ಕಲಬುರಗಿ | ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ನಿರ್ಧಾರ ಖಂಡಿಸಿ ಎಐಡಿಎಸ್‌ಒ ಆಕ್ರೋಶ

Date:

ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ ಮಾಧ್ಯಮ ಆರಂಭಿಸಲು ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮವನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (ಎಐಡಿಎಸ್‌ಒ) ಕಲಬುರಗಿ ಜಿಲ್ಲಾ ಕೌನ್ಸಿಲ್ ತೀವ್ರವಾಗಿ ಖಂಡಿಸಿದೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಕಾರ್ಯದರ್ಶಿ ವೆಂಕಟೇಶ ದೇವದುರ್ಗ, ‘ರಾಜ್ಯದ 4404 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮದ ಹೆಸರಿನಲ್ಲಿ ಕನ್ನಡವನ್ನು ಹಿಂಬದಿಗೆ ಸರಿಸಿ ಇಂಗ್ಲಿಷ್ ಮಾಧ್ಯಮವನ್ನು ಹೇರಲಾಗುತ್ತಿದೆ’ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

‘ಸರ್ಕಾರ ಇದನ್ನು ದ್ವಿಭಾಷಾ ಮಾಧ್ಯಮ ಎಂದು ಕರೆಯುತ್ತಿದ್ದರೂ, ಅನೇಕ ಶಾಲೆಗಳಲ್ಲಿ ಶಿಕ್ಷಕರಿಗೆ ಇಂಗ್ಲಿಷ್‌ನಲ್ಲೇ ಪಾಠ ಮಾಡಲು ಸೂಚಿಸಲಾಗುತ್ತಿದೆ. ಕೆಲವು ಶಾಲೆಗಳಲ್ಲಿ ಜೂನ್ ತಿಂಗಳಿಂದ ಕನ್ನಡ ಮಾಧ್ಯಮ ಇರುವುದಿಲ್ಲ, ಕೇವಲ ಇಂಗ್ಲಿಷ್ ಮಾಧ್ಯಮಕ್ಕೆ ಮಾತ್ರ ಪ್ರವೇಶ ನೀಡಲಾಗುತ್ತದೆ’ ಎಂದು ಪೋಷಕರಿಗೆ ತಿಳಿಸಿರುವುದಾಗಿ ಅವರು ದೂರಿದರು.

‘ಮಗುವಿನ ಸಮರ್ಪಕ ಬೌದ್ಧಿಕ ಮತ್ತು ಮಾನಸಿಕ ಬೆಳವಣಿಗೆಗೆ ಕನಿಷ್ಠ ಐದನೇ ತರಗತಿವರೆಗೆ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು ಎಂಬುದು ಶಿಕ್ಷಣ ತಜ್ಞರ ಅಭಿಪ್ರಾಯವಾಗಿದೆ. ಸಂವಹನದ ಭಾಷೆಯೇ ಕಲಿಕೆಯ ಭಾಷೆಯಾಗಿದಾಗ ಮಕ್ಕಳಿಗೆ ವಿಷಯಗಳನ್ನು ಅರ್ಥಮಾಡಿಕೊಳ್ಳಲು ಹಾಗೂ ತಮ್ಮ ಭಾವನೆಗಳನ್ನು ಸರಿಯಾಗಿ ವ್ಯಕ್ತಪಡಿಸಲು ಸಾಧ್ಯವಾಗುತ್ತದೆ. ಆದರೆ ಸರ್ಕಾರ ಈ ವೈಜ್ಞಾನಿಕ ಅಭಿಪ್ರಾಯವನ್ನು ನಿರ್ಲಕ್ಷಿಸಿದೆ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

‘ಇಂಗ್ಲಿಷ್ ಕಲಿಕೆ ಅಗತ್ಯವಿದ್ದರೂ, ಕನ್ನಡವನ್ನು ಕಡೆಗಣಿಸಿ ಇಂಗ್ಲಿಷ್ ಹೇರಿಕೆ ಮಾಡುವುದು ನಾಡಿನ ಜನತೆಗೆ ದ್ರೋಹ ಮತ್ತು ಕನ್ನಡಕ್ಕೆ ಅಪಮಾನವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಈ ನಿರ್ಧಾರವನ್ನು ಹಿಂಪಡೆಯಬೇಕು’ ಎಂದು ಆಗ್ರಹಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ವೆಲ್ಫೇರ್ ಪಾರ್ಟಿ ಸ್ಥಾಪನಾ ದಿನಾಚರಣೆ; ಧ್ವಜಾರೋಹಣ ಕಾರ್ಯಕ್ರಮ

‘ರಾಜ್ಯದ ವಿದ್ಯಾರ್ಥಿಗಳು, ಯುವಜನರು, ಪೋಷಕರು, ಸಾಹಿತಿಗಳು ಹಾಗೂ ಶಿಕ್ಷಣ ಪ್ರೇಮಿಗಳು ಕನ್ನಡ ಭಾಷೆಯನ್ನು ರಕ್ಷಿಸಲು ಧ್ವನಿಯೆತ್ತಬೇಕು’ ಎಂದು ಎಐಡಿಎಸ್‌ಒ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ನಗರದ ಹುಮನಾಬಾದ್ ರಸ್ತೆಯ ಹೋಟೆಲ್‌ವೊಂದರ ಸಮೀಪ ನಡೆದಿದ್ದ ಸಿದ್ದಲಿಂಗ ಸಾವಳಗಿ ಕೊಲೆ...

ಕಲಬುರಗಿ | ದೌರ್ಜನ್ಯ ತಡೆ ಕಾಯ್ದೆ ಕುರಿತು ಜಾಗೃತಿ: ಕಾನೂನು ಅರಿವು ಬೆಳೆಸಿಕೊಳ್ಳಲು ಕರೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟಲು ಹಾಗೂ...

ಸಮುದಾಯ ಶೌಚಾಲಯ | ಕೋಟಿ ಹಣ ಖರ್ಚಾದರೂ ಮುಗಿಯದ ಕಾಮಗಾರಿ, ತೆರೆಯದ ಬಾಗಿಲು!

ಗ್ರಾಮೀಣ ಪ್ರದೇಶದಲ್ಲಿ ಸಮುದಾಯ ನೈರ್ಮಲ್ಯ ಸಂಕೀರ್ಣಗಳ ನಿರ್ಮಾಣಕ್ಕೆ ಸರ್ಕಾರ ಕೋಟ್ಯಂತರ ರೂಪಾಯಿ...

ಕಲಬುರಗಿಯಲ್ಲಿ ಅ.30ರಿಂದ ನ.1ರವರೆಗೆ ಎಸ್‌ಎಫ್‌ಐ ರಾಜ್ಯ ಸಮ್ಮೇಳನ

ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಸಮ್ಮೇಳನವು...