ಕಲಬುರಗಿ | ರೈತರ ಬೇಡಿಕೆ ಈಡೇರಿಸುವಂತೆ ಆಗ್ರಹ

Date:

ಬರಪರಿಹಾರ, ರೈತರ ಸಾಲ ಮನ್ನಾ, ಬಗರ್ ಹುಕುಂ ಸಾಗುವಳಿ ಚೀಟಿ ಹಾಗೂ ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಮಾಡುವಂತೆ ಶೋಷಿತ ಸಮಾಜ ವೇದಿಕೆ ಜೇವರ್ಗಿ ತಾಲೂಕು ಸಮಿತಿಯಿಂದ ಪ್ರತಿಭಟನೆ ನಡೆಸಿದರು.

- Advertisement -

ಜೇವರ್ಗಿ ತಾಲೂಕು ದಂಡಾಧಿಕಾರಿ ಹಾಗೂ ತಹಶೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಲಬುರಗಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಬಿ.ನೆಲೋಗಿ ಮಾತನಾಡಿ, “ಜೇವರ್ಗಿ ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಯಾವುದೇ ಬೆಳೆ ಸರಿಯಾಗಿ ಫಸಲು ಬಾರದೇ ನಾಶವಾಗಿದ್ದು, ರೈತರು ಸಾಲ ಸೂಲ ಮಾಡಿ ಬೀಜ, ಗೊಬ್ಬರ, ಕ್ರಿಮಿನಾಶಕ ಔಷಧಿ ಖರೀದಿಸಿ ತುಂಬಾ ಸಂಕಷ್ಟದಲ್ಲಿ ನರಳುತ್ತಿದ್ದಾರೆ. ಅಲ್ಲದೇ ಬ್ಯಾಂಕ್‌ಗಳಲ್ಲಿ ಸಾಲ ಮಾಡಿ ಸಾಲ ಕಟ್ಟಲಾಗದೇ ನರಳುತ್ತಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಕಳೆದ 25ರಿಂದ 30 ವರ್ಷಗಳಿಂದ ಸರ್ಕಾರಿ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ (ಬಗರ್ ಹುಕುಂ) ಬಡ ಮಧ್ಯಮ ವರ್ಗದ ಕೂಲಿ ಕಾರ್ಮಿಕರಿಗೆ ಸಾಗುವಳಿ ಚೀಟಿ ನೀಡಬೇಕು. ರೈತರ ಸಾಲ ಮನ್ನಾ ಮಾಡಬೇಕು. ಬೆಳೆಹಾನಿ ಉಂಟಾಗಿರುವುದರಿಂದ ಎಕರೆಗೆ ₹25,000 ಬೆಳೆ ಪರಿಹಾರ ಒದಗಿಸಬೇಕು. ಗೃಹ ಲಕ್ಷ್ಮೀ ಸಮಸ್ಯೆ ಇತ್ಯರ್ಥ ಪಡಿಸಬೇಕು” ಎಂದು ಮುಖ್ಯಮಂತ್ರಿಯವರಿಗೆ ಆಗ್ರಹಿಸಿದರು.

“ಹಿಂದೆ ಇರುವ ಪಡಿತರ ಚೀಟಿಯಲ್ಲಿ ಗಂಡನ ಹೆಸರು ತೆಗೆದು ಹೆಂಡತಿಯ ಹೆಸರನ್ನು ನಮೂದು ಮಾಡಿದ ಪಡಿತರ ಚೀಟಿ ಗೃಹಲಕ್ಷ್ಮೀ ಅರ್ಜಿ ಸ್ವೀಕರಿಸುತ್ತಿಲ್ಲ. ಕಾರಣ ಸರ್ಕಾರದಿಂದ ತಡೆಹಿಡಿಯಾಲಾಗಿದೆ”‌ ಎಂದರು.

“ಒಂದು ವೇಳೆ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಪಟ್ಟಣದಲ್ಲಿರುವ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಬೃಹತ್ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ಬಿಡುಗಡೆಗೆ ಆಗ್ರಹ

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಬಿ ನೆಲೋಗಿ, ಮಲ್ಲು ನೇದಲಗಿ, ಹರಿಶ್ಚಂದ್ರ ಮದನಕರ್,  ಗುಡೂರ, ಮಾಳಪ್ಪ ಕನ್ನೊಳ್ಳಿ, ಪರಮಾನಂದ ನೆಲೋಗಿ, ಮಡಿವಾಳಪ್ಪ ಎಸ್ ಜಗಲಗೊಂಡ,
ವೈ ಎಸ್ ಪಿ ಪಾಟೀಲ್, ಶರಣು ನೇರಡಗಿ, ದವಲಪ್ಪ ಶರ್ಮಾ ಕೆಲ್ಲೂರ, ನಬಿ ಪಟೇಲ್, ರುದ್ರಗೌಡ ಮಲಗೊಂಡ, ಮರೆಪ್ಪ ಪೂಜಾರಿ, ಸಿದ್ದಪ್ಪ ಮದನಕರ್, ಜೈಭೀಮ್ ಮದನಕರ, ಮಲ್ಲಿಕಾರ್ಜುನ ಹೆಳವರ ಚಿಗರಳ್ಳಿ, ನಬಿಲಾಲ‌ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...