ಕಲಬುರಗಿ | ಸಾಲ ಮರುಪಾವತಿಸುವಂತೆ ರೈತರಿಗೆ ಬ್ಯಾಂಕ್‌ಗಳ ನೋಟಿಸ್; ರೈತರ ಆಕ್ರೋಶ

Date:

ಬರಗಾಲ, ಬೆಳೆ ನಷ್ಟದಿಂತ ರೈತರು ಕಂಗಾಲಾಗಿದ್ದಾರೆ. ಜೀವನ ನಿರ್ವಹಣೆಯು ದುಸ್ಥರವಾಗಿದೆ. ಸರ್ಕಾರಗಳು ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಲವನ್ನು ಮರುಪಾವತಿಸುವಂತೆ ಕೆಲವು ಬ್ಯಾಂಕ್‌ಗಳು ರೈತರಿಗೆ ನೋಟಿಸ್‌ ನೀಡಿವೆ. ಬ್ಯಾಂಕ್‌ಗಳ ಧೋರಣೆ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದ್ದು, ಬ್ಯಾಂಕ್‌ಗಳು ಮತ್ತು ಸರ್ಕಾರಗಳ ವಿರುದ್ಧ ರೈತರು ಕಿಡಿಕಾರಿದ್ದಾರೆ.

- Advertisement -

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳು ಸುಮಾರು ರೈತರಿಗೆ ರೈತರಿಗೆ ಸಾಲ ಮರುಪಾವತಿಸುವಂತೆ ನೋಟಿಸ್‌ ನೀಡಿವೆ. ಬರಗಾಲದ ಸಮಯದಲ್ಲಿ ನೋಟಿಸ್‌ ನೀಡಿದರೆ, ಬ್ಯಾಂಕ್‌ಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ರೈತರು ಎಚ್ಚರಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಬ್ಯಾಂಕ್‌ಗಳು ತಾಲೂಕಿನ ಸುಮಾರು 286 ರೈತರಿಗೆ ನೋಟಿಸ್ ನೀಡುತ್ತಿವೆ ಎಂದು ತಿಳಿದುಬಂದಿದೆ. ನೋಟಿಸ್‌ ನೀಡುವುದನ್ನ ಬ್ಯಾಂಕ್‌ಗಳು ನಿಲ್ಲಿಸಬೇಕು. ನೋಟಿಸ್‌ ನೀಡದಂತೆ ಬ್ಯಾಂಕ್‌ಗಳಿಗೆ ಸರ್ಕಾರದ ಸೂಚನೆ ನೀಡಬೇಕು. ಇಲ್ಲದಿದ್ದಲ್ಲಿ ಬ್ಯಾಂಕ್‌ಗಳಿಗೆ ಮುತ್ತಿಗೆ ಹಾಕುತ್ತೇವೆ” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಹೇಳಿದ್ದಾರೆ.

“ಜಿಲ್ಲೆಯಲ್ಲಿ ಸುಮಾರು 4,21,751 ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ರಾಜ್ಯ ಸರ್ಕಾರ ಬ್ಯಾಂಕ್‌ಗಳಲ್ಲಿ ಸಾಲ ಮಾಡಿರುವ ರೈತರು ಅಸಲು ಕಟ್ಟಿದರೆ, ಬಡ್ಡಿ ಮನ್ನಾ ಮಾಡುವುದಾಗಿ ಹೇಳಿದೆ. ಆದರೆ, ಬರಗಾಲದಲ್ಲಿ ಅಸಲು ಕಟ್ಟಲು ಹೇಗೆ ಸಾಧ್ಯ” ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...

ಭದ್ರಾವತಿ | ಕಾಂಗ್ರೆಸ್‌ನಲ್ಲಿ ನಿಷ್ಠಾವಂತರಿಗೆ ಸೂಕ್ತ ಪ್ರತಿಫಲ ಸಿಗುತ್ತದೆ: ಸಿ.ಜಿ. ಮಧುಸೂದನ್

ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಿ.ಜಿ. ಮಧುಸೂದನ್ ಅವರು ಶನಿವಾರ...