ಕಲಬುರಗಿ | ಭಯ, ಭಕ್ತಿ ಮತ್ತು ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಅಳವಡಿಸಿಕೊಳ್ಳಬೇಕು: ಡಾ. ಪುಟ್ಟಮಣಿ ದೇವಿದಾಸ್

Date:

ಭಯ, ಭಕ್ತಿ ಹಾಗೂ ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷೆ (ಉತ್ತರ ಕರ್ನಾಟಕ) ಪುಟ್ಟಮಣಿ ದೇವಿದಾಸ್ ಅವರು ಹೇಳಿದರು.

- Advertisement -

ನಗರದ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಭಾರತೀಯ ಬೌದ್ಧ ಮಹಾಸಭಾ ಮಹಿಳಾ ಜಿಲ್ಲಾ ಘಟಕ, ಕಲಬುರಗಿ ವತಿಯಿಂದ ಆಯೋಜಿಸಲಾದ ಒಂದು ದಿನದ ಮಹಿಳಾ ದಮ್ಮ ಪ್ರಕಾಶನ ಶಿಬಿರವನ್ನು ಉದ್ದೇಶಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...
1039204

‘ಶತಮಾನಗಳಿಂದ ಶೋಷಣೆಗೆ ಒಳಗಾದ ಸಮುದಾಯಕ್ಕೆ ಬುದ್ಧ ಧರ್ಮವೇ ಮೂಲ ಧರ್ಮವಾಗಿದ್ದು, ಬುದ್ಧನು ನಮ್ಮ ಪೂರ್ವಜನೆಂದು ಡಾ. ಬಿ.ಆರ್. ಅಂಬೇಡ್ಕರ್ ಅವರು ನಮಗೆ ತಿಳಿಸಿಕೊಟ್ಟಿದ್ದಾರೆ’ ಎಂದು ಅವರು ಹೇಳಿದರು.

‘ಅಂಬೇಡ್ಕರ್ ಅವರು ಬಿಎಸ್‌ಐ ಸಂಘಟನೆಯ ಮೂಲಕ ತೋರಿದ ಮಾರ್ಗವನ್ನು ಮುಂದುವರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಬೌದ್ಧ ಧರ್ಮ ಸ್ವೀಕಾರದೊಂದಿಗೆ 22 ಪ್ರತಿಜ್ಞೆಗಳನ್ನು ನಿಷ್ಠೆಯಿಂದ ಪಾಲಿಸುವ ಅಗತ್ಯವಿದೆ’ ಎಂದು ಅವರು ತಿಳಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ, ಭೀಮಾ ಕೋರೆಗಾಂವ್ ವಿಜಯೋತ್ಸವ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಛನ್ನು ಭಂತೇಜಿ ಮತ್ತು ಸುಗಂದೋ ಭಂತೇಜಿಯವರು ಬುದ್ಧ ವಂದನೆ ನೆರವೇರಿಸಿ ಶಿಬಿರಕ್ಕೆ ಚಾಲನೆ ನೀಡಿದರು.

1039215 1

ಶಿಬಿರದಲ್ಲಿ ಸುರೇಶ್ ಕಾನೇಕರ್ ಅವರು ಉಪನ್ಯಾಸ ನೀಡಿದರು. ಡಾ. ಬಾಬುರಾವ ಅಣದುರೆ, ಬಬಿತಾಬಾಯಿ ರಾಹುಲ್ ಮತ್ತು ಉಷಾತಾಯಿ ಅವರು ದಮ್ಮ ಪ್ರಕಾಶನ ಕುರಿತು ತರಬೇತಿ ನೀಡಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಹೋರಾಟಗಾರರ ಬಂಧನವನ್ನು ಖಂಡಿಸಿ ಎಐಕೆಕೆಎಮ್‌ಎಸ್ ಪ್ರತಿಭಟನೆ

ಕಾರ್ಯಕ್ರಮವನ್ನು ಕವಿತಾ ಚಿಂಚೋಳಿ ನಿರೂಪಿಸಿದರು. ರಂಜನಿ ಸೋನು ಕಾಂಬಳೆ ಸ್ವಾಗತಿಸಿದರು. ಮಾಯಾ ಡಿ. ಕಾಂಬಳೆ ವಂದಿಸಿದರು.

ಈ ಸಂದರ್ಭದಲ್ಲಿ ಸಂಧ್ಯಾ ಕಾನೇಕರ್, ಡಾ. ವಿ.ಟಿ. ಕಾಂಬಳೆ, ದೇವರಾಜ್ ಕನ್ನಡಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...