ಕಲಬುರಗಿ | ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

Date:

ಸೇಡಂ ತಾಲೂಕಿನ ಬಿರನಹಳ್ಳಿ ಗ್ರಾಮದ ಸಮೀಪ ಹರಿಯುವ ಕಾಗಿಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.

- Advertisement -

ಶಿವಪ್ರಕಾಶ ಬೆಳಮಗಿ (27) ನಾಪತ್ತೆಯಾಗಿರುವ ಯುವಕನಾಗಿದ್ದು, ಅವರು ಆಳಂದ ತಾಲೂಕಿನ ಬೆಳಮಗಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಬಿರನಹಳ್ಳಿ ಗ್ರಾಮದ ಐದು ಮಂದಿ ಗೆಳೆಯರೊಂದಿಗೆ ಪಾರ್ಟಿ ಮುಗಿಸಿಕೊಂಡು ಕಾಗಿಣಾ ನದಿಗೆ ಈಜಲು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೂಲಗಳ ಪ್ರಕಾರ, ಶಿವಪ್ರಕಾಶ ಅವರು ಜಿಯೋ ಪೆಟ್ರೋಲ್ ಬಂಕ್‌ನಲ್ಲಿ ಲಾರಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಯಾಂತ್ರಿಕ ಬೋಟ್ ಸಹಾಯದಿಂದ ನದಿಯಲ್ಲಿ ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಅಗ್ನಿಶಾಮಕ ದಳದ ಪ್ರಭಾರಿ ಠಾಣಾಧಿಕಾರಿ ಬಸಪ್ಪ ಎಂ, ಪ್ರಮುಖ ಅಗ್ನಿಶಾಮಕ ಶರಣಯ್ಯ ಗುತ್ತೇದಾರ್, ಮಳಖೇಡ ಎಎಸ್‌ಐ ಯಲಗುರೇಶ, ಸಂಜು ಕುಮಾರ್, ಪೊಲೀಸ್ ಶರಣಪ್ಪ, ಡಿಎಂ ವಾಜಿದ್, ಅಗ್ನಿಶಾಮಕ ಚಾಲಕ ಮೂಲಿಮನಿ, ಸುನಿಲ್, ಕಿರಣ್ ಕೆ ಹಾಗೂ ಯುವರಾಜ್ ಶೋಧ ಕಾರ್ಯದಲ್ಲಿ ಪಾಲ್ಗೊಂಡಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ : ಕುಡಿದ ಮತ್ತಿನಲ್ಲಿ ಚಾಕು ಇರಿದು ವ್ಯಕ್ತಿ ಕೊಲೆ

ಈ ಸಂಬಂಧ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪಡಿತರ ಅಕ್ಕಿ ವಾಹನ ಬಿಡುಗಡೆ ಆರೋಪ: ಆಳಂದ ಪಿಐ ಸೇರಿ ನಾಲ್ವರು ಅಮಾನತು

ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...