ಕಲಬುರಗಿ | ಕಾರಿನ ಡಿಕ್ಕಿಯಲ್ಲಿ ಸಿಲುಕಿ 3 ವರ್ಷದ ಬಾಲಕ ದಾರುಣ ಸಾವು!

Date:

ಶಹಾಬಾದ್ ತಾಲೂಕಿನ ತೋನಸಹಳ್ಳಿ (ಎಸ್) ಗ್ರಾಮದಲ್ಲಿ ಕಾರಿನ ಡಿಕ್ಕಿಯೊಳಗೆ ಆಕಸ್ಮಿಕವಾಗಿ ಸಿಲುಕಿಕೊಂಡು 3 ವರ್ಷದ ಬಾಲಕ ಮೃತಪಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ.

- Advertisement -

ಮೃತ ಬಾಲಕನನ್ನು ಬಸವ ಪ್ರಭು (3) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮನೆಯ ಮುಂಭಾಗ ಆಟವಾಡುತ್ತಿದ್ದ ಬಸವ ಪ್ರಭು, ಅಂಗಳದಲ್ಲಿ ನಿಲ್ಲಿಸಿದ್ದ ಕಾರಿನ ಡಿಕ್ಕಿಯೊಳಗೆ ಹೋಗಿದ್ದಾನೆ. ಈ ವೇಳೆ ಡಿಕ್ಕಿ ಆಕಸ್ಮಿಕವಾಗಿ ಲಾಕ್ ಆಗಿದ್ದು, ಬಾಲಕ ಹೊರಬರಲು ಸಾಧ್ಯವಾಗದೆ ಒಳಗೇ ಸಿಲುಕಿಕೊಂಡಿದ್ದಾನೆ ಎನ್ನಲಾಗಿದೆ.

ಬಾಲಕ ಬಹಳ ಸಮಯದವರೆಗೆ ಕಾಣಿಸದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹಾಗೂ ಗ್ರಾಮಸ್ಥರು ಗ್ರಾಮದೆಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಎಲ್ಲೆಡೆ ಹುಡುಕಿದರೂ ಪತ್ತೆಯಾಗದ ಕಾರಣ ಅನುಮಾನಗೊಂಡ ಕುಟುಂಬಸ್ಥರು ಕಾರಿನ ಡಿಕ್ಕಿಯನ್ನು ತೆರೆದು ಪರಿಶೀಲಿಸಿದಾಗ, ಅದರೊಳಗೆ ಬಸವ ಪ್ರಭು ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ಇದನ್ನು ಓದಿದ್ದೀರಾ? ಕಲಬುರಗಿ | ಗ್ರಾ.ಪಂ, ತಾ.ಪಂ, ಜಿ.ಪಂ ಚುನಾವಣೆ ನಡೆಸುವಂತೆ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟ ಆಗ್ರಹ

ತಕ್ಷಣ ಬಾಲಕನನ್ನು ಹೊರತೆಗೆದು ರಕ್ಷಿಸಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಉಸಿರುಗಟ್ಟಿ ಮೃತಪಟ್ಟಿರುವುದು ತಿಳಿದುಬಂದಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಪ್ರಕರಣ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...