ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ, ಊರಲ್ಲಿ ಪಡಿತರವೂ ಇಲ್ಲ!

Date:

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ ಬಸ್ ಸೌಲಭ್ಯವಿಲ್ಲ, ಸ್ಥಳೀಯವಾಗಿ ಪಡಿತರ ವಿತರಣೆಯಾಗುತ್ತಿಲ್ಲ, ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿಲ್ಲ, ಮಕ್ಕಳಿಗೆ ಊರಲ್ಲೇ ಶಾಲೆಯಿಲ್ಲ. ಹೀಗೆ ಹಲವು ಸಮಸ್ಯೆಗಳ ನಡುವೆ ಜೀವನ ಸಾಗಿಸುತ್ತಿರುವ ಗ್ರಾಮಸ್ಥರು, ತಮ್ಮ ಸಂಕಷ್ಟಕ್ಕೆ ಅಧಿಕಾರಿಗಳು ಯಾವಾಗ ಸ್ಪಂದಿಸುತ್ತಾರೆ ಎಂದು ಕಾಯುತ್ತಿದ್ದಾರೆ.

- Advertisement -

ಪಡಿತರಕ್ಕಾಗಿ ಮೂರು ಕಿಲೋಮೀಟರ್ ಅಲೆದಾಟ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಜೀವನಮರಡಗಿ ಗ್ರಾಮದಲ್ಲಿ ಸುಮಾರು 100 ಪಡಿತರ ಚೀಟಿಗಳಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಆದರೆ, ಪಡಿತರ ಪಡೆಯಲು ಮೂರು ಕಿಲೋಮೀಟರ್ ದೂರದ ಸಾಥ್‌ಖೇಡ್ ಗ್ರಾಮಕ್ಕೆ ತೆರಳಬೇಕಾದ ಪರಿಸ್ಥಿತಿ ಇದೆ. ದಿನಗೂಲಿ ಸೇರಿದಂತೆ ದುಡಿಮೆಯನ್ನೇ ಅವಲಂಬಿಸಿ ಜೀವನ ನಡೆಸುವ ಕುಟುಂಬಗಳು ಪಡಿತರ ತರಲು ಹೆಚ್ಚುವರಿ ಹಣ ಖರ್ಚು ಮಾಡಬೇಕಾಗಿದೆ.

ಗ್ರಾಮದಲ್ಲಿ ಒಂದೇ ಒಂದು ಆಟೋ ಇರುವುದರಿಂದ ಅದನ್ನೇ ಎಲ್ಲರೂ ಅವಲಂಬಿಸಿದ್ದಾರೆ. ಆಟೋ ಸಿಗದಿದ್ದರೆ ಪಡಿತರ ಹೊತ್ತುಕೊಂಡು ಬರುವುದು ಮತ್ತಷ್ಟು ಕಷ್ಟವಾಗುತ್ತದೆ. ಬಡ ಕುಟುಂಬಗಳಿಗೆ ಉಚಿತವಾಗಿ ಸಿಗಬೇಕಾದ ಪಡಿತರವನ್ನು ಪಡೆಯುವುದೇ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ. ಗ್ರಾಮದಲ್ಲಿಯೇ ಪಡಿತರ ವಿತರಣೆ ವ್ಯವಸ್ಥೆ ಕಲ್ಪಿಸಿದರೆ ಜನರ ಸಮಯ, ಶ್ರಮ ಹಾಗೂ ಹಣ ಉಳಿಯಲಿದೆ ಎಂಬುದು ಗ್ರಾಮಸ್ಥರ ಅಭಿಪ್ರಾಯ.

ಒಂದು ಗಂಟೆ ನೀರು, ವಿದ್ಯುತ್ ಹೋದರೆ ಪೂರೈಕೆಯೇ ಬಂದ್!

ಕುಡಿಯುವ ನೀರಿನ ಸಮಸ್ಯೆ ಗ್ರಾಮಸ್ಥರನ್ನು ಮತ್ತಷ್ಟು ಕಾಡುತ್ತಿದೆ. ಪ್ರತಿದಿನ ಬೆಳಗ್ಗೆ 9ರಿಂದ 10 ಗಂಟೆಯವರೆಗೆ ಮಾತ್ರ ನೀರು ಪೂರೈಸಲಾಗುತ್ತದೆ ಎನ್ನಲಾಗಿದೆ. ಈ ಅವಧಿಯಲ್ಲಿ ವಿದ್ಯುತ್ ಕಡಿತವಾದರೆ ನೀರು ಪೂರೈಕೆಯೂ ಸ್ಥಗಿತಗೊಳ್ಳುತ್ತದೆ. ನಂತರ ನೀರಿಗಾಗಿ ಮರುದಿನದವರೆಗೆ ಕಾಯಬೇಕಾಗುತ್ತದೆ.

ಗ್ರಾಮದ ಕೆಲವು ಓಣಿಗಳಲ್ಲಿ ನೀರಿನ ಸೌಲಭ್ಯ ಇಲ್ಲದ ಕಾರಣ ಮಹಿಳೆಯರು ಮತ್ತೊಂದು ಓಣಿಗೆ ತೆರಳಿ ಕೊಡಗಳಲ್ಲಿ ನೀರು ಹೊತ್ತು ತರಬೇಕಾಗಿದೆ. ಕುಡಿಯುವ ನೀರಿನ ಲಭ್ಯತೆ ಕಡಿಮೆಯಾದಾಗ, ಸಂಗ್ರಹಿಸಿದ ಅಲ್ಪ ಪ್ರಮಾಣದ ನೀರನ್ನೇ ಎರಡು ದಿನಗಳವರೆಗೆ ಬಳಸುವ ಸ್ಥಿತಿ ಎದುರಾಗುತ್ತಿದೆ ಎಂದು ನಿವಾಸಿಗಳು ಅಳಲು ತೋಡಿಕೊಂಡಿದ್ದಾರೆ.

ಗ್ರಾಮದಲ್ಲಿ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಅಗತ್ಯವಿರುವ ಕಡೆ ಕೊಳವೆಬಾವಿ ಕೊರೆಸಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂಬುದು ಜನರ ಒತ್ತಾಯವಾಗಿದೆ.

ಬಸ್ ಇಲ್ಲದೆ ಜನಜೀವನಕ್ಕೆ ಬ್ರೇಕ್!

ಗ್ರಾಮಕ್ಕೆ ಕನಿಷ್ಠ ಒಂದು ಬಸ್ ಕೂಡ ಸಂಚರಿಸದಿರುವುದು ಜನರ ದೈನಂದಿನ ಬದುಕಿಗೆ ಅಡ್ಡಿಯಾಗಿದೆ. ಕೆಲಸ ಕಾರ್ಯಗಳು, ಅಗತ್ಯ ವಸ್ತುಗಳ ಖರೀದಿ, ಸರ್ಕಾರಿ ಕಚೇರಿಗಳ ಭೇಟಿ ಹಾಗೂ ಇತರ ತುರ್ತು ಅಗತ್ಯಗಳಿಗಾಗಿ ಬೇರೆ ಗ್ರಾಮಗಳನ್ನು ಅವಲಂಬಿಸಬೇಕಾಗಿದೆ.

ಈ ಕುರಿತು ಈದಿನ.ಕಾಮ್‌ ಜೊತೆಗೆ ಮಾತನಾಡಿದ ಸಂಜುಕುಮಾರ್, “ನಮ್ಮ ಗ್ರಾಮದಲ್ಲಿ ಸುಮಾರು 100 ಪಡಿತರ ಚೀಟಿಗಳಿವೆ. ಆದರೂ ಬಸ್ ಸೌಲಭ್ಯವಿಲ್ಲ. ಬೆಳಗ್ಗೆ 10 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಬಸ್ ಬಿಡಬೇಕು. ಪಡಿತರವನ್ನು ನಮ್ಮ ಗ್ರಾಮದಲ್ಲಿಯೇ ವಿತರಿಸಬೇಕು. ಕುಡಿಯುವ ನೀರನ್ನು ಸಮರ್ಪಕವಾಗಿ ಪೂರೈಸಬೇಕು” ಎಂದು ಆಗ್ರಹಿಸಿದರು.

ಮಹಿಳೆಯರ ಸಂಕಷ್ಟ ಕೇಳುವವರಾರು?

ಗ್ರಾಮದ ನಿವಾಸಿ ಮಹಾದೇವಿ ಅವರ ನೋವು ಗ್ರಾಮೀಣ ಬಡ ಕುಟುಂಬಗಳ ಸಂಕಷ್ಟವನ್ನು ಬಿಂಬಿಸುತ್ತದೆ. “ನಮ್ಮ ಊರಿಗೆ ಬಸ್ ಇಲ್ಲ. ಪಡಿತರ ತರಲು ಮೂರು ಕಿಲೋಮೀಟರ್ ದೂರದ ಸಾಥ್‌ಖೇಡ್‌ಗೆ ಹೋಗಬೇಕು. ದುಡಿದು ಜೀವನ ಸಾಗಿಸುವ ನಾವು, ಪಡಿತರ ತರಲು ಆಗುವ ಹೆಚ್ಚುವರಿ ಖರ್ಚನ್ನು ಎಲ್ಲಿಂದ ಭರಿಸಬೇಕು? ನಮ್ಮ ಓಣಿಯಲ್ಲಿ ಕುಡಿಯುವ ನೀರಿಲ್ಲ. ಬೇರೆ ಓಣಿಗೆ ಹೋಗಿ ನೀರು ತರಬೇಕು. ಕೆಲವೊಮ್ಮೆ ಒಂದು ಕೊಡ ನೀರನ್ನೇ ಎರಡು ದಿನ ಬಳಸುವ ಪರಿಸ್ಥಿತಿ ಇದೆ” ಎಂದು ಅವರು ತಮ್ಮ ಅಳಲು ತೋಡಿಕೊಂಡರು.

ಇದರ ಜೊತೆಗೆ, ಗಂಡನನ್ನು ಕಳೆದುಕೊಂಡಿರುವ ಕೆಲವು ಮಹಿಳೆಯರಿಗೆ ವಿಧವಾ ಪಿಂಚಣಿ ಸ್ಥಗಿತಗೊಂಡಿರುವುದಾಗಿ ಅವರು ದೂರಿದ್ದಾರೆ. ಅರ್ಹ ಮಹಿಳೆಯರಿಗೆ ನಿಯಮಿತವಾಗಿ ಪಿಂಚಣಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು. ಸ್ಥಗಿತಗೊಂಡಿರುವ ಪಿಂಚಣಿಯನ್ನು ಪರಿಶೀಲಿಸಿ ಮರುಪಾವತಿ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಶಾಲೆಯಿಲ್ಲದ ಊರು; ವಸತಿ ನಿಲಯವೇ ಮಕ್ಕಳ ಆಸರೆ!

ಜೀವನಮರಡಗಿ ಗ್ರಾಮದಲ್ಲಿ ಶಾಲೆಯಿಲ್ಲದ ಕಾರಣ ಮಕ್ಕಳ ಶಿಕ್ಷಣಕ್ಕೂ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಶಿಕ್ಷಣಕ್ಕಾಗಿ ಮಕ್ಕಳು ಬೇರೆ ಗ್ರಾಮಗಳಿಗೆ ತೆರಳಬೇಕಾಗಿದೆ. ಸೂಕ್ತ ಬಸ್ ವ್ಯವಸ್ಥೆಯಿಲ್ಲದ ಕಾರಣ ಕೆಲವರು ವಸತಿ ನಿಲಯಗಳಲ್ಲಿ ಉಳಿದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದರೆ, ಇನ್ನು ಕೆಲವರು ಪ್ರತಿದಿನ ಸುಮಾರು ಆರು ಕಿಲೋಮೀಟರ್ ನಡೆದುಕೊಂಡು ಹೋಗಿ ಬರಬೇಕಾಗಿದೆ ಎಂದು ನಿವಾಸಿ ಈರಮ್ಮ ತಿಳಿಸಿದ್ದಾರೆ.

ಈದಿನ.ಕಾಮ್‌ ಜೊತೆಗೆ ಮಾತನಾಡಿದ ಅವರು, “ಪ್ರತಿ ತಿಂಗಳು ಪಡಿತರ ತರಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದೇವೆ. ನಮ್ಮ ಗ್ರಾಮದಲ್ಲಿ ಶಾಲೆಯಿಲ್ಲದ ಕಾರಣ ಮಕ್ಕಳನ್ನು ಬೇರೆ ಊರಿಗೆ ಕಳುಹಿಸಬೇಕಾಗಿದೆ. ಬಸ್ ವ್ಯವಸ್ಥೆಯಿಲ್ಲದ ಕಾರಣ ಕೆಲ ಮಕ್ಕಳು ವಸತಿ ನಿಲಯಗಳಲ್ಲಿ ಉಳಿಯುತ್ತಿದ್ದಾರೆ. ಇನ್ನೂ ಕೆಲವರು ದಿನನಿತ್ಯ ಆರು ಕಿಲೋಮೀಟರ್ ನಡೆದುಕೊಂಡು ಹೋಗಿ ಬರುತ್ತಿದ್ದಾರೆ. ಗ್ರಾಮದಲ್ಲಿ ಕೊಳವೆಬಾವಿ ಕೊರೆಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು” ಎಂದು ಮನವಿ ಮಾಡಿದರು.

ಜನರ ಸಮಸ್ಯೆಗಳಿಗೆ ಪರಿಹಾರ ಯಾವಾಗ?

ಬಸ್ ಸೌಲಭ್ಯ, ಸ್ಥಳೀಯ ಪಡಿತರ ವಿತರಣೆ, ಶುದ್ಧ ಕುಡಿಯುವ ನೀರು, ಮಕ್ಕಳ ಶಿಕ್ಷಣ ಹಾಗೂ ವಿಧವಾ ಪಿಂಚಣಿ—ಇವು ಗ್ರಾಮಸ್ಥರ ಐಷಾರಾಮಿ ಬೇಡಿಕೆಗಳಲ್ಲ; ಬದುಕಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳು. ಇವುಗಳಿಗಾಗಿ ಜನರು ಪ್ರತಿದಿನ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ಗ್ರಾಮೀಣ ಅಭಿವೃದ್ಧಿಯ ಕುರಿತು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಸಂಬಂಧಪಟ್ಟ ಗ್ರಾಮ ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಸಾರಿಗೆ ಮತ್ತು ಆಹಾರ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಸಮಸ್ಯೆಗಳ ವಾಸ್ತವ ಸ್ಥಿತಿಯನ್ನು ಪರಿಶೀಲಿಸಬೇಕು. ಬೆಳಗ್ಗೆ ಮತ್ತು ಸಂಜೆ ಬಸ್ ಸಂಚಾರ ಆರಂಭಿಸುವುದು, ಗ್ರಾಮದಲ್ಲಿಯೇ ಪಡಿತರ ವಿತರಣೆ ಕೇಂದ್ರ ಕಲ್ಪಿಸುವುದು, ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವುದು ಹಾಗೂ ಮಕ್ಕಳ ಶಿಕ್ಷಣಕ್ಕೆ ಅಗತ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ತುರ್ತು ಕ್ರಮ ಕೈಗೊಳ್ಳಬೇಕು ಎಂಬುದು ಜೀವನಮರಡಗಿ ಗ್ರಾಮಸ್ಥರ ಆಗ್ರಹವಾಗಿದೆ.

ಮೂಲಭೂತ ಸೌಲಭ್ಯಗಳಿಗಾಗಿ ಗ್ರಾಮಸ್ಥರು ಇನ್ನೆಷ್ಟು ದಿನ ಕಾಯಬೇಕು? ಜನರ ದೈನಂದಿನ ಸಂಕಷ್ಟಕ್ಕೆ ಆಡಳಿತ ವ್ಯವಸ್ಥೆ ಯಾವಾಗ ಸ್ಪಂದಿಸಲಿದೆ? ಎಂಬ ಪ್ರಶ್ನೆಗಳು ಈಗ ಮುನ್ನೆಲೆಗೆ ಬಂದಿವೆ.

WhatsApp Image 2026 05 02 at 12.01.27 e1777704270988
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಪ್ಪಳ | ಪರಿಸರ ನಿಯಮ ಉಲ್ಲಂಘನೆ: 8 ಕಾರ್ಖಾನೆಗಳ ಬಂದ್‌ಗೆ ನಿರ್ಧಾರ

ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...