ಕಲಬುರಗಿ | ಕರ್ತವ್ಯದಲ್ಲಿದ್ದ ಮಹಿಳೆಗೆ ಬಸ್‌ ಡಿಕ್ಕಿ: ಜೇವರ್ಗಿ ಬಸ್ ನಿಲ್ದಾಣದಲ್ಲಿ ದುರಂತ

Date:

ಕಸ ಸಂಗ್ರಹಣೆ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೇವರ್ಗಿ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

- Advertisement -

ಮೃತರನ್ನು ಜೇವರ್ಗಿ ಪಟ್ಟಣದ ನಿವಾಸಿ ಮಾನಮ್ಮ ಚಂದ್ರಕಾಂತ್ (50) ಎಂದು ಗುರುತಿಸಲಾಗಿದೆ. ಹಲವು ವರ್ಷಗಳಿಂದ ಅವರು ಜೇವರ್ಗಿ ಬಸ್ ನಿಲ್ದಾಣದಲ್ಲಿ ಕಸ ಸಂಗ್ರಹಿಸುವ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಕಾಳಗಿ ಡಿಪೋಗೆ ಸೇರಿದ ಬಸ್, ಜೇವರ್ಗಿ ಬಸ್ ನಿಲ್ದಾಣದ ವಿಜಯಪುರ ಮಾರ್ಗದ ಪ್ಲಾಟ್‌ಫಾರ್ಮ್ ಬಳಿ ಕಸ ಗುಡಿಸುತ್ತಿದ್ದ ಮಾನಮ್ಮ ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿ, ಮೃತರ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಬಸ್ ಡಿಪೋ ಎದುರು ಪ್ರತಿಭಟನೆ ನಡೆಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಸಾರ್ವಜನಿಕರ ದಾಹ ನೀಗಿಸಲು ಉಚಿತ ತಂಪು ನೀರಿನ ವ್ಯವಸ್ಥೆ ಕಲ್ಪಿಸಿದ ಡಾ. ಫಾರೂಕ್ ಮಣ್ಣೂರ

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪೊಲೀಸ್ ಉಪನಿರೀಕ್ಷಕ ಗಜಾನಂದ ಬಿರಾದಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...

ಕಲಬುರಗಿ | ಕ್ಷೇತ್ರಗಳ ಮರುವಿಂಗಡಣೆ ಇಲ್ಲದೆ ಮಹಿಳಾ ಮೀಸಲಾತಿ ಜಾರಿಗೊಳಿಸಿ: ಮಲ್ಲಿಕಾರ್ಜುನ ಖರ್ಗೆ

ಕ್ಷೇತ್ರಗಳ ಮರುವಿಂಗಡಣೆ ಮಾಡದೆಯೇ ಮಹಿಳಾ ಮೀಸಲಾತಿಯನ್ನು ತಕ್ಷಣ ಜಾರಿಗೊಳಿಸಬೇಕು. ಈ ವಿಚಾರದಲ್ಲಿ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಕಲಬುರಗಿ | ಕಬ್ಬಿನ ಬೆಲೆ ನಿಗದಿ ಹೋರಾಟ : ಪ್ರತಿಭಟನೆ ಹಿಂಪಡೆದ ರೈತರು

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಬೆಂಬಲ ಬೆಲೆ ನಿಗದಿಪಡಿಸುವುದು, ಕಬ್ಬಿಗೆ...