ಕಲಬುರಗಿ | ವರದಿಯ ನಂತರ ಬರಗಾಲ ಘೋಷಣೆ ಭರವಸೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

Date:

ಉತ್ತರ ಕರ್ನಾಟಕದ ಮಳೆ ಕೊರತೆ ಇರುವ ಜಿಲ್ಲೆಗಳನ್ನು ಬರ ಪ್ರದೇಶವೆಂದು ಘೋಷಿಸಿ ಎಂಬ ಮನವಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬರಗಾಲ ಪ್ರದೇಶ ಎಂದು ಘೋಷಿಸಲು ಕಾನೂನಿನ ಚೌಕಟ್ಟಿದ್ದು, ರಾಜ್ಯದ ಎಲ್ಲಾ ಭಾಗಗಳ ಸ್ಥಿತಿಗತಿ ಪರಿಶೀಲಿಸಿದ ನಂತರ ನಿರ್ಧಾರಕ್ಕೆ ಬರಲಾಗುವುದು ಎಂದಿದ್ದಾರೆ.

- Advertisement -

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆ ಕೊರತೆಯಿಂದ ಬರದ ಸಮಸ್ಯೆ ತಲೆದೋರಿದ್ದು, ಕಲಬುರ್ಗಿ ಸೇರಿ ಸುತ್ತಲಿನ ಪ್ರದೇಶಗಳಲ್ಲಿ ಮಳೆ ಅಭಾವದಿಂದ ಬಿತ್ತನೆ ವಿಳಂಬವಾಗಿದೆ. ಹಲವೆಡೆ ಬಿತ್ತಿದ ಬೆಳೆಗಳು ನೀರಿಲ್ಲದೆ ನಾಶಗೊಂಡಿವೆ. ಬಾಧಿತ ಜಿಲ್ಲೆಗಳನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದು ಈ ಭಾಗದ ರೈತ ಸಂಘಟನೆಗಳು ಮನವಿ ಮಾಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬರಗಾಲ ಪರಿಸ್ಥಿತಿ ಅವಲೋಕಿಸಲು ಕಲ್ಯಾಣ ಕರ್ನಾಟಕ ಭಾಗಕ್ಕೆ ಭೇಟಿ ನೀಡಿದ್ದೇನೆ. ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳನ್ನು ಭೇಟಿ ಮಾಡಲಾಗುವುದು. ಸಂಪೂರ್ಣ ಅವಲೋಕನದ ನಂತರ ಸಭೆ ನಡೆಸಲಾಗುತ್ತದೆ” ಎಂದಿದ್ದಾರೆ.

ಸಮಸ್ಯೆ ಬಗೆಹರಿಸಿ ಎಂದು ಮನವಿ ಮಾಡಿದ ಜನರ ಅಹವಾಲುಗಳನ್ನು ಸ್ವೀಕರಿಸಿದ ಅವರು, “ರೈತರ ಸಮಸ್ಯೆ ಆಲಿಸಲು ಪ್ರಜಾಸೇವೆ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಲಾಗುತ್ತದೆ. ಅರ್ಜಿಗಳನ್ನು ಪರಿಶೀಲಿಸಿ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸ ಸರ್ಕಾರ ಮಾಡುತ್ತದೆ” ಎಂಬ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹ: ಅ.9ರಂದು ಮತ ಕಾವಲು ಸಮಿತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಎಸ್‌ಐಆರ್...