ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ನೀಡಲಾಗುವ ಪ್ರತಿಷ್ಠಿತ “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ”ಗೆ ಕಲಬುರಗಿ ಜಿಲ್ಲೆಯ ಹಿರಿಯ ಹೋರಾಟಗಾರರಾದ ಎ. ಬಿ. ಹೊಸಮನಿ ಅವರನ್ನು ಆಯ್ಕೆಯಾಗಿದ್ದಾರೆ.
ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಸಂಚಾಲಕ ಬಾಲಾಜಿ ಎಂ. ಕಾಂಬಳೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು ‘ಎ ಬಿ ಹೊಸಮನಿ ಅವರು ಕಳೆದ ಸುಮಾರು 35 ವರ್ಷಗಳಿಂದ ಶೋಷಿತರ ಪರವಾಗಿ ಹೋರಾಟ ನಡೆಸುತ್ತಾ ಸಾಮಾಜಿಕ ನ್ಯಾಯಕ್ಕಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಂಘಟಕರಾಗಿ ತಮ್ಮದೇ ಆದ ಗುರುತು ಮೂಡಿಸಿಕೊಂಡಿರುವ ಅವರು ಸಮಾಜದ ಅಸಮಾನತೆಗಳನ್ನು ನಿವಾರಿಸಲು ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಮಾಜ ಚಿಂತಕರೂ, ಸಾಹಿತಿಗಳೂ ಆಗಿರುವ ಅವರು ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಆಶಯಗಳನ್ನು ಸಾಕಾರಗೊಳಿಸುವ ದಿಶೆಯಲ್ಲಿ ಅವಿರತವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೋರಾಟವೇ ಅವರ ಬದುಕಿನ ಅವಿಭಾಜ್ಯ ಅಂಗವಾಗಿದ್ದು, ಅವರ ಸೇವಾ ಕಾರ್ಯವನ್ನು ಗುರುತಿಸಿ ಈ ವರ್ಷದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಲಾರಿ, ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಮೃತ್ಯು
‘ಇದೇ ತಿಂಗಳ 11ರಂದು ವಿಜಯಪುರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಮಹಾತ್ಮ ಜ್ಯೋತಿಬಾ ಫುಲೆ ಅವರ 199ನೇ ಜಯಂತಿ ಅಂಗವಾಗಿ ನಡೆಯುವ ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಎ. ಬಿ. ಹೊಸಮನಿ ಅವರಿಗೆ “ಮಹಾತ್ಮ ಫುಲೆ ಕ್ರಾಂತಿಜ್ಯೋತಿ ಪ್ರಶಸ್ತಿ” ಪ್ರದಾನ ಮಾಡಲಾಗುತ್ತದೆ ಎಂದು ಅವರು ಹೇಳಿದರು.





