ಕೇಂದ್ರ ಬಸ್ ನಿಲ್ದಾಣದಲ್ಲಿ ಸೋಮವಾರ ಮಧ್ಯಾಹ್ನ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಮೃತರನ್ನು ತಾಲೂಕಿನ ಹೇರೂರ ಬಿ. ಗ್ರಾಮದ ಮಹಾದೇವಿ ಸಿಡಗಂಟಿ (65) ಎಂದು ಗುರುತಿಸಲಾಗಿದೆ. ಗಂಗಾನಗರದಲ್ಲಿರುವ ಮಗನ ಮನೆಯಲ್ಲಿ ವಾಸಿಸುತ್ತಿದ್ದ ಅವರು, ಎರಡು ದಿನಗಳ ಹಿಂದೆ ಮಗಳ ಮನೆಗೆ ತೆರಳಿದ್ದು, ಸೋಮವಾರ ಸ್ವಗ್ರಾಮಕ್ಕೆ ಹಿಂತಿರುಗಲು ಬಸ್ ನಿಲ್ದಾಣಕ್ಕೆ ಬಂದಿದ್ದರು.
ಮಧ್ಯಾಹ್ನ ಸುಮಾರು 2.30ರ ವೇಳೆಯಲ್ಲಿ ಪ್ಲಾಟ್‌ಫಾರ್ಮ್ ನಂ.6ರಲ್ಲಿ ನಿಂತಿದ್ದ ಬಸ್‌ನ್ನು ಚಾಲಕ ಹಿಂದಕ್ಕೆ ತೆಗೆದುಕೊಳ್ಳುವಾಗ ಅವರಿಗೆ ಡಿಕ್ಕಿ ಹೊಡೆದಿದೆ. ತಕ್ಷಣವೇ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಇದನ್ನು ಓದಿದ್ದೀರಾ? ಕಲಬುರಗಿ | ಸಿಡಿಲು ಬಡಿದು ಯುವಕ ಮೃತ
ಈ ಕುರಿತು ಸಂಚಾರ ಠಾಣೆ-1ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.





