ಕಲಬುರಗಿ | ಕನ್ನಡ ಸಾಹಿತ್ಯ ಪರಿಷತ್ತಿನ 112ನೇ ಸಂಸ್ಥಾಪನಾ ದಿನಾಚರಣೆ

Date:

ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಕನ್ನಡ ಭವನದಲ್ಲಿ ಮಂಗಳವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ನೆರವೇರಿಸಲಾಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ಪುಸ್ತಕ ಪ್ರದರ್ಶನವು ಸಾಹಿತ್ಯಾಸಕ್ತರನ್ನು ವಿಶೇಷವಾಗಿ ಆಕರ್ಷಿಸಿತು. ವಿವಿಧ ಪ್ರಕಾರಗಳ ಕನ್ನಡ ಸಾಹಿತ್ಯ ಕೃತಿಗಳನ್ನು ಪ್ರದರ್ಶನಕ್ಕಿಡಲಾಗಿದ್ದು, ಕಾದಂಬರಿ, ಕವನ ಸಂಕಲನ, ವಿಮರ್ಶಾ ಸಾಹಿತ್ಯ, ಇತಿಹಾಸ ಹಾಗೂ ಸಂಶೋಧನಾ ಕೃತಿಗಳಂತಹ ಅನೇಕ ಪುಸ್ತಕಗಳು ಓದುಗರ ಗಮನ ಸೆಳೆದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ಅವರು, “ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಭಾಷಾ ಕಲಿಕೆಯ ಮೂಲಕ ಜ್ಞಾನ ಸಂಪತ್ತನ್ನು ವೃದ್ಧಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ಇನ್ನಷ್ಟು ಗಮನ ಹರಿಸುವ ಅಗತ್ಯವಿದೆ ಎಂದು ಸರ್ಕಾರಕ್ಕೆ ಮನವಿ ಮಾಡಿದರು. ಶಿಕ್ಷಣ ಹಾಗೂ ಭಾಷೆಯ ನಡುವಿನ ಅವಿನಾಭಾವ ಸಂಬಂಧವನ್ನು ಒತ್ತಿಹೇಳಿದ ಅವರು, ಕನ್ನಡ ಭಾಷೆಯ ಅಧ್ಯಯನವು ವ್ಯಕ್ತಿತ್ವ ವಿಕಾಸಕ್ಕೂ ಸಹಾಯಕವಾಗುತ್ತದೆ” ಎಂದು ಹೇಳಿದರು.

1726006

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಅವರು ಮಾತನಾಡಿ, “ತಾಯಿಗೆ ನೀಡುವ ಪ್ರೀತಿ ಮತ್ತು ಗೌರವವನ್ನು ಕನ್ನಡ ಭಾಷೆಗೂ ನೀಡಬೇಕು ಎಂದು ಕರೆ ನೀಡಿದರು. ಕನ್ನಡ ಭಾಷೆಯ ಉಳಿವಿಗೆ ಓದುವ ಮತ್ತು ಬರವಣಿಗೆಯ ಅಭ್ಯಾಸ ಅತ್ಯಂತ ಮುಖ್ಯವೆಂದು ತಿಳಿಸಿದರು. ಪತ್ರಿಕೆಗಳ ಓದು ಮತ್ತು ಸೃಜನಾತ್ಮಕ ಬರವಣಿಗೆಯ ಮೂಲಕ ಭಾಷೆಯ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಹಿರಿಯರು ನಾಡು-ನುಡಿಯನ್ನು ಉಳಿಸಲು ಸಂಸ್ಥೆಗಳನ್ನು ಸ್ಥಾಪಿಸಿದ್ದು, ಆ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ” ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಮಾತನಾಡಿ, “112 ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಅಸ್ಮಿತೆಯ ಪ್ರತೀಕವಾಗಿ ಬೆಳೆದಿದೆ ಎಂದರು. ಪರಿಷತ್ತನ್ನು ಕೇವಲ ಸಾಹಿತಿಗಳ ಸಂಘಟನೆಯಾಗಿ ಸೀಮಿತಗೊಳಿಸದೇ, ಜನಸಾಮಾನ್ಯರ ವೇದಿಕೆಯನ್ನಾಗಿ ರೂಪಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು. ಪರಿಷತ್ತಿನ ಘನತೆ ಮತ್ತು ಪರಂಪರೆಯನ್ನು ಕಾಪಾಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದ್ದು, ರಾಜ್ಯದಲ್ಲಿಯೇ ಮಾದರಿ ಪರಿಷತ್ತಾಗಿ ಬೆಳೆಯಲು ಪ್ರಯತ್ನಿಸಲಾಗುತ್ತಿದೆ” ಎಂದು ವಿವರಿಸಿದರು.

1726007

ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಶರಣು ಪಪ್ಪಾ ಹಾಗೂ ಸಂಶೋಧಕ–ಸಾಹಿತಿ ಮುಡುಬಿ ಗುಂಡೇರಾವ ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಕನ್ನಡ ಸಾಹಿತ್ಯದ ಬೆಳವಣಿಗೆಗೆ ಸಂಘಟನೆಗಳ ಪಾತ್ರ ಮಹತ್ವದ್ದು ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪುಸ್ತಕ ಪ್ರದರ್ಶನ, ಹಿರಿಯ ಪತ್ರಕರ್ತರಿಗೆ ಗೌರವ ಸಮ್ಮಾನ, ಪರಿಷತ್ತಿನ ಹಿರಿಯ ಸದಸ್ಯರಿಗೆ ವಿಶೇಷ ಸತ್ಕಾರ, ಹಿರಿಯ ಸಾಹಿತಿಗಳಿಗೆ ಗೌರವ ಪುರಸ್ಕಾರ ಹಾಗೂ ಸಂಚಾರಿ ಪೊಲೀಸ್ ಅಧಿಕಾರಿಗಳಿಗೆ ಸತ್ಕಾರ ಕಾರ್ಯಕ್ರಮಗಳು ನಡೆದವು. ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸುವ ಮೂಲಕ ಪರಿಷತ್ತು ತನ್ನ ಸಾಮಾಜಿಕ ಬದ್ಧತೆಯನ್ನು ವ್ಯಕ್ತಪಡಿಸಿತು.

1725980 1

ಕಾರ್ಯಕ್ರಮದಲ್ಲಿ ವೈದ್ಯೆ ಡಾ. ನಾಗವೇಣಿ ಪಾಟೀಲ, ಕಾರ್ಯದರ್ಶಿ ಪ್ರವೀಣ, ಸಮಾಜ ಸೇವಕ ಮಹಾದೇವ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್. ಧನ್ನಿ, ಶಿವರಾಜ ಅಂಡಗಿ, ಕೋಶಾಧ್ಯಕ್ಷ ಶರಣರಾಜ ಛಪ್ಪರಬಂಧಿ, ಸೈಯ್ಯದ ಮುತ್ತಾವಲಿ, ಧರ್ಮರಾಜ ಜವಳಿ, ಪ್ರಭುಲಿಂಗ ಮೂಲಗೆ, ಶಿವಲೀಲಾ ಕಲಗುರ್ಕಿ, ಕಲ್ಯಾಣರಾವ ಶೀಲವಂತ, ಸಿದ್ದಲಿಂಗ ಬಾಳಿ, ಜಯಶ್ರೀ ಜಮಾದಾರ, ಜ್ಯೋತಿ ಕೋಟನೂರ, ರಾಜೇಂದ್ರ ಮಾಡಬೂಳ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಿರಿಗನ್ನಡ ವೇದಿಕೆ, ಸಾಕ್ಷಿ ಪ್ರತಿಷ್ಠಾನ ಸಂಯುಕ್ತಾಶ್ರಯದಲ್ಲಿ ಸಾಹಿತ್ಯ ಸಮಾಗಮ ಕಾರ್ಯಕ್ರಮ

ಕಾರ್ಯಕ್ರಮದ ಅಂಗವಾಗಿ ಕು. ಸುಮನ್ ಮಳಖೇಡಕರ ಅವರಿಂದ ಭರತನಾಟ್ಯ ಪ್ರದರ್ಶನ ನಡೆಯಿತು. ಅವರ ಮನೋಹರ ನೃತ್ಯ ಪ್ರಸ್ತುತಿ ಪ್ರೇಕ್ಷಕರ ಮನಗೆದ್ದಿತು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಒಟ್ಟಾರೆ, ಕನ್ನಡ ಸಾಹಿತ್ಯ ಪರಿಷತ್ತಿನ ೧೧೨ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮವು ಸಾಹಿತ್ಯಾಸಕ್ತರಿಗೆ ಸಾಂಸ್ಕೃತಿಕ ಹಬ್ಬದಂತಾಗಿದ್ದು, ಕನ್ನಡ ಭಾಷೆ ಮತ್ತು ಸಾಹಿತ್ಯದ ಮಹತ್ವವನ್ನು ಮತ್ತೊಮ್ಮೆ ಹಿರಿದಾಗಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...