ಕಲಬುರಗಿ | ಮಕ್ಕಳ ಮೊಟ್ಟೆಗೂ ಲಂಚ: ಅಂಗನವಾಡಿ ಟೀಚರ್‌ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿ ಲೋಕಾಯುಕ್ತ ಬಲೆಗೆ

Date:

ನಗರದ ಸ್ಟೇಷನ್ ಬಝಾರ್ ಅಂಗನವಾಡಿ ಕೇಂದ್ರದಲ್ಲಿ ಮೊಟ್ಟೆ ಹಣ ಬಿಡುಗಡೆ ಮಾಡುವುದಕ್ಕಾಗಿ ಲಂಚ ಪಡೆಯುತ್ತಿದ್ದ ಅಂಗನವಾಡಿ ಟೀಚರ್ ಹಾಗೂ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿಯನ್ನು ಲೋಕಾಯುಕ್ತ ಪೊಲೀಸರು ಬುಧವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

- Advertisement -

ಬಂಧಿತರನ್ನು ಅಂಗನವಾಡಿ ಟೀಚರ್ ಹೀನಾ ಹಾಗೂ ಯುಎಫ್‌ಡಬ್ಲ್ಯೂಸಿ ಸಿಬ್ಬಂದಿ ಪಿಂಕುಬಾಯಿ ಗಾಯಕ್ವಾಡ್ ಎಂದು ಗುರುತಿಸಲಾಗಿದೆ. ಉದಯನಗರ ನಿವಾಸಿ ಸೌಭಾಗ್ಯ ಬಲಭೀಮ ರಾಠೋಡ ಅವರು ನೀಡಿದ ದೂರಿನ ಮೇರೆಗೆ ಲೋಕಾಯುಕ್ತ ಎಸ್ಪಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್–2 ರಾಜಶೇಖರ ಬಡದೆಸಾರ ನೇತೃತ್ವದ ತಂಡ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಸ್ಟೇಷನ್ ಬಝಾರ್ ಅಂಗನವಾಡಿ ಕೇಂದ್ರಕ್ಕೆ ಮೂರು ತಿಂಗಳ ಮೊಟ್ಟೆ ಹಣವಾಗಿ 14,490 ರೂ. ಜಮೆಯಾಗಿದ್ದು, ಹಣ ಬಿಡುಗಡೆಗೆ ಆರೋಪಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಒಂದು ತಿಂಗಳ ಮೊಟ್ಟೆ ಹಣ 4,830 ರೂ. ಹಾಗೂ ನವೆಂಬರ್-ಡಿಸೆಂಬರ್‌ ತಿಂಗಳಿಗೆ ತಲಾ 600 ರೂ.ನಂತೆ ಒಟ್ಟು 6,030 ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನು ಓದಿದ್ದೀರಾ? ಕಲಬುರಗಿ | ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಯುಜಿಸಿ ನಿಯಮ ಜಾರಿಗೆ ಒತ್ತಾಯಿಸಿ ಫೆ.9ರಂದು ರಾಜ್ಯಾದ್ಯಂತ ದಸಂಸ ಪ್ರತಿಭಟನೆ

ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್: ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕ ಪರಿಶೀಲನೆ ನಡೆಸಲಿ: ಬಹುಭಾಷ ನಟ ಪ್ರಕಾಶ್ ರೈ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾಗಿರುವ ಗೊಂದಲಗಳಿಗೆ...

ಕಲಬುರಗಿ | ಬರಗಾಲ ಪ್ಯಾಕೇಜ್ 1000 ಕೋಟಿ ರೂ. ಘೋಷಣೆ ಸೇರಿ ಇತರೆ ಬೇಡಿಕೆ ಈಡೇರಿಕೆಗೆ ಕೆಪಿಆರ್‌ಎಸ್‌ ಆಗ್ರಹ

ರಾಜ್ಯ ಸರ್ಕಾರ ವಿಶೇಷ ಅಧಿವೇಶನದಲ್ಲಿ ಕಲಬುರಗಿ ಸಂಪೂರ್ಣ ಬರ ಪೀಡಿತ ಪ್ರದೇಶವೆಂದು...

ಕಲಬುರಗಿ | ಸಿಡಿಲು ಬಡಿದು ಇಬ್ಬರು ಮಹಿಳೆಯರ ಸಾವು

ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರು...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...