ಕಲಬುರಗಿ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಶವ: ಶಿಕ್ಷಕಿಯದು ಎಂದು ದೃಢ

Date:

ಕಮಲಾಪುರ ತಾಲೂಕಿನ ಕಲಮೂಡ ಗ್ರಾಮದ ಸಮೀಪ ಹೆದ್ದಾರಿ ಬದಿಯಲ್ಲಿ ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮಹಿಳೆಯೊಬ್ಬರ ಮೃತದೇಹದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದ್ದು, ಮೃತಪಟ್ಟವರ ಗುರುತು ಇದೀಗ ಪತ್ತೆಯಾಗಿದೆ.

- Advertisement -

ಮೃತರನ್ನು ಕಲಬುರಗಿ ನಗರದ ಎಸ್.ಬಿ ಕಾಲೇಜು ಸಮೀಪದ ಆನಂದನಗರ ನಿವಾಸಿ ಹಾಗೂ ಭಾಲ್ಕಿ ತಾಲ್ಲೂಕಿನ ವಾಂಜರಖೇಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜ್ಯೋತಿ ಚಂದ್ರಶೇಖರ ಕಾಪಾಳೆ (57) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಮಾಹಿತಿಯ ಪ್ರಕಾರ, ಅವಿವಾಹಿತೆಯಾಗಿದ್ದ ಜ್ಯೋತಿ ಅವರು ಬಸವಕಲ್ಯಾಣದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ರಜಾದಿನಗಳಲ್ಲಿ ಕಲಬುರಗಿಗೆ ಆಗಾಗ್ಗೆ ಬರುತ್ತಿದ್ದರು. ಏಪ್ರಿಲ್ 2ರಂದು ಶಾಲೆಗೆ ಹಾಜರಾಗಿದ್ದ ಅವರು, ಏಪ್ರಿಲ್ 3ರಂದು ಗುಡ್ ಫ್ರೈಡೆ ರಜೆ ಹಿನ್ನೆಲೆ ತಮ್ಮ ನಿವಾಸಕ್ಕೆ ಬಂದಿದ್ದರು. ಅದೇ ದಿನ ಮನೆಯಿಂದ ಹೊರಟ ಬಳಿಕ ಮರಳಿ ಬಂದಿರಲಿಲ್ಲ ಎಂದು ತಿಳಿದುಬಂದಿದೆ.

ಇದಕ್ಕೂ ಮುನ್ನ, ಕಲಮೂಡ ಗ್ರಾಮದಿಂದ ಸುಮಾರು ಒಂದು ಕಿಲೋಮೀಟರ್ ದೂರದಲ್ಲಿರುವ ರಸ್ತೆ ಬದಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಪ್ರಾಥಮಿಕ ತನಿಖೆಯಲ್ಲಿ ಮೃತರ ವಯಸ್ಸು 22ರಿಂದ 25 ವರ್ಷಗಳ ನಡುವೆ ಇರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ನಂತರದ ಪರಿಶೀಲನೆ ಮತ್ತು ಗುರುತು ಪತ್ತೆ ಪ್ರಕ್ರಿಯೆಯಿಂದ ಅವರ ನಿಜವಾದ ಗುರುತು ಬಹಿರಂಗವಾಗಿದೆ.

ಘಟನಾ ಸ್ಥಳದಲ್ಲಿ ಕಾರದ ಪುಡಿ ಚೆಲ್ಲಾಡಿರುವುದು ಹಾಗೂ ಮುಖದ ಮೇಲೆ ಗಾಯಗಳಿರುವುದು ಪತ್ತೆಯಾಗಿದ್ದು, ಮುಖಕ್ಕೆ ಖಾರದ ಪುಡಿ ಎರಚಿ ಬಳಿಕ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಹತ್ಯೆ ಪ್ರಕರಣ: ಗುಂಡಿನ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ ಪೊಲೀಸರು

ಪ್ರಕರಣದ ಕುರಿತು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಬಲೆ ಬೀಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...