ಕಲಬುರಗಿ | ಹೆಣ್ಣು ಭ್ರೂಣ ಹತ್ಯೆಗೆ ಬ್ರೇಕ್: ಲಿಂಗ ಪತ್ತೆ ಮಾಡಿದರೆ ಕಠಿಣ ಕ್ರಮ; ಆರೋಗ್ಯ ಇಲಾಖೆಯ ಎಚ್ಚರಿಕೆ

Date:

ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ತಡೆಗಟ್ಟಲು ಹಾಗೂ ಲಿಂಗಾನುಪಾತ ಸುಧಾರಣೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಗರ್ಭಧಾರಣೆಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ಹಚ್ಚುವುದು ಶಿಕ್ಷಾರ್ಹ ಅಪರಾಧ ಎಂದು ಎಚ್ಚರಿಕೆ ನೀಡಿದೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ, ಪಿ.ಸಿ.ಪಿ.ಎನ್.ಡಿ.ಟಿ
ಕಾಯ್ದೆ–1994 ಅನ್ನು ಜಿಲ್ಲೆಯಲ್ಲಿ ಕಠಿಣವಾಗಿ ಜಾರಿಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

‘ಲಿಂಗ ಪತ್ತೆ ಮಾಡುವ ಆಸ್ಪತ್ರೆಗಳು, ಸ್ಕ್ಯಾನಿಂಗ್ ಕೇಂದ್ರಗಳು ಹಾಗೂ ಸಂಬಂಧಿತ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರಿಗೆ ಜೈಲು ಶಿಕ್ಷೆ, ದಂಡ ಹಾಗೂ ವೈದ್ಯಕೀಯ ಪರವಾನಗಿ ರದ್ದುಪಡಿಸುವ ಕ್ರಮ ಜಾರಿಯಾಗಲಿದೆ’ ಎಂದರು.

‘ಸಾರ್ವಜನಿಕರು ಇಂತಹ ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸಬಾರದು. ಲಿಂಗ ಪತ್ತೆ ಮಾಡುವ ಕೇಂದ್ರಗಳ ಬಗ್ಗೆ ಖಚಿತ ಮಾಹಿತಿ ನೀಡಿದವರಿಗೆ ಬಹುಮಾನ ನೀಡಲಾಗುವುದು ಹಾಗೂ ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ₹1.44 ಕೋಟಿ ಮೌಲ್ಯದ 785 ಮೊಬೈಲ್ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸ್ ಆಯುಕ್ತರು

“ಅವಳನ್ನು ಬದುಕಲು ಬಿಡಿ, ಸಮಾಜವನ್ನು ಅಭಿವೃದ್ಧಿ ಹೊಂದಲು ಬಿಡಿ” ಎಂಬ ಘೋಷವಾಕ್ಯದಡಿ ಜಿಲ್ಲೆಯಲ್ಲಿ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...