ಕಲಬುರಗಿ | ‘ಅಸಂಸದೀಯ’ ಪದ ಬಳಕೆ ಆರೋಪ: ಪಾಲಿಕೆ ಅಧಿಕಾರಿ, ಸಿಬ್ಬಂದಿಗಳಿಂದ ಸಾಂಕೇತಿಕ ಧರಣಿ

Date:

‘ಅಸಂಸದೀಯ’ ಪದಗಳನ್ನು ಬಳಸಿರುವುದನ್ನು ಖಂಡಿಸಿ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಮಂಗಳವಾರ ಸಾಂಕೇತಿಕ ಧರಣಿ ನಡೆಸಿದರು.

- Advertisement -

ಕಲಬುರಗಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಪಾಲಿಕೆ ಸದಸ್ಯೆ ರೇಣುಕಾ ಅವರು ಪದೇಪದೆ ‘ಅಸಂಸದೀಯ’ ಪದಗಳನ್ನು ಬಳಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ನಗರದ ಇಂದಿರಾ ಗಾಂಧಿ ಸ್ಮಾರಕ ಭವನದ ಎದುರು ಕೆಲಕಾಲ ಸಾಂಕೇತಿಕ ಧರಣಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಧರಣಿ ಉದ್ದೇಶಿಸಿ ಮಾತನಾಡಿದ ಪಾಲಿಕೆ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜು ಕಟ್ಟಿಮನಿ, “ಪಾಲಿಕೆ ಸದಸ್ಯರಿಂದ ಅಸಂಸದೀಯ ಪದ ಬಳಕೆ ಖಂಡನೀಯ. ಇದರಿಂದ ನೌಕರರ ಮನಸ್ಸಿಗೆ ತೀವ್ರ ನೋವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮೇಯರ್ ಹಾಗೂ ಪಾಲಿಕೆ ಆಯುಕ್ತರು ಸದಸ್ಯರಿಗೆ ತಾಕೀತು ಮಾಡಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮರ್ಯಾದಾ ಹತ್ಯೆ ಖಂಡಿಸಿ ; ಡಿವೈಎಫ್‌ಐ ಪ್ರತಿಭಟನೆ

ನಂತರ ಪಾಲಿಕೆ ಅಧಿಕಾರಿಗಳು ಮೇಯರ್ ವರ್ಷಾ ಜಾನೆ ಹಾಗೂ ಆಯುಕ್ತ ಅವಿನಾಶ ಶಿಂದೆ ಅವರಿಗೆ ಮನವಿ ಸಲ್ಲಿಸಿದರು. ಆದರೆ ತಮ್ಮ ಬೇಡಿಕೆಗಳಿಗೆ ಸ್ಪಷ್ಟ ಭರವಸೆ ಸಿಗದ ಹಿನ್ನೆಲೆಯಲ್ಲಿ ಧರಣಿ ಮುಂದುವರಿಸಿದ ಪರಿಣಾಮ, ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಸಾಮಾನ್ಯ ಸಭೆ ಸುಮಾರು ಹೊತ್ತಾದರು ಆರಂಭವಾಗಲಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...