ಕಲಬುರಗಿ | ₹1 ಲಕ್ಷ ಲಂಚ ಪಡೆಕ ಆರೋಪ : ತಹಸೀಲ್ದಾರ್‌ ಸೇರಿ ಇಬ್ಬರಿಗೆ 4 ವರ್ಷ ಜೈಲು

Date:

ನಾಡ ಕಚೇರಿ ಸಿಬ್ಬಂದಿಯಿಂದ ₹1 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ತಹಶೀಲ್ದಾ‌ರ್ ಶಶಿಕಲಾ ಪಾದಗಟ್ಟಿ ಸೇರಿದಂತೆ ಇಬ್ಬರಿಗೆ ಕಲಬುರಗಿ ಜಿಲ್ಲಾ ನ್ಯಾಯಾಲಯವು 4 ವರ್ಷ ಜೈಲು ಶಿಕ್ಷೆ ಹಾಗೂ ತಲಾ ₹20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

- Advertisement -

2017ರಲ್ಲಿ ತಹಸೀಲ್ದಾರ್‌ ಶಶಿಕಲಾ ಪಾದಗಟ್ಟಿ ಹಾಗೂ ತಹಶೀಲ್ದಾರ್ ಪರವಾಗಿ ಲಂಚದ ಹಣ ಪಡೆದಿದ್ದ ಶಿವಾನಂದ ಜಮಖಂಡಿ ಶಿಕ್ಷೆಗೆ ಗುರಿಯಾದವರು. 2017ರಲ್ಲಿ ಅಫಜಲಪುರದ ತಹಶೀಲ್ದಾರ್ ಆಗಿದ್ದ ವೇಳೆ ಪ್ರಕರಣ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಶಶಿಕಲಾ ಅವರು ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಅವರಿಗೆ ಕಡ್ಡಾಯ ನಿವೃತ್ತಿಗೆ ಸೂಚಿಸಿ, ಕೆಲಸದಿಂದ ಬಿಡುಗಡೆ ಮಾಡಿತ್ತು.

ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಡೇಟಾ ಎಂಟ್ರಿ ಆಪರೇಟರ್ ಆಗಿದ್ದ ಶಿವಲಿಂಗಯ್ಯ ಬಸಯ್ಯ ಮಠ ಅವರು ಕೆಲಸ ಮಾಡಿಕೊಡಲು ಹಣ ಪಡೆಯುತ್ತಿರುವ ಬಗ್ಗೆ ಸಾರ್ವಜನಿಕರು ತಹಶೀಲ್ದಾರ್‌ ಶಶಿಕಲಾ ಅವರಿಗೆ ದೂರು ನೀಡಿದ್ದರು. ಈ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಶಿವಲಿಂಗಯ್ಯ ಕೋರಿದಾಗ, ಶಶಿಕಲಾ ಅವರು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ʼಲಂಚದ ಹಣವನ್ನು ಶಿವಾನಂದ ಜಮಖಂಡಿಗೆ ತಲುಪಿಸಬೇಕು. ಇಲ್ಲದಿದ್ದರೆ ಬೇರೆಯವರನ್ನು ನೇಮಿಸಿಕೊಳ್ಳಲಾಗುವುದು” ಎಂದು ಬೆದರಿಸಿದ್ದರು.

ಈ ಕುರಿತು ಶಿವಲಿಂಗಯ್ಯ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. 2017ರ ಆಗಸ್ಟ್ 31ರಂದು ಶಿವಲಿಂಗಯ್ಯ ನೀಡಿದ ಲಂಚದ ಹಣವನ್ನು ಶಿವಾನಂದ ಜಮಖಂಡಿ, ಶಶಿಕಲಾ ಅವರಿಗೆ ತಲುಪಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದರು.

ಇದನ್ನೂ ಓದಿ : ತಡವಾದ ಮುಂಗಾರು: ಮೊದಲ ಬೆಳೆ ಖೋತಾ, ರೈತರ ಕೈ ಹಿಡಿಯುವುದೇ ಜುಲೈ ಮಳೆ?

ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಪ್ರಕರಣ ದಾಖಲಿಸಿದ್ದರು. ತನಿಖೆ ನಡೆಸಿದ್ದ ಕೃಷ್ಣಪ್ಪ ಕಲ್ಲದೇವರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಇಬ್ಬರು ಆರೋಪಿಗಳಿಗೂ ಶಿಕ್ಷೆ ವಿಧಿಸಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕ ಅಶೋಕ ಎಸ್.ಚಾಂದಕವಠ ವಾದ ಮಂಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...