ಕಾಳಗಿ ಪಟ್ಟಣದ ಹೊರವಲಯದ ಲಕ್ಷ್ಮಣ್ ತಾಂಡ ಸಮೀಪ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಹಳಗೇರಾ ಗ್ರಾಮದ ಹರೀಶ್ ಹೂಗಾರ (17) ಎಂದು ಗುರುತಿಸಲಾಗಿದೆ. ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ.
ಮೃತರು ತೋಟ್ನಳ್ಳಿ ಗ್ರಾಮದಿಂದ ಕೋಡ್ಲಿ ಗ್ರಾಮಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಇದನ್ನು ಓದಿದ್ದೀರಾ? ಯಾದಗಿರಿ | ಅಂಬೇಡ್ಕರ್ ರವರ 135ನೇ ಜಯಂತ್ಯೋತ್ಸವದ ಪ್ರಯುಕ್ತ ಉಚಿತ ರಕ್ತದಾನ ಶಿಬಿರ
ಘಟನಾ ಸ್ಥಳಕ್ಕೆ ರಟಕಲ್ ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.





