ಕಲಬುರಗಿ ಬರಪೀಡಿತ ಜಿಲ್ಲೆಯನ್ನಾಗಿ ಘೋಷಿಸಿ : ಮಾಜಿ ಶಾಸಕ ಸುಭಾಷ ಗುತ್ತೇದಾರ

Date:

ಕಲಬುರಗಿ ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ತೀವ್ರ ಕೊರತೆಯಾಗಿರುವ ಪರಿಣಾಮ ಕೃಷಿ ಚಟುವಟಿಕೆಗಳು ಸಂಪೂರ್ಣ ಹಿನ್ನಡೆಯಾಗಿದ್ದು, ಜಿಲ್ಲೆಯನ್ನೇ ತಕ್ಷಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮಾಜಿ ಶಾಸಕ ಸುಭಾಷ್ ಆರ್.ಗುತ್ತೇದಾರ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

- Advertisement -

ಜಿಲ್ಲೆಯ ಬಹುತೇಕ ಗ್ರಾಮಗಳಲ್ಲಿ ಸಮರ್ಪಕ ಮಳೆಯಾಗದ ಕಾರಣ ರೈತರು ಬಿತ್ತನೆ ಮಾಡಿದ ಜೋಳ, ತೊಗರಿ, ಉದ್ದು, ಹೆಸರು, ಸೋಯಾಬೀನ್ ಸೇರಿದಂತೆ ವಿವಿಧ ಬೆಳೆಗಳು ಒಣಗುವ ಹಂತಕ್ಕೆ ತಲುಪಿದ್ದು, ಅಪಾರ ನಷ್ಟದ ಭೀತಿಯನ್ನು ಎದುರಿಸುತ್ತಿದ್ದಾರೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಮಳೆಯ ಕೊರತೆಯಿಂದ ಕೃಷಿ ಮಾತ್ರವಲ್ಲದೆ ಜಾನುವಾರುಗಳಿಗೆ ಮೇವು ಹಾಗೂ ಕುಡಿಯುವ ನೀರಿನ ಸಮಸ್ಯೆಯೂ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಯಾವುದೇ ವಿಳಂಬ ಮಾಡದೆ ವಿಶೇಷ ಅಧಿಕಾರಿಗಳ ತಂಡವನ್ನು ಜಿಲ್ಲೆಗೆ ಕಳುಹಿಸಿ ಬೆಳೆಹಾನಿಯ ಸಮಗ್ರ ಸಮೀಕ್ಷೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಮಾರ್ಗಸೂಚಿಗಳ ಅನ್ವಯ ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ, ರೈತರಿಗೆ ಬೆಳೆಹಾನಿ ಪರಿಹಾರ, ಇನ್‌ಪುಟ್ ಸಬ್ಸಿಡಿ, ಬೆಳೆ ಸಾಲ ಮರುಪಾವತಿಗೆ ಕಾಲಾವಕಾಶ, ಬಡ್ಡಿ ಮನ್ನಾ ಹಾಗೂ ಅಗತ್ಯವಿದ್ದಲ್ಲಿ ಹೊಸ ಕೃಷಿ ಸಾಲ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗದಂತೆ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಜಾನುವಾರುಗಳ ರಕ್ಷಣೆಗೆ ಮೇವು ಬ್ಯಾಂಕ್‌ಗಳನ್ನು ಆರಂಭಿಸಿ ಸಮರ್ಪಕ ಮೇವು ಪೂರೈಕೆ ಮಾಡಬೇಕು. ಜೊತೆಗೆ ಗ್ರಾಮೀಣ ಜನರಿಗೆ ಉದ್ಯೋಗ ದೊರಕುವಂತೆ ಮನರೇಗಾ ಅಡಿ ಹೆಚ್ಚಿನ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಎಸ್‌ಐಆರ್ ಪ್ರಕ್ರಿಯೆಗೆ ನಿಯೋಜನೆಗೊಂಡ ಬಿಎಲ್‌ಒ ಹೃದಯಾಘಾತದಿಂದ ಸಾವು

ರೈತರ ಸಂಕಷ್ಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲವಾದಲ್ಲಿ ರೈತರ ಹಿತಾಸಕ್ತಿಗಾಗಿ ಜನಾಂದೋಲನ ರೂಪಿಸಿ ಹೋರಾಟ ನಡೆಸುವ ಅನಿವಾರ್ಯತೆ ಎದುರಾಗಲಿದೆ ಗುತ್ತೇದಾರ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ಗ್ಯಾನೇಶ್ ರಕ್ಷಣೆಗಾಗಿ ಯುವತಿಯರನ್ನು ಪೀಡಿಸುವ ಕೀಚಕರಾಗುತ್ತಿದ್ದಾರೆಯೇ ದೆಹಲಿ ಪೊಲೀಸರು?

ರಕ್ಷಕರೇ ಭಕ್ಷಕರಾಗುವ ಅದೇ ಹಳೆಯ ನಿರಾಶಾಜನಕ ಕತೆಯಿದು. ದೆಹಲಿ ಪ್ರತಿಭಟನೆಯಲ್ಲಿ ಪೊಲೀಸರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...