ಕಲಬುರಗಿ | ಜನಗಣತಿ ಕರ್ತವ್ಯಕ್ಕೆ ಗೈರು: ನಿರ್ಲಕ್ಷ್ಯ ತೋರಿದ ಶಿಕ್ಷಕಿ ಅಮಾನತು

Date:

ಭಾರತ ಜನಗಣತಿ ಕಾರ್ಯ-2027ಕ್ಕೆ ನಿಯೋಜನೆಗೊಂಡಿದ್ದರೂ ಕರ್ತವ್ಯಕ್ಕೆ ಹಾಜರಾಗದೆ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ತೋರಿದ ಆರೋಪದ ಮೇಲೆ ಕಲಬುರಗಿ ದಕ್ಷಿಣ ವಲಯದ ಧರ್ಮಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಜಮುನಾ ಸರಫ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -

ಈ ಸಂಬಂಧ ಕಲಬುರಗಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ ಆದೇಶ ಹೊರಡಿಸಿದ್ದು, ಜನಗಣತಿ ಕಾಯ್ದೆ-1948ರ ಸೆಕ್ಷನ್ 11ರಡಿ ಅಮಾನತು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫೆಬ್ರವರಿ 27ರಂದು ನಡೆದ ಸಭೆಯ ನಿರ್ಣಯದಂತೆ ಏಪ್ರಿಲ್ 5ರಿಂದ 10ರವರೆಗೆ ನೌಕರರಿಗೆ ತರಬೇತಿ ನೀಡಿ, ಏಪ್ರಿಲ್ 16ರಿಂದ ಜನಗಣತಿ ಕಾರ್ಯಕ್ಕೆ ನಿಯೋಜಿಸಲಾಗಿತ್ತು. ಆದರೆ ಜಮುನಾ ಸರಫ್ ಅವರು ಕರ್ತವ್ಯಕ್ಕೆ ಗೈರಾಗಿದ್ದು, ಇದರಿಂದ ಜನಗಣತಿ ಕಾರ್ಯಕ್ಕೆ ಅಡಚಣೆ ಉಂಟಾಗಿದೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಕಲಬುರಗಿ ತಹಶೀಲ್ದಾರರು ಹಾಗೂ ಜನಗಣತಿ ಚಾರ್ಜ್ ಅಧಿಕಾರಿಗಳು ಶಿಕ್ಷಕಿಗೆ ಕಾರಣ ಕೇಳುವ ನೊಟೀಸ್ ನೀಡಿದ್ದರು. ಆದರೆ ನೊಟೀಸ್‌ಗೆ ಯಾವುದೇ ಉತ್ತರ ನೀಡದ ಕಾರಣ, ತಹಶೀಲ್ದಾರರ ವರದಿ ಆಧಾರವಾಗಿ ಅಮಾನತು ಆದೇಶ ಹೊರಡಿಸಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಗುಂಡು ಹಾರಿಸಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನ ಬರ್ಬರ ಹತ್ಯೆ

ಅಮಾನತಿನ ಅವಧಿಯಲ್ಲಿ ಸಂಬಂಧಿತ ನೌಕರರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನವನ್ನು ತೊರೆಯಬಾರದು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಜತೆಗೆ, ಅಮಾನತಿನ ಅವಧಿಯಲ್ಲಿ ಕರ್ನಾಟಕ ನಾಗರಿಕ ಸೇವಾ ನಿಯಮ 98(ಎ) ಮತ್ತು ಸರ್ಕಾರದ ಅಧಿಸೂಚನೆ ದಿನಾಂಕ 10.08.1987ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅವರು ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...