ಕಲಬುರಗಿ | ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆಗೆ ಪ್ರೇರೇಪಿಸಲಾಗುತ್ತಿದೆ: ಸಚಿವ ಪ್ರಿಯಾಂಕ್‌ ಖರ್ಗೆ

Date:

ಇತ್ತೀಚಿಗೆ ಕೇಸರಿ ‌ಶಾಲು ಹಾಕಿಸಿ ಬಡವರ ಮಕ್ಕಳನ್ನು ಬೀದಿಯಲ್ಲಿ ಧರ್ಮ ರಕ್ಷಣೆ ಹಾಗೂ ಗೋರಕ್ಷಣೆ ಮಾಡಲು ಪ್ರೇರೇಪಿಸಲಾಗುತ್ತಿದೆ. ಅಚ್ಚರಿ ಎಂದರೆ, ಪ್ರೇರೇಪಿಸುತ್ತಿರುವವರು ತಮ್ಮ ಮಕ್ಕಳನ್ನು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ಕಳಿಸುತ್ತಾರೆ‌. ಅವರು ಧರ್ಮ ರಕ್ಷಣೆಗೆ ಯಾಕೆ ತಮ್ಮ ಮಕ್ಕಳನ್ನು ಕಳಿಸುವುದಿಲ್ಲ? ಬಿಜೆಪಿಗರು ಮೊದಲು ಇದರ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದರು.

- Advertisement -

ಆಳಂದ ಪಟ್ಟಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಅಂದಾಜು 8 ಕೋಟಿ ರೂ. ಮೊತ್ತದ ಸರ್ಕಾರಿ ಪಾಲಿಟೆಕ್ನಿಕ್ ಕಟ್ಟಡ ಹಾಗೂ ಅಂದಾಜು 6.5 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿ ಅವರು ವೈಜ್ಞಾನಿಕ ಮನೋಭಾವನೆಗೆ ಒತ್ತು ನೀಡದೆ, 5 ಸಾವಿರ ವರ್ಷಗಳ ಹಿಂದಿನ ಆಚರಣೆಗಳನ್ನು ಅನುಸರಿಸುವಂತೆ ಕರೆ ನೀಡುತ್ತಾ, ಅವುಗಳನ್ನು ಅಳವಡಿಸಿಕೊಳ್ಳುವಂತೆ ಇಂಡಿಯನ್ ಸೈನ್ಸ್ ಕಾಂಗ್ರೆಸ್ ನ ಕಾರ್ಯಕ್ರಮದಲ್ಲಿ ಹೇಳುತ್ತಾರೆ. ಆದರೆ, ಎಲ್ಲವನ್ನೂ ಮಕ್ಕಳು ಓದಲಿ ಆದರೆ, ಅದರ ಜೊತೆಗೆ ವೈಜ್ಞಾನಿಕ ಮನೋಭಾವನೆಯನ್ನು ಬೆಳೆಸಿಕೊಳ್ಳಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಮಾನವ ಸಂಪನ್ಮೂಲ ನಮ್ಮ ದೇಶದ ಪ್ರಬಲ ಶಕ್ತಿಯಾಗಿದೆ. ನಮ್ಮ ಮಾನವ ಸಂಪನ್ಮೂಲಕ್ಕೆ ಇಡೀ‌ ವಿಶ್ವದಾದ್ಯಂತ ಬಹುಬೇಡಿಕೆ ಇದೆ.‌ ಸಶಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಯುವಶಕ್ತಿಯನ್ನು ಬೆಳೆಸಬೇಕು. ಯುವಕರ ಸಂಖ್ಯಾಬಲಕ್ಕೆ ಸರಿಯಾದ ಶಿಕ್ಷಣ ನೀಡಿದಾಗ ಮಾತ್ರ ಉತ್ತಮ ರಾಷ್ಟ್ರ ನಿರ್ಮಾಣಕ್ಕೆ ಅನುಕೂಲವಾಗಲಿದೆ‌. ಅಣೆಕಟ್ಟೆ ಹಾಗೂ ರಸ್ತೆ ನಿರ್ಮಾಣದ ಜೊತೆಗೆ ಯುವಶಕ್ತಿಗೆ ವೈಜ್ಞಾನಿಕ ಶಿಕ್ಷಣ ನೀಡಿದಾಗ ಮಾತ್ರ ಭಾರತ ಸುಭದ್ರ ರಾಷ್ಟ್ರವಾಗಲಿದೆ”  ಎಂದರು.

“ನಾನು ಇತ್ತೀಚಿಗೆ ಅಮೇರಿಕಾಗೆ ತೆರಳಿದ ಸಂದರ್ಭದಲ್ಲಿ ನಮ್ಮ ರಾಜ್ಯದ ಐತಿಹಾಸಿಕ ಹಿನ್ನೆಲೆಯ ಬಗ್ಗೆ ಅಲ್ಲಿ ವಿವರಿಸಿ ಹೇಳಬೇಕಿತ್ತು. ಅಲ್ಲಿನ ಕಂಪನಿಗಳ ಪ್ರಮುಖರು ಭಾರತದಲ್ಲಿ ಬಂಡವಾಳ ಹೂಡಿಕೆ ಮಾಡುವುದಕ್ಕೆ ಆಸಕ್ತಿ ತೋರಿಸಿದರು. ಇದಕ್ಕೆ ಕಾರಣವಾಗಿದ್ದು ನಮ್ಮಲ್ಲಿನ ಮಾನವಸಂಪನ್ಮೂಲ. ಈ ಸಂಪನ್ಮೂಲಗಳನ್ನು ಬಳಸಿಕೊಳ್ಳುವ ಬಗ್ಗೆ ಅವರು ಉತ್ಸುಕರಾಗಿದ್ದಾರೆ. ಇದಕ್ಕೆ ಗುಣಮಟ್ಟದ ಶಿಕ್ಷಣವೇ ಕಾರಣವಾಗಿದೆ” ಎಂದು ಅಭಿಪ್ರಾಯಪಟ್ಟರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ರೈತರಿಗೆ ನೆರವಾಗದ ರಾಜ್ಯ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ : ಬಿ.ವೈ.ವಿಜಯೇಂದ್ರ

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ.ಸುಧಾಕರ್ ಆಳಂದ ಶಾಸಕ ಬಿ.ಆರ್.ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರು, ಕಲಬುರಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ ಗುತ್ತೇದಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...