ಕಲಬುರಗಿ ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ರವಿ ಎಂಬಾತ ವಿಜಯಕುಮಾರ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿಜಯಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯ ಪತ್ತೆ ಹಾಗೂ ಹತ್ಯೆಯ ಹಿಂದಿನ ಕಾರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇದನ್ನೂ ಓದಿ : ಹೆಸರಾಯಿತು ಕಲ್ಯಾಣ ಕರ್ನಾಟಕ; ಬದಲಾಗದ ಜನರ ಬದುಕು!





