ಕಲಬುರಗಿ | ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಅಭಿವೃದ್ಧಿಗೆ ₹25 ಕೋಟಿ ಹೆಚ್ಚುವರಿ ಅನುದಾನಕ್ಕೆ ಒತ್ತಾಯಿಸಿ ಮನವಿ

Date:

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ನಿರ್ಮಾಣ ಹಂತದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ಸಮಗ್ರ ಅಭಿವೃದ್ಧಿಗೆ 2026-27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಹೆಚ್ಚುವರಿಯಾಗಿ ₹25 ಕೋಟಿ ಅನುದಾನ ಮಂಜೂರು ಮಾಡುವಂತೆ ಡಾ. ಅಂಬೇಡ್ಕರ್ ರಾಷ್ಟ್ರೀಯ ಸ್ಮಾರಕ ನಿರ್ಮಾಣ ಹೋರಾಟ ಸಮಿತಿ ವತಿಯಿಂದ ಮನವಿ ಸಲ್ಲಿಸಿದರು.

- Advertisement -

ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಕ್ರಮ್ ತೇಜಸ್ ನೇತೃತ್ವದ ಮಂಗಳವಾರ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ. ಮಹಾದೇವಪ್ಪ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮನವಿ ಸಲ್ಲಿಸಿ ವಿಕ್ರಮ್ ತೇಜಸ್ ಮಾತನಾಡಿ, ‘ರಾಜ್ಯ ಸರ್ಕಾರವು ಈಗಾಗಲೇ ಸ್ಮಾರಕ ನಿರ್ಮಾಣಕ್ಕಾಗಿ 10 ಎಕರೆ ಭೂಮಿಯನ್ನು ಮಂಜೂರು ಮಾಡಿ ₹3 ಕೋಟಿ ಅನುದಾನ ನೀಡಿರುವುದನ್ನು ಉಲ್ಲೇಖಿಸಿ, ಯೋಜನೆಯ ವಿಸ್ತಾರವನ್ನು ಗಮನಿಸಿದರೆ ಈ ಅನುದಾನ ಅಪರ್ಯಾಪ್ತವಾಗಿದೆ’ ಎಂದು ತಿಳಿಸಲಾಗಿದೆ.

‘ಸ್ಮಾರಕದ ಅಂಗವಾಗಿ ವಸ್ತು ಸಂಗ್ರಹಾಲಯ, ಸಂಶೋಧನಾ ಕೇಂದ್ರ, ಅಂತರಾಷ್ಟ್ರೀಯ ಮಟ್ಟದ ಗ್ರಂಥಾಲಯ, ಉದ್ಯಾನವನ, ಬೌದ್ಧಧಮ್ಮ ಅಧ್ಯಯನ ಕೇಂದ್ರ, ಸಭಾಂಗಣ, ಅತಿಥಿಗೃಹ ಹಾಗೂ ಬಾಬಾ ಸಾಹೇಬರು ಸ್ಥಳೀಯರೊಂದಿಗೆ ತೆಗೆಸಿಕೊಂಡ ಭಾವಚಿತ್ರದ ಬೃಹತ್ ಪ್ರತಿಮೆ ನಿರ್ಮಾಣದ ಯೋಜನೆ ಹೊಂದಲಾಗಿದೆ. ಜೊತೆಗೆ ಪರಿಶಿಷ್ಟ ಸಮುದಾಯದ ವಿದ್ಯಾರ್ಥಿ-ಯುವಕರಿಗಾಗಿ ಕೌಶಲ್ಯ ತರಬೇತಿ ಕೇಂದ್ರ ಹಾಗೂ ಐಎಎಸ್, ಐಪಿಎಸ್, ಕೆಎಎಸ್, ಐಎಫ್‌ಎಸ್, ಯುಪಿಎಸ್‌ಸಿ, ಕೆಪಿಎಸ್‌ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶವಿದೆ’ ಎಂದು ವಿವರಿಸಿದರು.

‘ಅಂಬೇಡ್ಕರ್ ಅವರು ವಾಡಿ ಭೇಟಿಯ ಕುರಿತು ಸಂಶೋಧನಾ ಗ್ರಂಥ ರಚನೆಗಾಗಿ ₹10 ಲಕ್ಷ ವಿಶೇಷ ಅನುದಾನ ಮಂಜೂರು ಮಾಡಬೇಕು ಎಂದು ಸಮಿತಿ ಮನವಿ ಮಾಡಿದೆ. ಸ್ಮಾರಕ ನಿರ್ಮಾಣಕ್ಕೆ ಮಂಜೂರಾದ ಭೂಮಿಯನ್ನು ಸ್ಮಾರಕದ ಹೆಸರಿಗೆ ನೊಂದಣಿ ಮಾಡಿ, ಬೇರೆ ಯಾವುದೇ ಯೋಜನೆಗೆ ಬಳಸಬಾರದು ಎಂಬಂತೆ ಸರ್ಕಾರದಿಂದ ಸ್ಪಷ್ಟ ಆದೇಶ ಹೊರಡಿಸಬೇಕು. ಸಮಗ್ರ ನೀಲನಕ್ಷೆ ಸಿದ್ಧಪಡಿಸಿ ಹಂತ ಹಂತವಾಗಿ ಅಭಿವೃದ್ಧಿಪಡಿಸುವ ಜೊತೆಗೆ ಕಟ್ಟಡಗಳನ್ನು ಬೌದ್ಧ ವಾಸ್ತುಶಿಲ್ಪ ಮಾದರಿಯಲ್ಲಿ ನಿರ್ಮಿಸಬೇಕು’ ಎಂದು ಆಗ್ರಹಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಬೆಂಕಿ ಅವಘಡ; ₹50 ಲಕ್ಷಕ್ಕೂ ಅಧಿಕ ನಷ್ಟ

ಈ ಸಂದರ್ಭದಲ್ಲಿ ಪಿಎಂಕೆ ಫ್ಯಾನ್ಸ್ ಕ್ಲಬ್ ಪ್ರಧಾನ ಕಾರ್ಯದರ್ಶಿ ರವಿ ಕೋಳಕೂರ, ಭಾರತೀಯ ಬೌದ್ಧ ಮಹಾಸಭಾದ ಜಿಲ್ಲಾ ಖಜಾಂಚಿ ಸಿದ್ದರಾಮ ನಡಗೇರಿ, ಸಾಮಾಜಿಕ ಕಾರ್ಯಕರ್ತೆ ರಮಾ ದೊಡ್ಡಮನಿ ಹಾಗೂ ಭೀಮರತ್ನ ಸ್ವಾಭಿಮಾನಿ ಸೇನೆಯ ಅಧ್ಯಕ್ಷ ಮೈಲಾರಿ ದೊಡ್ಡಮನಿ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...