ಕಲಬುರಗಿ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

Date:

ಅಫಜಲಪುರ ತಾಲೂಕಿನ ಅತನೂರ ಗ್ರಾಮದ ಆರ್‌ಎಂಎಸ್ ಶಾಲೆ ಸಮೀಪ ಸೋಮವಾರ ಕೆಎಸ್‌ಆರ್‌ಟಿಸಿ ಬಸ್‌ ಒಂದು ಆಕಸ್ಮಿಕವಾಗಿ ರಸ್ತೆ ಕೆಳಭಾಗದ ಹೊಲಕ್ಕೆ ಇಳಿದ ಘಟನೆ ಸಂಭವಿಸಿದ್ದು, ಚಾಲಕನ ಸಮಯಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ.

- Advertisement -

ಅಫಜಲಪುರದಿಂದ ಕಲಬುರಗಿಯತ್ತ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಪಕ್ಕದ ಹೊಲಕ್ಕೆ ಇಳಿದ ಪರಿಣಾಮ ಕೆಲಕಾಲ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಆದರೆ ಚಾಲಕ ಧೈರ್ಯ ಮತ್ತು ಚಾಕಚಕ್ಯತೆಯಿಂದ ವಾಹನವನ್ನು ನಿಯಂತ್ರಣಕ್ಕೆ ತಂದು ಸುರಕ್ಷಿತವಾಗಿ ನಿಲ್ಲಿಸಿದ ಕಾರಣ ಯಾವುದೇ ಪ್ರಾಣಹಾನಿ ಅಥವಾ ಗಾಯಗಳು ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕರಸ್ಥಲದ ಲಿಂಗ ಮತ್ತು ಬೆರಳಿನ ಮಸಿ: ಸ್ಥಾವರ ಪ್ರಭುತ್ವದ...

ಭಾರತೀಯ ಸಮಾಜದ ಹಳ್ಳಿಯ ಭೌತಿಕ ವಿನ್ಯಾಸವನ್ನು ಗಮನಿಸಿದರೆ ಅದೊಂದು ಅಪ್ಪಟ ಘನೀಕೃತ ‘ಸ್ಥಾವರ’ ಮಾದರಿ. ಹಳ್ಳಿಯ ಹೃದಯಭಾಗದಲ್ಲಿ ಕೇವಲ ಪೂಜೆಯ ತಾಣವಲ್ಲ, ಇಡೀ ನೆಲದ ಮೇಲೆ ಅಧಿಪತ್ಯ ಸಾಧಿಸುವ ಕ್ಷೇತ್ರಾಧಿಪತಿಯ ‘ದೇವಸ್ಥಾನ’ ವಿರಾಜಮಾನವಾಗಿರುತ್ತದೆ....

ಅತಿದೊಡ್ಡ ಕ್ರಿಪ್ಟೋ ದರೋಡೆ; ₹60 ಸಾವಿರ ಕೋಟಿ ಏನಿದು,...

ದೋಚಿದ ಇಷ್ಟೊಂದು ಅಗಾಧ ಪ್ರಮಾಣದ ಹಣವನ್ನು ಮರೆಮಾಚಲು ಹ್ಯಾಕರ್‌ಗಳು ಅತ್ಯಂತ ಸಂಕೀರ್ಣವಾದ ಜಾಲವನ್ನು ಹಾಗೂ ತಂತ್ರಗಾರಿಕೆಯನ್ನು ಬಳಸಿದ್ದಾರೆ. ಬಿಡುಗಡೆಯಾಗಿರುವ ತಾಂತ್ರಿಕ ವಿಶ್ಲೇಷಣೆಯ ಪ್ರಕಾರ, ಬೈನಾನ್ಸ್‌ನಿಂದ ಕದ್ದ ಈ ಹಣವನ್ನು ಹ್ಯಾಕರ್‌ಗಳು ಈ ಹಿಂದೆ...

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಘಟನೆಯ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಭಯಭೀತರಾದರೂ, ಚಾಲಕನ ಸಮರ್ಥ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಈ ಕುರಿತು ಸಾರಿಗೆ ಘಟಕದ ವ್ಯವಸ್ಥಾಪಕ ಎ.ವಿ. ಭೋವಿ ಪ್ರತಿಕ್ರಿಯಿಸಿ, “ಘಟನೆ ನಡೆದ ಸ್ಥಳದಲ್ಲಿ ರಸ್ತೆ ಇಕ್ಕಟ್ಟಾಗಿದ್ದು, ಎದುರಿನಿಂದ ವಾಹನ ಬರುತ್ತಿದ್ದ ಕಾರಣ ಮುನ್ನೆಚ್ಚರಿಕೆಯಾಗಿ ಚಾಲಕ ಬಸ್ಸನ್ನು ರಸ್ತೆ ಪಕ್ಕಕ್ಕೆ ಇಳಿಸಿದ್ದಾರೆ. ಯಾವುದೇ ಹಾನಿ ಸಂಭವಿಸಿಲ್ಲ. ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ,” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಕೌಟುಂಬಿಕ ಕಲಹ : ಪತ್ನಿ ಕೊಂದು ಮಗುವಿನೊಂದಿಗೆ ಬಾವಿಗೆ ಹಾರಿದ ಪತಿ

ಘಟನಾ ಸ್ಥಳಕ್ಕೆ ಸ್ಥಳೀಯರು ತಕ್ಷಣ ಆಗಮಿಸಿ ಸಹಾಯ ಕಾರ್ಯಗಳಲ್ಲಿ ಪಾಲ್ಗೊಂಡರು. ಬಸ್ ಚಾಲಕನ ಸಮಯೋಚಿತ ನಿರ್ಧಾರ ಮತ್ತು ಸಮರ್ಥ ಕಾರ್ಯಾಚರಣೆಯಿಂದ ಅನೇಕ ಪ್ರಯಾಣಿಕರ ಜೀವಗಳು ಸುರಕ್ಷಿತವಾಗಿದ್ದು, ಸಾರ್ವಜನಿಕರು ಚಾಲಕನ ಕಾರ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ವಿರುದ್ಧ ಜನಾಕ್ರೋಶ; ಸಮಸ್ಯೆ ಪರಿಹಾರಕ್ಕೆ ಕಲ್ಯಾಣ ಜನಪರ ವೇದಿಕೆ ಆಗ್ರಹ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...