ಕಲಬುರಗಿ | ಲಂಚವಾಗಿ 9 ಸೀರೆ, ಚಪ್ಪಲಿ-ಶೂ, ಜೀನ್ಸ್ ಪ್ಯಾಂಟ್‌ಗೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಎಪಿಪಿ!

Date:

ಲಂಚದ ರೂಪದಲ್ಲಿ ಕೇವಲ ಹಣ ಮಾತ್ರವಲ್ಲದೆ 9 ಸೀರೆ, ಜೀನ್ಸ್ ಪ್ಯಾಂಟ್, ಶೂ ಹಾಗೂ ಮಹಿಳೆಯರ ಚಪ್ಪಲಿಗಳನ್ನು ಕೊಡುವಂತೆ ಅಧಿಕಾರಿಯೊಬ್ಬರು ಬೇಡಿಕೆಯಿಟ್ಟಿದ್ದ ಪ್ರಕರಣ ಕಲಬುರಗಿಯಲ್ಲಿ ಬೆಳಕಿಗೆ ಬಂದಿವೆ. ತನ್ನ ಬೇಡಿಕೆಯ ವಸ್ತುಗಳನ್ನು ಲಂಚವಾಗಿ ಪಡೆಯುವ ವೇಳೆ, ಲೋಕಾಯುಕ್ತ ಪೊಲೀಸರಿಗೆ ‘ರೆಡ್‌ಹ್ಯಾಂಡ್‌’ಆಗಿ ಸಿಕ್ಕಿಬಿದ್ದಿದ್ದಾರೆ.

- Advertisement -

ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕರಾಗಿ (ಎಪಿಪಿ) ಕಾರ್ಯನಿರ್ವಹಿಸುತ್ತಿದ್ದ ಸಂತೋಷ್ ಕುಮಾರ್ ಲೋಖಂಡೆ ಬಂಧಿತ ಅಧಿಕಾರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನ್ಯಾಯಾಲಯದಲ್ಲಿ ಬಾಕಿ ಇದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜಿ ಅರ್ಜಿ ಸಲ್ಲಿಸಲು ಸಹಕರಿಸಲು ರಾಹುಲ್ ಹೈದರಾಬಾದ್ ಎಂಬವರ ಬಳಿ ಸಂತೋಷ್ ಕುಮಾರ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 10,000 ರೂಪಾಯಿ ನಗದು ಹಣ ಮಾತ್ರವಲ್ಲದೆ, 9 ಸೀರೆಗಳು, 4 ಶರ್ಟ್‌ಗಳು, 4 ಲಂಡನ್ ಜೀನ್ಸ್ ಪ್ಯಾಂಟ್‌ಗಳು, 1 ಜೊತೆ ಶೂ, 4 ಮಹಿಳಾ ಉಡುಪುಗಳು ಹಾಗೂ 6 ಜೊತೆ ಮಹಿಳಾ ಚಪ್ಪಲಿಗಳನ್ನು ತಂದುಕೊಡುವಂತೆ ಕೇಳಿದ್ದರು. ಅಧಿಕಾರಿಯ ಈ ವಿಚಿತ್ರ ಬೇಡಿಕೆಯಿಂದ ಬೇಸತ್ತ ರಾಹುಲ್, ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ದೂರುದಾರ ರಾಹುಲ್ ಅವರನ್ನು ಮುಂದುಬಿಟ್ಟು, ಅಧಿಕಾರಿಯ ಬಂಧನಕ್ಕೆ ಬಲೆ ಬೀಸಿದ್ದರು. ಶುಕ್ರವಾರ, ನ್ಯಾಯಾಲಯದ ಆವರಣದಲ್ಲೇ ದೂರುದಾರರಿಂದ ಲಂಚದ ಸಾಮಗ್ರಿಗಳನ್ನು ಪಡೆಯುತ್ತಿದ್ದಾಗ ಸಂತೋಷ್‌ ಅವರನ್ನು ಲೋಕಾಯುಕ್ತ ಇನ್ಸ್‌ಪೆಕ್ಟರ್ ಅರುಣ್ ನೇತೃತ್ವದ ತಂಡವು ‘ರೆಡ್‌ಹ್ಯಾಂಡ್‌’ಆಗಿ ಹಿಡಿದೆ. ಲಂಚವಾಗಿ ಪಡೆದ ಎಲ್ಲ ವಸ್ತುಗಳನ್ನು ಜಪ್ತಿ ಮಾಡಿದೆ.

ಬಂಧಿತ ಅಧಿಕಾರಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ದೆಹಲಿಯಲ್ಲಿ ‘ತಿರಂಗಾ’ ಪ್ರತಿಭಟನೆಗೆ ತಡೆ: ದೀಪ್ಕೆ, ನೇಹಾ ಬೋರಾ ಸೇರಿ ಸುಮಾರು 150 ಮಂದಿ ವಶಕ್ಕೆ

‘ಲೆಹರಾ ದೋ ತಿರಂಗಾ’ ಪ್ರತಿಭಟನೆ ಮತ್ತು ಸಂಬಂಧಿತ ಪ್ರದರ್ಶನಗಳ ಸಂದರ್ಭದಲ್ಲಿ ಅಭಿಜೀತ್...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...