ಕಲಬುರಗಿ | ಸಚಿವ ಹೆಚ್.ಕೆ. ಪಾಟೀಲರ ಹೇಳಿಕೆಗೆ ಎಐಡಿವೈಒ ತೀವ್ರ ಖಂಡನೆ

Date:

ರಾಜ್ಯದ ಕಾನೂನು ಸಚಿವರಾದ ಹೆಚ್.ಕೆ. ಪಾಟೀಲರು ಮದ್ಯಪಾನ ನಿಷೇಧ ಅಪ್ರಸ್ತುತವೆಂದು ನೀಡಿದ ಹೇಳಿಕೆಗೆ ಎಐಡಿವೈಓ (ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಜೇಶನ್) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಮದ್ಯಪಾನ ನಿಷೇಧ ಅಪ್ರಸ್ತುತವಾಗಿದ್ದು, ಇದರಿಂದ ರಾಜ್ಯಕ್ಕೆ ವಾರ್ಷಿಕ 40 ಸಾವಿರ ಕೋಟಿ ರೂಪಾಯಿ ಆದಾಯ ಬರುತ್ತದೆ ಎಂದು ಹೇಳಿದ್ದಾರೆ. ಅಲ್ಲದೆ, ಮದ್ಯಪಾನಕ್ಕಿಂತ ಗಾಂಜಾ, ಡ್ರಗ್‌ಗಳ ಸೇವನೆಯಿಂದ ಯುವಕರು ಹೆಚ್ಚು ಪ್ರಮಾಣದಲ್ಲಿ ಸಾವನ್ನಪ್ಪುತ್ತಿದ್ದಾರೆ ಹಾಗೂ ಮದ್ಯಪಾನ ಮಾಡಿದರೂ 60-65 ವರ್ಷಗಳವರೆಗೆ ಬದುಕಬಹುದು’ ಎಂಬ ಹೇಳಿಕೆ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕುರಿತು ಎಐಡಿವೈಓ ಜಿಲ್ಲಾ ಅಧ್ಯಕ್ಷ ಜಗನ್ನಾಥ ಎಸ್.ಹೆಚ್ ಪ್ರಕಟಣೆ ಹೊರಡಿಸಿದ ಅವರು, ‘ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೂಲಿ ಕಾರ್ಮಿಕರು ಹಾಗೂ ಕೃಷಿ ಕಾರ್ಮಿಕರು ಮದ್ಯಪಾನದ ವ್ಯಸನಕ್ಕೆ ಬಲಿಯಾಗಿ ಅನೇಕ ಕುಟುಂಬಗಳು ಸಂಕಷ್ಟಕ್ಕೆ ಸಿಲುಕುತ್ತಿರುವುದು ದಿನನಿತ್ಯ ಕಂಡುಬರುತ್ತಿರುವ ಸತ್ಯವಾಗಿದ್ದರೂ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ಇಂತಹ ಹೇಳಿಕೆ ನೀಡಿರುವುದು ಖಂಡನೀಯ’ ಎಂದು ತಿಳಿಸಿದೆ.

ಮದ್ಯಪಾನ ಸೇವಿಸಿದರೂ ದೀರ್ಘಕಾಲ ಬದುಕಬಹುದು ಎಂಬ ಹೇಳಿಕೆ ಯುವಜನತೆಗೆ ತಪ್ಪು ಸಂದೇಶ ನೀಡುತ್ತದೆ. ರಾಜ್ಯ ಸರ್ಕಾರ ತನ್ನ ಆದಾಯಕ್ಕಾಗಿ ಜನರ ಜೀವನವನ್ನು ಪಣಕ್ಕಿಡುವುದು ನಾಚಿಕೆಗೇಡಿನ ಸಂಗತಿ ಎಂದು ಸಂಘಟನೆ ಅಭಿಪ್ರಾಯಪಟ್ಟಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಲಂಚ ಪ್ರಕರಣ: ನಿವೃತ್ತ ಇಒ, ಎಸ್‌ಡಿಎಗೆ ನಾಲ್ಕು ವರ್ಷ ಜೈಲು

ಸಚಿವರು ಕೂಡಲೇ ತಮ್ಮ ಹೇಳಿಕೆಯನ್ನು ಬೇಷರತ್ತಾಗಿ ಹಿಂತೆಗೆದುಕೊಳ್ಳಬೇಕು. ಜೊತೆಗೆ ರಾಜ್ಯ ಸರ್ಕಾರ ಮದ್ಯಪಾನ ನಿಷೇಧದ ದಿಕ್ಕಿನಲ್ಲಿ ಗಂಭೀರ ಕ್ರಮ ಕೈಗೊಳ್ಳಬೇಕು ಹಾಗೂ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ತಡೆಗಟ್ಟಬೇಕು ಎಂದು ಎಐಡಿವೈಓ ರಾಜ್ಯ ಸಮಿತಿ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...