ಕಲಬುರಗಿ | ತಾಯಿಯನ್ನು ನಿಂದಿಸಿದಕ್ಕೆ ಅಜ್ಜನನ್ನೇ ಕೊಂದ ಮೊಮ್ಮಗ

Date:

ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾರಣಕ್ಕೆ ಮೊಮ್ಮಗನೊಬ್ಬ ಅಜ್ಜನನ್ನೇ ಬರ್ಬರವಾಗಿ ಹತ್ಯೆಗೈದ ಘಟನೆ ಕಲಬುರಗಿ ತಾಲೂಕಿನ ಜವಳಗಾ(ಬಿ) ಗ್ರಾಮದಲ್ಲಿ ನಡೆದಿದೆ. ಸಿದ್ರಾಮಪ್ಪ ಕಾಮನ್ (75) ಕೊಲೆಯಾದ ಅಜ್ಜ ಎಂದು ತಿಳಿದು ಬಂದಿದೆ.

- Advertisement -

ಸೋಮವಾರ ಸಿದ್ರಾಮಪ್ಪ ಅವರ ಸಹೋದರಿ ಸಾವನ್ನಪ್ಪಿದ ಹಿನ್ನಲೆ ಸಿದ್ರಾಮಪ್ಪ ಮತ್ತು ಸೊಸೆ ಸರೋಜಾ ಕುಟುಂಬ ಕಲಬುರಗಿ ತಾಲ್ಲೂಕಿನ ಕುಮಿಸಿ ಗ್ರಾಮಕ್ಕೆ ತೆರಳಿದ್ದರು. ಅಂತ್ಯಸಂಸ್ಕಾರ ಮುಗಿಸಿಕೊಂಡು ವಾಪಸ್ ವಾಹನದಲ್ಲಿ ಬರುವಾಗ ಸರೋಜಾ ಅವರು ಮಾವ ಸಿದ್ರಾಮಪ್ಪ ಅವರಿಗೆ ವಾಹನದ ಮೇಲೆ ಕೂರುವಂತೆ ಹೇಳಿದ್ದರು. ವಯಸ್ಸಾದವನಿಗೆ ಗಾಡಿಯ ಮೇಲೆ ಕೂರುವಂತೆ ಹೇಳಿದಕ್ಕೆ ಸಿದ್ರಾಮಪ್ಪ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ವಿಷಯವನ್ನು ಸರೋಜಾ ತನ್ನ ಮಗನಿಗೆ ಹೇಳಿದ್ದಾರೆ. ಇದರಿಂದ ರೊಚ್ಚಿಗೆದ್ದ ಮಗ ಚಾಕುವಿನಿಂದ ಇರಿದು ತಾತನಿಗೆ ಕೊಲೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೊಲೆ ಆರೋಪಿ ಆಕಾಶ್ ಕಾಮನ್ (22) ಎಂಬಾತನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ನರೋಣಾ ಪೊಲೀಸ್‌ ಠಾಣೆ ಪಿಎಸ್‌ಐ ಈದಿನ.ಕಾಮ್‌ ದೊಂದಿಗೆ ಮಾತನಾಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....