ಕಲಬುರಗಿ | ಭೂಸ್ವಾಧೀನ ಪರಿಹಾರ ವಿಳಂಬ ಆರೋಪ: ಜಿಲ್ಲಾಧಿಕಾರಿ ಕಾರು ಜಪ್ತಿ

Date:

ಕಲಬುರಗಿ ನಗರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಬಳಿಕ ಹಲವು ವರ್ಷಗಳಿಂದ ಪರಿಹಾರ ಪಾವತಿಸದೆ ವಿಳಂಬ ಮಾಡಿರುವ ಪ್ರಕರಣದಲ್ಲಿ ಜಿಲ್ಲಾಧಿಕಾರಿಗಳ ಅಧಿಕೃತ ವಾಹನವನ್ನು ಜಪ್ತಿ ಮಾಡುವಂತೆ ಪ್ರಧಾನ ಸಿವಿಲ್ ನ್ಯಾಯಾಲಯ ಆದೇಶಿಸಿದೆ.

- Advertisement -

ದಿವಾಣಿ ಹಿರಿಯ ಶ್ರೇಣಿ ನ್ಯಾಯಾಧೀಶರು ಕೇಸ್ ನಂ. 59/19 ವಿಚಾರಣೆ ನಡೆಸಿ, ಪರಿಹಾರ ಪಾವತಿಯಲ್ಲಿ ಉಂಟಾದ ದೀರ್ಘಕಾಲದ ವಿಳಂಬವನ್ನು ಗಂಭೀರವಾಗಿ ಪರಿಗಣಿಸಿದರು. ಅದರಂತೆ ಜಿಲ್ಲಾಧಿಕಾರಿಗಳ ಅಧಿಕೃತ ವಾಹನ ಇನ್ನೋವಾ ಕ್ರಿಷ್ಟಾ(ಕೆ.ಎ 32 ಜಿ 9990) ಕಾರನ್ನು ಜಪ್ತಿ ಮಾಡಲು ಆದೇಶ ಹೊರಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪ್ರಕಾಶ್ ಮಕಲಪ್ಪ ಎಂಬ ಭೂಸ್ವಾಮಿ, ತಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದರೂ ಪರಿಹಾರ ನೀಡದಿರುವ ಕುರಿತು ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣ ಹಲವು ವರ್ಷಗಳಿಂದ ಮುಂದುವರೆದಿದ್ದರೂ ಪರಿಹಾರ ಪಾವತಿ ಪ್ರಕ್ರಿಯೆಯಲ್ಲಿ ಸ್ಪಷ್ಟ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ನ್ಯಾಯಾಲಯ ಕಠಿಣ ನಿಲುವು ತಾಳಿದೆ.

ಆದೇಶ ಹೊರಬಿದ್ದ ಬಳಿಕ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಹಾಗೂ ಸಹಾಯಕ ಆಯುಕ್ತ ಸಾಹಿತ್ಯ ಆಲದಕಟ್ಟಿ ನ್ಯಾಯಾಲಯಕ್ಕೆ ಆಗಮಿಸಿ ವಕೀಲರೊಂದಿಗೆ ಚರ್ಚೆ ನಡೆಸಿ ಪರಿಸ್ಥಿತಿ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ಸುದ್ದಿ ಓದಿದ್ದೀರಾ? ಸೇಡಂ | ಕಾಳಸಂತೆಯಲ್ಲಿ ಪಡಿತರ ಮಾರಾಟ: ತಲಾ ಒಂದು ಕೆಜಿ ಅಕ್ಕಿ, 20 ರೂ. ನೀಡಬೇಕೆಂದು ಡೀಲರ್‌ ಧಮ್ಕಿ

ನ್ಯಾಯಾಲಯದ ಈ ಕ್ರಮ ಜಿಲ್ಲಾಡಳಿತ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಭೂಸ್ವಾಧೀನ ಪ್ರಕರಣಗಳಲ್ಲಿ ಪರಿಹಾರ ಪಾವತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವ ಅಗತ್ಯತೆಯನ್ನು ಮತ್ತೊಮ್ಮೆ ಒತ್ತಿಹೇಳಿದಂತಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯ ಕೊಲೆ: ಪತ್ನಿ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ

ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಲು ಸಂಚು ರೂಪಿಸಿ, ಕೃತ್ಯ...

ಕಲಬುರಗಿ | ಇಸ್ಪೀಟ್ ಜೂಜಾಟ: 5 ಮಂದಿ ಬಂಧನ; ₹2,040 ನಗದು ಜಪ್ತಿ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಐವರು ಆರೋಪಿಗಳನ್ನು ರಾಘವೇಂದ್ರ ನಗರ...

ಕಲಬುರಗಿ | ಬೆಣ್ಣೂರ ಬಿ ಗ್ರಾಮಕ್ಕೆ ಪ್ರತ್ಯೇಕ ಬಸ್‌ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

ಕಾಳಗಿ ತಾಲೂಕಿನ ಬೆಣ್ಣೂರ ಬಿ ಗ್ರಾಮಕ್ಕೆ ಸಮರ್ಪಕ ಬಸ್‌ ಸಂಚಾರವಿಲ್ಲದೆ ಕಳೆದ...

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...