ಕಲಬುರಗಿ | 2570ನೇ ವೈಶಾಖ ಬುದ್ಧ ಪೂರ್ಣಿಮಾ ದಿನಾಚರಣೆ: ಬುದ್ಧ ತತ್ವಗಳ ಅಳವಡಿಕೆಗೆ ಕರೆ

Date:

ನಗರದಲ್ಲಿ ಶುಕ್ರವಾರ ಸಿದ್ದಾರ್ಥ ಬುದ್ಧ ವಿಹಾರದಲ್ಲಿ 2570ನೇ ವೈಶಾಖ ಬುದ್ಧ ಪೂರ್ಣಿಮಾ ದಿನಾಚರಣೆಯನ್ನು ಪೂಜ್ಯ ಭಂತೇಜಿಯವರಿಂದ ಬುದ್ಧ ವಂದನೆ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿವಿಧ ಭಾಗಗಳಿಂದ ಆಗಮಿಸಿದ ಭಕ್ತರು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ ಬುದ್ಧನ ತತ್ವಗಳನ್ನು ಸ್ಮರಿಸಿದರು.

- Advertisement -

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಮಾತನಾಡಿದ ಪ್ರೋ. ಪುರುಷೋತ್ತಮ ಬಿಳಿಮಲೆ ಅವರು, ಬುದ್ಧನ ತತ್ವಗಳನ್ನು ಕೇವಲ ಪೂಜೆಗೆ ಸೀಮಿತಗೊಳಿಸದೇ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅತ್ಯಗತ್ಯ ಎಂದು ಹೇಳಿದರು. ಕ್ರಿ.ಪೂ. 5–6ನೇ ಶತಮಾನದಲ್ಲಿ ಭಾರತೀಯ ಚಿಂತನೆಗಳಲ್ಲಿ ಲೌಕಿಕ ಹಾಗೂ ಆಲೌಕಿಕ ಧೋರಣೆಗಳು ರೂಪುಗೊಳ್ಳುತ್ತಿದ್ದ ಸಂದರ್ಭದಲ್ಲಿ ಬುದ್ಧನು ವೈಜ್ಞಾನಿಕ ಹಾಗೂ ಜ್ಞಾನಾಧಾರಿತ ಮಾರ್ಗವನ್ನು ತೋರಿಸಿ ಸಮಾಜದಲ್ಲಿ ಹೊಸ ದಿಕ್ಕು ನೀಡಿದನು ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...
1685861

ಭಾರತದ ಜ್ಞಾನ ಪರಂಪರೆಯನ್ನು ಲೌಕಿಕ ದೃಷ್ಟಿಯಲ್ಲಿ ಮುಂದುವರಿಸಿದ ಬುದ್ಧನ ಚಿಂತನೆಗಳನ್ನು ಸಂವಿಧಾನದ ಮೂಲಕ ವ್ಯವಸ್ಥಿತವಾಗಿ ಸಮಾಜಕ್ಕೆ ತಂದುಕೊಟ್ಟವರು ಬಾಬಾ ಸಾಹೇಬ್ ಅಂಬೇಡ್ಕರ್ ಎಂದು ಹೇಳಿದರು. ಸಮಾಜದ ಭವಿಷ್ಯ ನಿರ್ಮಾಣಕ್ಕಾಗಿ ಬುದ್ಧನ ಮಾನವೀಯ ಮೌಲ್ಯಗಳು, ವಿವೇಕ ಮತ್ತು ಸಮಾನತೆಯ ಚಿಂತನೆಗಳನ್ನು ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಭಾರತವು ಕರುಣೆಗೆ ಹೆಸರುವಾಸಿಯಾದ ದೇಶವಾಗಿದ್ದು, ಬುದ್ಧನ ಕಾಲದಿಂದಲೇ ಕರುಣೆಯ ತತ್ವ ಸಮಾಜದಲ್ಲಿ ಬಲವತ್ತಾಗಿದೆ. ಬೌದ್ಧ ಧರ್ಮವು ಮಾನವೀಯತೆ, ಶಾಂತಿ ಮತ್ತು ಸಹಾನುಭೂತಿಯನ್ನು ಸಾರುವ ಮಹತ್ವದ ಮಾರ್ಗವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶದ ಜನರಿಗೆ ಜ್ಞಾನ ಪರಂಪರೆಯ ಮಹತ್ವವನ್ನು ಹೆಚ್ಚು ಹೆಚ್ಚು ತಿಳಿಸುವ ಕಾರ್ಯಗಳನ್ನು ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.

1685867

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿ, ಇಂದಿನ ಸಮಾಜದಲ್ಲಿ ಬುದ್ಧನ ತತ್ವಗಳು ಅತ್ಯಂತ ಅಗತ್ಯವಾಗಿವೆ ಎಂದು ಹೇಳಿದರು. ಪ್ರಜ್ಞೆ ಮತ್ತು ಕರುಣೆಯ ಆಧಾರದ ಮೇಲೆ ಬುದ್ಧನು ಜಗತ್ತಿಗೆ ನೀಡಿದ ಸಂದೇಶವು ವಿಶ್ವಶಾಂತಿಗೆ ದಾರಿ ತೋರಿಸುತ್ತದೆ ಎಂದರು.

ಬುದ್ಧ, ಬಸವ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಚಿಂತನೆಗಳನ್ನು ಸಮಾಜಕ್ಕೆ ತಲುಪಿಸುವುದು ಇಂದಿನ ಅಗತ್ಯವಾಗಿದೆ. ಮನುಷ್ಯನ ಏಳಿಗೆಗಾಗಿ ಧರ್ಮ ಹುಟ್ಟಿದೆ ಹೊರತು ಮನುಷ್ಯ ಧರ್ಮಕ್ಕಾಗಿ ಹುಟ್ಟಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

1685866

ಭಾರತದ ಏಕತೆಯನ್ನು ಯಾವುದೇ ವೇದ-ಪುರಾಣಗಳು ಸಾಧಿಸಿಲ್ಲ, ದೇಶದ ಸಂವಿಧಾನವೇ ನಮ್ಮನ್ನು ಒಂದಾಗಿಸಿದೆ. ಮತದಾನದ ಹಕ್ಕು ಸೇರಿದಂತೆ ಅನೇಕ ಮೂಲಭೂತ ಹಕ್ಕುಗಳನ್ನು ಅಂಬೇಡ್ಕರ್ ಅವರ ಸಂವಿಧಾನ ನೀಡಿದೆ ಎಂದು ಅವರು ಅಭಿಪ್ರಾಯಪಟ್ಟರು. ಬುದ್ಧನ ದಮ್ಮವು ಶಾಂತಿ ಮತ್ತು ಸತ್ಯದ ಮಾರ್ಗವನ್ನು ಜಗತ್ತಿಗೆ ತೋರಿಸಿದ್ದು, ಅಶೋಕ ಚಕ್ರದ ಮೂಲಕ ಭಾರತದ ತ್ರಿವರ್ಣ ಧ್ವಜದಲ್ಲಿಯೂ ಆ ತತ್ವ ಪ್ರತಿಬಿಂಬಿತವಾಗಿದೆ ಎಂದು ಹೇಳಿದರು.

ಬುದ್ಧ ವಿಹಾರಗಳ ನಿರ್ಮಾಣದ ಉದ್ದೇಶವೇ ಜನರಿಗೆ ಸತ್ಯದ ಮಾರ್ಗವನ್ನು ತಿಳಿಸುವುದು ಎಂದು ಅವರು ಹೇಳಿದರು. ಸಮಾಜದಲ್ಲಿ ಸಮಾನತೆ ಮತ್ತು ಶಾಂತಿ ಸ್ಥಾಪಿಸಲು ಬುದ್ಧನ ಮಾರ್ಗವನ್ನು ಅನುಸರಿಸುವುದು ಅಗತ್ಯ ಎಂದು ಅಭಿಪ್ರಾಯಪಟ್ಟರು.

ಇದನ್ನು ಓದಿದ್ದೀರಾ? ಯಾದಗಿರಿ | ಬಿಸಿಲಿನ ತಾಪಕ್ಕೆ ಕುಸಿದು ಬಿದ್ದು ಕಾರ್ಮಿಕ ಸಾವು

ಕಾರ್ಯಕ್ರಮವನ್ನು ಡಾ. ಎಂ.ಬಿ. ಒಟ್ಟಿ ನಿರೂಪಿಸಿದರು. ಪ್ರೋ. ಅಪ್ಪುಗಿರಿ ಸೋಮಶೇಖರ್ ಸ್ವಾಗತಿಸಿದರು. ಚಂದ್ರಶೇಖರ ದೊಡ್ಡಮನಿ ವಂದಿಸಿದರು.

ಈ ಸಂದರ್ಭದಲ್ಲಿ ಶಾಸಕ ಬಿ.ಆರ್. ಪಾಟೀಲ್, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ್, ಸಚಿವ ಶರಣಪ್ರಕಾಶ ಪಾಟೀಲ್, ತಿಪ್ಪಣ್ಣಪ್ಪ ಕಮಕನೂರ್, ಸುರೇಶ್ ಕನೆಕರ್, ಲಕ್ಷ್ಮೀ ಕಾಂತ ಹುಬಳಿ, ಸೇರಿದಂತೆ ಅನೇಕ ಗಣ್ಯರು ಹಾಗೂ ದಮ್ಮ ಉಪಸಾಕ, ಉಪಾಸಕಿಯರು ಪಾಲ್ಗೊಂಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಸೆ.17ರಂದು ಕಲಬುರಗಿಯಲ್ಲಿ ಸಂಕಲ್ಪ ಸಮಾವೇಶ

ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿ ಕೇಂದ್ರ ಸಮಿತಿ ವತಿಯಿಂದ...

ಕಲಬುರಗಿ | ಕಳ್ಳತನ ಪ್ರಕರಣ; ನಾಲ್ವರು ಆರೋಪಿಗಳ ಬಂಧನ

ಮೋಟಾರ್‌ಸೈಕಲ್ ಹಾಗೂ ಕೇಬಲ್ ವೈರ್ ಕಳ್ಳತನಕ್ಕೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಕರಣಗಳನ್ನು...

ಕಲಬುರಗಿ | ರಸ್ತೆ ಬದಿಯಲ್ಲಿ ಲಾರಿ ನಿಲುಗಡೆಗೆ ಕಡಿವಾಣ: ಪೊಲೀಸರ ಕಟ್ಟುನಿಟ್ಟಿನ ಸೂಚನೆ

ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಸಾರ್ವಜನಿಕರ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಸೇಡಂ ಪೊಲೀಸ್...

ಕಲಬುರಗಿ | ಸಂಕನೂರ ಗುಡ್ಡದಲ್ಲಿ ಒಂದೇ ಮರದ ಬಳಿ ಇಬ್ಬರ ಶವ: ಪ್ರೇಮದ ಶಂಕೆ, ಸಾವಿನ ಸುತ್ತ ನಿಗೂಢತೆ

ಚಿತ್ತಾಪುರ ತಾಲೂಕಿನ ಸಂಕನೂರ ಗುಡ್ಡದ ನಿರ್ಜನ ಪ್ರದೇಶದಲ್ಲಿ ಒಂದೇ ಮರದ ಬಳಿ...