ಕಲಬುರಗಿ | ಸಮುದಾಯದ ಯುವಜನರಿಗೆ ಆಶಾಕಿರಣವಾದ ವಧು-ವರರ ವೇದಿಕೆ ಸಮಾವೇಶ

Date:

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಡೆತಡೆಗಳ ನಡುವೆ ಬದುಕು ಕಟ್ಟಿಕೊಳ್ಳುತ್ತಿರುವ ಶೋಷಿತ ಸಮುದಾಯದ ಯುವಕ-ಯುವತಿಯರಿಗೆ ಸೂಕ್ತ ಜೀವನ ಸಂಗಾತಿ ದೊರಕಿಸುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಛಲವಾದಿ ಬುದ್ದಿಸ್ಟ್ ವಧು-ವರರ ಮಾಹಿತಿ ಸೇವಾ ಸಂಘ (ರಿ), ಕಲಬುರಗಿ ವತಿಯಿಂದ ನಗರದ ರಾಜಾಪೂರ ಬುದ್ಧ ವಿಹಾರ ಆವರಣದ ಶ್ರೀ ಈಶ್ವರಪ್ಪ ಮೆಮೋರಿಯಲ್ ಹಾಲ್‌ನಲ್ಲಿ ಭಾನುವಾರ ಆಯೋಜಿಸಿದ್ದ ವಧು-ವರರ ಸಮಾವೇಶ ಗಮನ ಸೆಳೆಯಿತು.

- Advertisement -

ಸಾಮಾಜಿಕ ಜವಾಬ್ದಾರಿಯೊಂದಿಗೆ ನಡೆದ ಈ ಸಮಾವೇಶವು ಕೇವಲ ವಿವಾಹ ಮಾಹಿತಿ ವಿನಿಮಯ ಕಾರ್ಯಕ್ರಮವಾಗಿರದೆ, ಸಮಾನತೆ, ಬೌದ್ಧ ಮೌಲ್ಯಗಳು ಮತ್ತು ಸಮುದಾಯದ ಐಕ್ಯತೆಯ ಸಂದೇಶ ಸಾರಿದ ವೇದಿಕೆಯಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಕಾರ್ಯಕ್ರಮವನ್ನು ತಥಾಗತ ಗೌತಮ ಬುದ್ಧ ಹಾಗೂ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಲಾಯಿತು. ಪೂಜ್ಯ ವರಜ್ಯೋತಿ ಬಂತೇಜಿ ದಿವ್ಯ ಸಾನಿಧ್ಯ ವಹಿಸಿ ಬುದ್ಧ ವಂದನೆ ಹಾಗೂ ಪಂಚಶೀಲ ಪಠಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಂಗಣದಲ್ಲಿ ಬೌದ್ಧ ಧರ್ಮದ ಶಾಂತಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ವಾತಾವರಣ ಮೂಡಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಚಂದ್ರಾಮ ಹುಬಳಿ, “ಶೋಷಿತ ಸಮುದಾಯದ ಮಕ್ಕಳಿಗೆ ನೆರವಾಗುವ ಉದ್ದೇಶದಿಂದ 1960ರಲ್ಲಿ ಈ ಸಂಘವನ್ನು ಸ್ಥಾಪಿಸಲಾಗಿದೆ. ಹಲವು ದಶಕಗಳಿಂದ ಸಂಘವು ನಿರಂತರ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದು, ಇದುವರೆಗೆ ಸುಮಾರು 295 ಹೆಣ್ಣು ಮಕ್ಕಳ ವಿವಾಹವನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ” ಎಂದು ತಿಳಿಸಿದರು.

“ಇಂದಿನ ಕಾಲಘಟ್ಟದಲ್ಲಿ ಆರ್ಥಿಕ ಸಂಕಷ್ಟ, ಸಾಮಾಜಿಕ ಭಿನ್ನತೆ ಹಾಗೂ ಮಾಹಿತಿಯ ಕೊರತೆಯಿಂದ ಅನೇಕ ಯುವಕ-ಯುವತಿಯರ ವಿವಾಹ ವಿಳಂಬವಾಗುತ್ತಿದೆ. ಇದನ್ನು ಮನಗಂಡು ವರ್ಷದಲ್ಲಿ ಎರಡು ಬಾರಿ ವಧು-ವರರ ಸಮಾವೇಶಗಳನ್ನು ಆಯೋಜಿಸಲಾಗುತ್ತಿದೆ. ಜೊತೆಗೆ ಉಚಿತ ಸಾಮೂಹಿಕ ವಿವಾಹಗಳನ್ನೂ ನಡೆಸಲಾಗುತ್ತಿದೆ” ಎಂದು ಹೇಳಿದರು.

ಹೆಚ್ಚಿನ ಸಂಖ್ಯೆಯಲ್ಲಿ ಯುವಕ, ಯುವತಿಯರು ತಮ್ಮ ಮಾಹಿತಿಯನ್ನು ಸಂಘದಲ್ಲಿ ನೋಂದಾಯಿಸಿಕೊಳ್ಳಬೇಕು. ಸಮಾಜದ ಎಲ್ಲ ಕುಟುಂಬಗಳು ಈ ವೇದಿಕೆಯನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

1879395

ಈ ವೇಳೆ ಮಾತನಾಡಿದ ಬಿ.ಆರ್. ಬುದ್ಧ, “ಸಮುದಾಯದ ಹೆಣ್ಣು ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ವೇದಿಕೆ ಮಹತ್ವದ ಕಾರ್ಯ ನಿರ್ವಹಿಸುತ್ತಿದೆ. ವಿವಾಹ ಎಂಬುದು ಕೇವಲ ಕುಟುಂಬದ ಕಾರ್ಯಕ್ರಮವಲ್ಲ, ಅದು ಸಾಮಾಜಿಕ ಭದ್ರತೆ ಮತ್ತು ಬದುಕಿನ ನೆಮ್ಮದಿಯ ಭಾಗವಾಗಿದೆ. ಈ ಸಂಘದ ಸೇವೆ ಅನೇಕ ಕುಟುಂಬಗಳಿಗೆ ಆಶಾಕಿರಣವಾಗಿದೆ” ಎಂದು ಹೇಳಿದರು.

ಸಂಜೆವಾಣಿ ದಿನಪತ್ರಿಕೆಯ ಸಂಪಾದಕರಾದ ಶಿವಲಿಂಗಪ್ಪ ದೊಡ್ಡಮನಿ ಮಾತನಾಡಿ, “ಆಧುನಿಕ ಜೀವನದಲ್ಲಿ ಯುವಜನರು ಶಿಕ್ಷಣ, ಉದ್ಯೋಗ ಹಾಗೂ ಬದುಕು ಕಟ್ಟಿಕೊಳ್ಳುವ ಹೋರಾಟದಲ್ಲೇ ಹೆಚ್ಚಿನ ಸಮಯ ಕಳೆಯುತ್ತಿದ್ದಾರೆ. ಪರಿಣಾಮವಾಗಿ ವಿವಾಹದಂತಹ ಮಹತ್ವದ ಜೀವನ ಘಟ್ಟವನ್ನು ತಡವಾಗಿ ಪರಿಗಣಿಸುತ್ತಿದ್ದಾರೆ. ಕುಟುಂಬ, ಸಮಾಜ ಹಾಗೂ ವೈಯಕ್ತಿಕ ಬದುಕಿನ ಸಮತೋಲನಕ್ಕಾಗಿ ವಿವಾಹದ ಮಹತ್ವವನ್ನು ಯುವಕರು ಅರ್ಥಮಾಡಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಛಲವಾದಿ ಬುದ್ದಿಸ್ಟ್ ವಧು-ವರರ ಮಾಹಿತಿ ಸೇವಾ ಸಂಘದ ಪದಾಧಿಕಾರಿಗಳು, ಆಡಳಿತ ಮಂಡಳಿ ಸದಸ್ಯರು, ಸಮಾಜದ ಹಿರಿಯರು, ಯುವಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ವಧು-ವರರ ಕುಟುಂಬಸ್ಥರು ಪರಸ್ಪರ ಮಾಹಿತಿ ವಿನಿಮಯ ಮಾಡಿಕೊಂಡು ಸಂಘದ ಕಾರ್ಯವನ್ನು ಶ್ಲಾಘಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಸಂವಿಧಾನದ ಮೌಲ್ಯಗಳೊಂದಿಗೆ ಒಂದಾದ ಜೋಡಿ

ಸಮಾಜದ ಹಿಂದುಳಿದ ವರ್ಗಗಳ ಯುವಜನರಿಗೆ ಆಶಾಕಿರಣವಾಗಿ ಕಾರ್ಯನಿರ್ವಹಿಸುತ್ತಿರುವ ಈ ಸಂಘದ ಸಮಾಜಮುಖಿ ಸೇವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡವರ ಮೆಚ್ಚುಗೆಗೆ ಪಾತ್ರವಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...