ಕಲಬುರಗಿ | ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಭಾಷಣ ಸ್ಪರ್ಧೆ

Date:

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತೋತ್ಸವ ಅಂಗವಾಗಿ ಜಿಲ್ಲಾ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಭಾಷಣ ಸ್ಪರ್ಧೆಯನ್ನು “ಡಾ. ಅಂಬೇಡ್ಕರ್ ಅರಿವು ಉತ್ಸವ–2026” ಹೆಸರಿನಲ್ಲಿ ನಗರದ ಸೆಂಟ್ ಮೇರಿ ಚರ್ಚ್‌ನ ಮದರ್ ತೆರೇಸಾ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಯಿತು.

- Advertisement -

ಕಲಬುರಗಿ ಜಿಲ್ಲಾ ಜಯಂತೋತ್ಸವ ಸಮಿತಿ, ಸ್ಲಮ್ ಜನರ ಸಂಘಟನೆ ಕರ್ನಾಟಕ ಜಿಲ್ಲಾ ಸಮಿತಿ ಹಾಗೂ ಬದುಕು ಕರಿಯರ್ ಅಕಾಡೆಮಿ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಾಳೆ ಜಿಎಸ್‌ಟಿ ಮಂಡಳಿ ಸಭೆ: ಅಧಿಕಾರ ಹಂಚಿಕೆಯ ಅಸಮತೋಲನ;...

ಜಿಎಸ್‌ಟಿ ಮಂಡಳಿಯು ದೇಶದ 'ಸಹಕಾರ ಒಕ್ಕೂಟ ವ್ಯವಸ್ಥೆ'ಗೆ ಒಂದು ಉದಾಹರಣೆಯಾಗಿದ್ದರೂ, ಮತದಾನದ ಪ್ರಕ್ರಿಯೆಯಲ್ಲಿ ಕೇಂದ್ರಕ್ಕಿರುವ ಮೇಲುಗೈ ರಾಜ್ಯಗಳ ಸ್ವಾಯತ್ತತೆಗೆ ಧಕ್ಕೆ ತರುತ್ತಿದೆ ಎಂಬುದು ಸ್ಪಷ್ಟ. ಜಿಎಸ್‌ಟಿ ಜಾರಿಗೆ ಬಂದ ನಂತರ ರಾಜ್ಯಗಳು ತಮ್ಮ...

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ...

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ, ಪೊಲೀಸ್, ದೈಹಿಕ ಶಿಕ್ಷಣ ಶಿಕ್ಷಕ, ರಾಜಕಾರಣಿ, ಕಾದಂಬರಿಕಾರ... ಅವರ ಬದುಕೇ ಕಾದಂಬರಿಯ ಕಥಾವಸ್ತುವಾಗಿತ್ತು. ತಮ್ಮ ಬದುಕಿನ ಕೊನೆಯ ದಿನವೂ ಅವರು...

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...
1594856

ಕಾರ್ಯಕ್ರಮವನ್ನು ಉದ್ಘಾಟಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ ಅವರು ಮಾತನಾಡಿ, “ಡಾ. ಅಂಬೇಡ್ಕರ್ ಅವರ ಶಿಕ್ಷಣ ಮತ್ತು ಚಿಂತನೆಗಳು ವಿಶ್ವಕ್ಕೆ ಮಾದರಿಯಾಗಿದೆ. ಅವರ ಹೋರಾಟ ಮತ್ತು ಸಾಧನೆ ದೇಶದ ಏಳಿಗೆಗಾಗಿ ಎಂಬುದನ್ನು ಯುವಪೀಳಿಗೆ ಅರಿಯಬೇಕು” ಎಂದು ಹೇಳಿದರು. ಈ ಸಂದರ್ಭದಲ್ಲಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಹಣಮಂತ ಇಟಗಿ ಅವರ ಸೇವೆಯನ್ನು ಅವರು ಪ್ರಶಂಸಿಸಿದರು.

“ಮೆರವಣಿಗೆ ಅಂಬೇಡ್ಕರ್ ಸಾಕು, ಬರವಣಿಗೆ ಅಂಬೇಡ್ಕರ್ ಬೇಕು” ಎಂಬ ಸಂಕಲ್ಪವನ್ನು ವಿದ್ಯಾರ್ಥಿಗಳು ಕೈಗೊಂಡರು. ಸಂವಿಧಾನದ ಪೀಠಿಕೆ ವಾಚನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

1594855

ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಕ್ರಮವಾಗಿ ₹5000, ₹3000 ಮತ್ತು ₹2000 ನಗದು ಬಹುಮಾನ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮಕ್ಕೆ ಫಾದರ್ ಜೋಶೇಪ್ ಪ್ರವೀಣ್ ಸಾನಿಧ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀಧರ್ ಸಾರವಾಡ, ಐಸಾಕ್ ಅಮೃತರಾಜ, ನಿವೃತ್ತ ಡಿವೈಎಸ್ಪಿ ವಿಜಯಕುಮಾರ್ ವಿ.ಎಚ್., ಚಂದ್ರಶೇಖರ ಕಟ್ಟಿಮನಿ ಹಾಗೂ ಅರವಿಂದ್ ಕಮಲಾಪುರ ಭಾಗವಹಿಸಿದ್ದರು. ಅಧ್ಯಕ್ಷತೆಯನ್ನು ಹಣಮಂತ ಇಟಗಿ ವಹಿಸಿದ್ದರು.

1594858

ಇದನ್ನು ಓದಿದ್ದೀರಾ? ಕಲಬುರಗಿ | ಅರೆಬರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಮಹಿಳೆ ಶವ: ಶಿಕ್ಷಕಿಯದು ಎಂದು ದೃಢ

ಕಾರ್ಯಕ್ರಮವನ್ನು ಅಲ್ಲಮಪ್ರಭು ನಿಂಬರ್ಗಾ ಸ್ವಾಗತಿಸಿದರು. ಪಂಡಿತ ಮದಗುಣಕಿ ನಿರೂಪಣೆ ಮಾಡಿದರು. ಸಂತೋಷ ಪೂಜಾರಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...