ಕಲಬುರಗಿ | ಕಾಮಗಾರಿ ಹೆಸರಿನಲ್ಲಿ ಅಕ್ರಮ; ಪಿಡಿಒ ವಿರುದ್ಧ ಪ್ರಕರಣ ದಾಖಲು

Date:

ಕಾಮಗಾರಿ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಠಿಸಿ 46 ಲಕ್ಷ ರೂ. ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಓಕಳಿ ಗ್ರಾಮ ಪಂಚಾಯತಿ ಪಿಡಿಒ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -

ಕಲಬುಗರಿ ಜಿಲ್ಲೆಯ ಕಮಲಾಪುರ ತಾಲೂಕಿನ ಓಕಳಿ ಗ್ರಾಮ ಪಂಚಾಯತಿ ಪಿಡಿಒ ಪ್ರವೀಣ್ ಕುಮಾರ್ ವಿರುದ್ಧ ಕಮಲಾಪುರ ತಾಲೂಕು ಪಂಚಾಯತಿ ಇಒ ಅಂಬರೇಶ ಪಾಟೀಲ್ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಕಲಬುರಗಿ ಸೆನ್‌ ಅಪರಾಧ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

15ನೇ ಹಣಕಾಸು ಅನುದಾನದಲ್ಲಿ ಪಿಡಿಒ ಪ್ರವೀಣ್ ಕುಮಾರ್ ಅವ್ಯವಹಾರ ನಡೆಸಿದ್ದಾರೆ. ನಡೆಯದೇ ಇರುವ ಕಾಮಗಾರಿಗಾಗಿ ಸಲಕರಣೆ ಖರೀದಿ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಠಿಸಿ 46 ಲಕ್ಷ ರೂ. ಹಣ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಪ್ರವೀಣ್ ಕುಮಾರ್ ಮತ್ತು ಅಧ್ಯಕ್ಷ ಅಲ್ಕಾ ನರೋಣಿ ಅವರ ವಿರುದ್ಧ ಮಾಜಿ ಅಧ್ಯಕ್ಷ ವಿಜಯ ಕುಮಾರ್ ಶೆಟ್ಟಿ ಮತ್ತು ಅಂಬೇಡ್ಕರ್ ಯುವಸೇನೆ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ತಳಕೇರಿ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ತನಿಕೆ ನಡೆಸಲಾಗಿದ್ದು, ಆರೋಪ ಸಾಬೀತಾಗಿದ್ದು, ಅಕ್ರಮ ನಡೆದಿರುವುದು ಕಂಡುಬಂದಿದೆ ಎಂದು ಇಒ ತಿಳಿಸಿದ್ದಾರೆ.

ಪಿಡಿಒ ಪ್ರವೀಣ್ ಕುಮಾರ್ ವಿರುದ್ಧ ಐಪಿಸಿ ಸೆಕ್ಷನ್‌ 406, 409, 420, 465, 468 ಮತ್ತು ಕರ್ನಾಟಕ ಗ್ರಾಮ ಸ್ವರಾಜ್ ಪಂಚಾಯತಿ ರಾಜ್ಯ ಕಾಯ್ದೆಯ ಕಲಂ 246 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...