಳೆ ಸುರಿಯುವ ಸಮಯದಲ್ಲಿ ನೀರು ಸೋರುವ ಜಾಗಕ್ಕೆ ಬಕೆಟ್‌ಗಳನ್ನು ಇಟ್ಟು, ಮಕ್ಕಳಿಗೆ ಪಾಠ ಮಾಡಬೇಕಾದ ಪರಿಸ್ಥಿತಿ ಇದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ರಾಯಚೂರು | ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಿ.ವಿ ನಾಯಕ

ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ರಾಯಚೂರು ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಆಕಾಂಕ್ಷಿಯಾಗಿದ್ದೇನೆ....

ತುಮಕೂರು | ಕಲೆಯ ಗ್ರಹಿಕೆ ಮೇಲೆ ನಿರ್ಬಂಧ ಹೇರುವುದು ಅಪಾಯಕಾರಿ: ವಿಮರ್ಶಕ ರಾಘವೇಂದ್ರರಾವ್

ಕಲೆಯ ಗ್ರಹಿಕೆ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮಬದ್ಧವಾಗಿದ್ದರೂ ನಿರ್ಬಂಧ...

ಗದಗ | ಪ್ರತಿಯೊಬ್ಬರಿಗೂ ಮುಖ್ಯವಾದ ಸಂಪತ್ತು ಆರೋಗ್ಯ; ಎಂಎಲ್‌ಸಿ ಸಂಕನೂರ

ಪ್ರತಿಯೊಬ್ಬರಿಗೂ ಆರೋಗ್ಯ ಸಂಪತ್ತು ಮುಖ್ಯವಾದ ಸಂಪತ್ತಾಗಿದೆ. ನೌಕರರು ತಮ್ಮ ಆರೋಗ್ಯ ಸಂರಕ್ಷಣೆಗೆ...

ತುಮಕೂರಿನಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಸ್ವಾಮೀಜಿಗಳ ಒತ್ತಾಯ

ಮುಂದಿನ ಲೋಕಸಭಾ ಚುನಾವಣೆಗೆ ತುಮಕೂರು ಕ್ಷೇತ್ರದಲ್ಲಿ ನೊಳಂಬ ಲಿಂಗಾಯತರಿಗೆ ಟಿಕೆಟ್ ಕೊಡುವಂತೆ...