ಕಲಬುರಗಿ | ಮ್ಯೂಟೇಶನ್‌ಗೆ ಲಂಚ: ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ

Date:

ಕಲಬುರಗಿ ತಾಲೂಕಿನ ಕುಮಸಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜಮೀನಿನ ಮ್ಯೂಟೇಶನ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಲ್ ಕಲೆಕ್ಟರ್ ಒಬ್ಬರು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಸೋಮವಾರ ನಡೆದಿದೆ.

- Advertisement -

ಬಂಧಿತನನ್ನು ಕುಮಸಿ ಗ್ರಾಮ ಪಂಚಾಯತಿಯ ಬಿಲ್ ಕಲೆಕ್ಟರ್ ಮಲ್ಲಿಕಾರ್ಜುನ ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಗಣಜಲಖೇಡ ಗ್ರಾಮದ ಅನೀಲಕುಮಾರ್ ರಾಠೋಡ ಅವರು ತಮ್ಮ ತಂದೆಯ ಹೆಸರಿನಲ್ಲಿದ್ದ ಜಮೀನನ್ನು ತಾಯಿಯ ಹೆಸರಿಗೆ ಮ್ಯೂಟೇಶನ್ ಮಾಡಿಕೊಡುವಂತೆ ಅರ್ಜಿ ಸಲ್ಲಿಸಿದ್ದರು. ಈ ಕಾರ್ಯಕ್ಕಾಗಿ ಮಲ್ಲಿಕಾರ್ಜುನ ಅವರು ₹4,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಇದರಲ್ಲಿ ಈಗಾಗಲೇ ₹2,000 ಅನ್ನು ಫೋನ್‌ಪೇ ಮೂಲಕ ಸ್ವೀಕರಿಸಿದ್ದ ಅವರು, ಉಳಿದ ₹2,000 ನಗದು ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅವರನ್ನು ಬಂಧಿಸಿದ್ದಾರೆ.

ಲೋಕಾಯುಕ್ತ ಎಸ್‌ಪಿ ಸಿದ್ಧರಾಜು ಸಿ. ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಇನ್ಸ್‌ಪೆಕ್ಟರ್ ರಾಜಶೇಖರ ಬಡದೆಸಾರ ನೇತೃತ್ವದ ತಂಡ ಯಶಸ್ವಿಯಾಗಿ ನೆರವೇರಿಸಿದೆ.

ಇದನ್ನು ಓದಿದ್ದೀರಾ? ಯಾದಗಿರಿ | ಕಾನೂನು ಅರಿವು, ನೆರವು ಕುರಿತು ಜಾಗೃತಿ ಕಾರ್ಯಕ್ರಮ

ಪ್ರಾಥಮಿಕ ತನಿಖೆಯಲ್ಲಿ ಆರೋಪದ ಸತ್ಯಾಸತ್ಯತೆ ದೃಢಪಟ್ಟ ಹಿನ್ನೆಲೆ ಮಲ್ಲಿಕಾರ್ಜುನ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...