ಕಲಬುರಗಿ | ಪಡಿತರ ಚೀಟಿಯಲ್ಲಿ ಸದಸ್ಯರ ಹೆಸರು ಸೇರ್ಪಡೆ; ತಿದ್ದುಪಡಿಗೆ ಅವಕಾಶ

Date:

ಕರ್ನಾಟಕ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಪಡಿತರ ಚೀಟಿಯಲ್ಲಿ ಸದಸ್ಯರ ಹೆಸರು ಸೇರ್ಪಡೆ, ತಿದ್ದುಪಡಿಗೆ ಸೂಚನೆ ಹೊರಡಿಸಿದ್ದು, ನವೆಂಬರ್ 29ಮತ್ತು 30 ಎರಡು ದಿನ, ಅದೂ ಎರಡು ಗಂಟೆಗಳ ಕಾಲ ಮಾತ್ರ ಅವಕಾಶ ನೀಡಲಾಗಿದೆ.

- Advertisement -

ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ ಬಳಕೆಗೆ ಪಡಿತರ ಕಡ್ಡಾಯವಾಗಿರುವುದರಿಂದ ಸರಿಪಡಿಸಿಕೊಳ್ಳುವವರಿಗೆ ಕರ್ನಾಟಕ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಜಾಗತಿಕ ಬಿಕ್ಕಟ್ಟಿನ ನೆಪ, ಮರೆಯಾದ ದೇಶದ ಹಿತ: ಜೈಶಂಕರ್...

ಬೆಲೆ ಏರಿಕೆಯ ಬೇಗೆಯಲ್ಲಿ ಜನಸಾಮಾನ್ಯರು ನರಳುತ್ತಿದ್ದರೆ, ಗದ್ದೆಯಲ್ಲಿ ರೈತ ರಸಗೊಬ್ಬರಕ್ಕಾಗಿ ಕಣ್ಣೀರು ಸುರಿಸುತ್ತಿದ್ದಾನೆ. ಆದರೆ, ಇದಕ್ಕೆ ಸ್ಪಂದಿಸಬೇಕಾದ ಮೋದಿ ಸರ್ಕಾರ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೂಲಕ ಜಾಗತಿಕ ವೇದಿಕೆಗಳಲ್ಲಿ ವಿದೇಶಿ ಯುದ್ಧಗಳತ್ತ...

ಸದಸ್ಯರ ಹೆಸರು ಸೇರ್ಪಡೆ, ಬೇರ್ಪಡೆ, ತಿದ್ದುಪಡಿ, ಪಡಿತರ ಚೀಟಿಯಲ್ಲಿನ ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಹಾಗೂ ಆದ್ಯತೇತರ ಪಡಿತರ ಚೀಟಿದಾರರು ಪಡಿತರ ಪಡೆಯಲು ಇಚ್ಚೆ ವ್ಯಕ್ತಪಡಿಸಲು ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ನವೆಂಬರ್ 29 ಹಾಗೂ 30 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ.

ಅದೇ ರೀತಿ ಹೊಸ ಆದ್ಯತಾ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 3ರಂದು ಒಂದು ದಿನ, ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 2ಗಂಟೆಯವರೆಗೆ ಕರ್ನಾಟಕ ಒನ್ ಹಾಗೂ ಗ್ರಾಮ ಒನ್ಗಳಲ್ಲಿ ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಸರಿಯಾದ ಹೆಸರು, ಆಧಾರ್ ಕಾರ್ಡ್ ಹಾಗೂ ವಿಳಾಸದ ದಾಖಲೆಯನ್ನು ತರುವಂತೆ, ನಿಗದಿತ ಸಮಯದೊಳಗೆ ಆಗಮಿಸಬೇಕು ಎಂದು ತಿಳಿಸಲಾಗಿದೆ.

ಜಿಲ್ಲೆಯ ನಗರ ಪ್ರದೇಶಗಳಲ್ಲಿರುವ ಕರ್ನಾಟಕ ಒನ್ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿನ ಗ್ರಾಮ ಒನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಇವುಗಳನ್ನು ಹೊರತುಪಡಿಸಿ ಬೇರೆ ಇನ್ಯಾವುದೇ ಆನ್ಲೈನ್ ಸೆಂಟರ್ಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ ಎಂದು ಕಲಬುರಗಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕ ಶಾಂತಗೌಡ ಜಿ. ಗುಣಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ತಡೆಹಿಡಿದಿದ್ದ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಮರುಸ್ಥಾಪನೆ

ಕೋಲಾರ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ರೀದ್ ಪಾಷಾ ಅವರ...

ಉಡುಪಿ | ಹಿರಿಯ ನಾಗರಿಕರನ್ನು ಗೌರವಯುತವಾಗಿ ನೋಡಿಕೊಳ್ಳಿ: ಎಂ.ಎ. ಗಫೂರ್

ಸಮಾಜದಲ್ಲಿ ಹಿರಿಯ ನಾಗರಿಕರು ತಮ್ಮದೇ ಆದ ಸ್ಥಾನಮಾನ ಹೊಂದಿದ್ದು, ಅವರನ್ನು ಗೌರವಯುತವಾಗಿ...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

ಅಂಕೋಲಾ | ಬಸ್-ಲಾರಿ ಡಿಕ್ಕಿ: ಒಂದೂವರೆ ವರ್ಷದ ಮಗು ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಅಂಕೋಲಾ: ತಾಲೂಕಿನ ಬೆಳಸೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುರುವಾರ...