ಕಲಬುರಗಿ | ರಾಜ್ಯ ಸರ್ಕಾರ ಮಾದಾರ ಚನ್ನಯ್ಯ ಜಯಂತಿ ಆಚರಿಸಬೇಕು; ಒತ್ತಾಯ

Date:

ಪ್ರತಿ ವರ್ಷ ಡಿಸೆಂಬರ್ 12 ರಂದು ಶಿವಶರಣ ಮಾದರ ಚನ್ನಯ್ಯನವರ ಜಯಂತಿಯನ್ನು ಸಮುದಾಯದ ಸಹಕಾರದೊಂದಿಗೆ ರಾಜ್ಯ ಸರ್ಕಾರವೇ ಆಚರಿಸಬೇಕು ಎಂದು ಶಿವಶರಣ ಮಾದರ ಚೆನ್ನಯ್ಯ ಜನಜಾಗೃತಿ ವೇದಿಕೆ ಒತ್ತಾಯಿಸಿದೆ.

ಕಲಬುರಗಿಯಲ್ಲಿ ಸಮಾಜದ ಮುಖಂಡರು ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ರಾಜ್ಯ ಸರ್ಕಾರದಿಂದ ಜಯಂತಿ ಆಚರಿಸಲು ಮುಂದಾಗಬೇಕೆಂದು ಆಗ್ರಹಿಸಿದರು.

“ಸಮುದಾಯದ ಅಭಿವೃದ್ಧಿಯ ಹಿತದೃಷ್ಟಿಯಿಂದಾಗಿ ಹಾಗೂ ಶರಣ ಮಾದರ ಚನ್ನಯ್ಯರವರು ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸಮಾಜಕ್ಕೆ ತಿಳಿಸಲು ಮತ್ತು ನಾಡಿನ ಕಲೆ, ಸಾಹಿತ್ಯ, ಸಂಸ್ಕೃತಿ ಉಳಿಸಿ ಬೆಳೆಸಲು ಅನುಕೂಲವಾಗುವ ನಿಟ್ಟಿನಲ್ಲಿ ಮಾದಾರ ಚನ್ನಯ್ಯರವರ ಜಯಂತಿ ಆಚರಣೆಗೆ ರಾಜ್ಯ ಸರ್ಕಾರ ಆದೇಶಿಸಬೇಕು. ಈ ಹಿಂದಿನ ಅನೇಕ ಸರಕಾರದಲ್ಲಿಯೂ ಹಲವು  ಬಾರಿ ಮನವಿ ಸಲ್ಲಿಸಿದರೂ ಸ್ಪಂದಿಸದೇ ನಿರ್ಲಕ್ಷವಹಿಸಿವೆ” ಎಂದು ಸಚಿವರಿಗೆ ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ದೇಶದಲ್ಲೇ ಅಗ್ರಸ್ಥಾನ ಪಡೆದ ಬೆಂಗಳೂರು: ಕಳೆದ ವರ್ಷ ಅತಿ ಹೆಚ್ಚು ಆ್ಯಸಿಡ್ ದಾಳಿ ಪ್ರಕರಣ ದಾಖಲು

ಈ ಸಂದರ್ಭದಲ್ಲಿ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಸವರಾಜ ಕಾಳಗಿಕರ್, ಸಮಾಜದ ಹಿರಿಯ ಮುಖಂಡರಾದ ಶಂಭುಲಿಂಗ ನಾಟಿಕರ್, ಈರಪ್ಪ ಗುಂಡಗುರ್ತಿ, ಈಶ್ವರ ಹಳ್ಳಿ, ಕಾಶಿನಾಥ್ ನಾಟಿಕರ್, ಅರ್ಜುನ್ ಮೇತ್ರಿ, ಜಗನ್ನಾಥ್ ಬಿಜನಹಳ್ಳಿ, ಸಾಬು ರಾಜೋಳಿ, ದೊಡ್ಡಪ್ಪ ಮುಗಟಿ, ಮರಿಯಪ್ಪ ದೊಣಗಾವ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...