ಕಲಬುರಗಿ | ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಪ್ರಕರಣ ದಾಖಲು

Date:

ಕಲಬುರಗಿ ಹೊರವಲಯದ ಗ್ರಾಮವೊಂದರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯೊಬ್ಬನ ವಿರುದ್ಧ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

- Advertisement -

ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಬಾಲಕಿ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಳು. ದಸರಾ ರಜೆ ಇದ್ದ ಹಿನ್ನೆಲೆಯಲ್ಲಿ ಬಾಲಕಿ ಮನೆಯಲ್ಲೇ ಒಬ್ಬಳೇ ಇದ್ದಳು ಎನ್ನಲಾಗಿದೆ. ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಪಕ್ಕದ ಮನೆಯ ನಿವಾಸಿಯೊಬ್ಬ ಮನೆಗೆ ಪ್ರವೇಶಿಸಿ ಬಾಲಕಿಯ ಮೇಲೆ ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಬಾಲಕಿಯ ಕೂಗಾಟ ಕೇಳಿ ಪಕ್ಕದ ಮನೆಯ ವ್ಯಕ್ತಿಯೊಬ್ಬರು ಸ್ಥಳಕ್ಕೆ ಧಾವಿಸಿದಾಗ ಆರೋಪಿ ಅಲ್ಲಿಂದ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ವಿಶ್ವವಿದ್ಯಾಲಯ ಠಾಣೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ನ.28, 29ರಂದು 47ನೇ ಶರಣ ಕಮ್ಮಟ, ಅನುಭವಮಂಟಪ ಉತ್ಸವ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ | ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಬಸವತತ್ವವೇ ದಾರಿ: ಸಚಿವ ಈಶ್ವರ ಖಂಡ್ರೆ

ಜಗತ್ತಿನ ಎಲ್ಲ ಸಮಸ್ಯೆಗಳಿಗೆ ವಚನಗಳು ದಿವ್ಯೌಷಧಿಗಳಾಗಿವೆ. ಸಮ ಸಮಾಜ ನಿರ್ಮಾಣಕ್ಕಾಗಿ ಶರಣರು...

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ ದೇಸೀ ತಳಿಗಳನ್ನು ಉಳಿಸಲು ಬದುಕನ್ನೇ ಮುಡಿಪಿಟ್ಟ ‘ಬೀಜಗಳ ಕಾವಲುಗಾರ’!

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ...