ಕಲಬುರಗಿ | ಮಹಾಶಿವರಾತ್ರಿ ಹಿನ್ನೆಲೆ ಕೋಟೆಯಲ್ಲಿ ಪೂಜೆಗೆ ಯತ್ನ, ದಿವ್ಯಾ ಹಾಗರಗಿ ಸೇರಿ ಹಲವರು ಪೊಲೀಸ್ ವಶಕ್ಕೆ

Date:

ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಅನುಮತಿ ಪಡೆಯದೆ ಕಲಬುರಗಿ ಕೋಟೆ ಒಳಗೆ ಪ್ರವೇಶಿಸಿ ಪೂಜೆ ಸಲ್ಲಿಸಲು ಯತ್ನಿಸಿದ ಪ್ರಕರಣದಲ್ಲಿ ಪಿಎಸ್ಸೆ ನೇಮಕಾತಿ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಸೇರಿದಂತೆ ಹಲವಾರು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ರವಿವಾರ ಬೆಳಿಗ್ಗೆಯಿಂದಲೇ ಕೋಟೆ ಮುಂಭಾಗದಲ್ಲಿ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಜಮಾಯಿಸಿ, ಕೋಟೆಯೊಳಗಿನ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪೂಜೆ ನೆರವೇರಿಸಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದರು. ದಿವ್ಯಾ ಹಾಗರಗಿ ಅವರ ನೇತೃತ್ವದಲ್ಲಿ ಕೆಲವರು ಕೋಟೆ ಒಳಪ್ರವೇಶಿಸಲು ಮುಂದಾದಾಗ ಕರ್ತವ್ಯದಲ್ಲಿದ್ದ ಪೊಲೀಸರು ತಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...
1393750

ಈ ವೇಳೆ ಎಸಿಪಿ ಶಿವನಗೌಡ ಪಾಟೀಲ್ ನೇತೃತ್ವದ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪುರಾತತ್ವ ಇಲಾಖೆಯ ಪೂರ್ವಾನುಮತಿ ಇಲ್ಲದೆ ಕೋಟೆಯೊಳಗೆ ಯಾವುದೇ ಧಾರ್ಮಿಕ ಕಾರ್ಯಕ್ರಮ ನಡೆಸಲು ಅವಕಾಶ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಕೋಟೆ ಪುರಾತತ್ವ ಇಲಾಖೆಯ ವ್ಯಾಪ್ತಿಗೆ ಬರುವ ಹೇರಿಟೇಜ್ ಸ್ಮಾರಕವಾಗಿರುವುದರಿಂದ ನಿಯಮಾನುಸಾರ ಅನುಮತಿ ಕಡ್ಡಾಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪುರಾತತ್ವ ಇಲಾಖೆ ಸಾರ್ವಜನಿಕರಿಗೆ ದೇವಸ್ಥಾನದಲ್ಲಿ ಪೂಜೆ ಮಾಡಲು ಅವಕಾಶ ನೀಡದಿರುವುದನ್ನು ಖಂಡಿಸಿ ಕಾರ್ಯಕರ್ತರು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದರೂ, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣದಲ್ಲಿ ಇಟ್ಟರು.

1393758

ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ದಿವ್ಯಾ ಹಾಗರಗಿ ಸೇರಿದಂತೆ ಶಶಿಕುಮಾರ್ ಶೆಟ್ಟಿ, ಪ್ರಶಾಂತ್ ಜಾಧವ, ಪವನ್ ಪೂಜಾರಿ, ಸಾಗರ್ ರಾಠೋಡ್, ಅಣ್ಣಾರಾವ್ ಪಾಟೀಲ್ ಸೇರಿದಂತೆ ಹಲವು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

ಘಟನೆಯ ಹಿನ್ನೆಲೆ ಕೋಟೆ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. ಮುಂದಿನ ಬೆಳವಣಿಗೆಗಳತ್ತ ಸಾರ್ವಜನಿಕರ ಗಮನ ಕೇಂದ್ರೀಕೃತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...