ಕಲಬುರಗಿ | ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ಸಿಪಿಐ ಪ್ರತಿಭಟನೆ

Date:

Advertisements

ಕೇಂದ್ರ ಸರ್ಕಾರ ನಡೆಸುತ್ತಿರುವ ಭಾವನಾತ್ಮಕ ರಾಜಕಾರಣವನ್ನು ಕೈಬಿಟ್ಟು ಜನರ ಬದುಕು ಕಟ್ಟುವ ರಾಜಕಾರಣ ಮಾಡುವಂತೆ ಹಾಗೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಂಡಿಸಲಿರುವ ಬಜೆಟ್‌ ಪೂರ್ವ ಜನರ ಹಕ್ಕೊತ್ತಾಯಗಳಿಗೆ ಭಾರತ ಕಮ್ಯೂನಿಸ್ಟ್ ಪಕ್ಷ‌ ಆಗ್ರಹಿಸಿದೆ.

ಸಿಪಿಐ ರಾಜ್ಯ ಮಂಡಳಿ ಕರೆಯ ಮೇರೆಗೆ ಇಂದು ಸಿಪಿಐ ಕಲಬುರಗಿ ಜಿಲ್ಲಾ ಮಂಡಳಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಕೇಂದ್ರ ಸರ್ಕಾರದ ಪ್ರತಿಕೃತಿ ದಹನ ಚಳವಳಿ ನಡೆಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಡಾ. ಮಹೇಶ ಕುಮಾರ ರಾಠೋಡ್ ಮಾತನಾಡಿ, “ದೇಶದ ಸುಪ್ರೀಂ ಕೋರ್ಟ್‌ ಕೊಟ್ಟ ತೀರ್ಪಿನ ಆಧಾರದ ಮೇಲೆ ನಿರ್ಮಾಣಗೊಳ್ಳುತ್ತಿದ್ದು, ರಾಜಕೀಯ ಲಾಭಕ್ಕಾಗಿ ಬಿಜೆಪಿಯು ರಾಮ ಮಂದಿರದಂತಹ ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ನಡೆಸುತ್ತಿದೆ. ಕೇಂದ್ರ ಸರ್ಕಾರ ಸೇರಿದಂತೆ ಎಲ್ಲ ರಾಜ್ಯ ಸರ್ಕಾರಗಳು ಈ ರೀತಿಯ ನಡೆಯು ಸಂವಿಧಾನ ವಿರೋಧಿಯಾಗಿದ್ದು, ಇಂತಹ ಭಾವನಾತ್ಮಕ ವಿಷಯಗಳ ರಾಜಕಾರಣದ ಬದಲಿಗೆ ನಿಜವಾಗಲೂ ಜನರ ಬದುಕನ್ನು ಕಟ್ಟುವಂತಹ ರಾಜಕಾರಣ ಮಾಡಬೇಕು” ಎಂದು ಒತ್ತಾಯಿಸಿದರು.

Advertisements

“ಬರಗಾಲ ಪರಿಹಾರ ನಿಧಿ, ಮನರೇಗಾ ಯೋಜನೆ, ರಾಜ್ಯದ ಜನತೆಯ ವಸತಿ ಸಮಸ್ಯೆ, ಕಾರ್ಪೊರೇಟ್- ಪರ ಕಾರ್ಮಿಕ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ರೈತ-ವಿರೋಧಿ ಕಾಯ್ದೆ ತಿದ್ದುಪಡಿಗಳನ್ನು ಹಿಂಪಡೆಯಬೇಕು. ಕಾಂಗ್ರೆಸ್ ಪಕ್ಷದ 6ನೇ ಗ್ಯಾರಂಟಿಯಾದ ಅಂಗನವಾಡಿ, ಅಕ್ಷರ ದಾಸೋಹ ಬಿಸಿಯೂಟ ಹಾಗೂ ಆಶಾ ಕಾರ್ಯಕರ್ತೆ ಈ ಮೂರೂ ಕ್ಷೇತ್ರಗಳ ಕಾರ್ಯಕರ್ತೆಯರ ಗೌರವಧನವನ್ನು ಹೆಚ್ಚಿಸಬೇಕು” ಎಂದು ಆಗ್ರಹಿಸಿದರು.

“ಮೋದಿ ಭರವಸೆ ಕೊಟ್ಟಿದ್ದ ವಾರ್ಷಿಕ ಎರಡು ಕೋಟಿ ಉದ್ಯೋಗ, ದಲಿತ ಕಾಲೋನಿಗಳ ಮತ್ತು ಬುಡಕಟ್ಟು ಭರವಸೆ ಕೊಟ್ಟಿದ್ದ ಹಾಡಿಗಳ ಸಮಗ್ರ ಅಭಿವೃದ್ಧಿಗೆ ಪ್ರತಿ ಕಾಲೋನಿ ಮತ್ತು ಹಾಡಿಗೂ ಪ್ರತ್ಯೇಕ ಕ್ರಿಯಾ ಯೋಜನೆ ಸಿದ್ಧಪಡಿಸಿ ಅಗತ್ಯ ಹಣಕಾಸಿನ ನೆರವನ್ನು ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನದಲ್ಲಿ ಭರಿಸಬೇಕು. ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯಗಳ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹಿಂದಿನ ಅಧಿಕಾರಾವಧಿಯಲ್ಲಿ ನಡೆಸಲಾದ ಸಾಮಾಜಿಕ ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಬಿಹಾರ ರಾಜ್ಯದಲ್ಲಿ ಬಿಡುಗಡೆ ಮಾಡಿರುವಂತೆ ನಮ್ಮ ರಾಜ್ಯದಲ್ಲೂ ಬಿಡುಗಡೆಗೊಳಿಸಬೇಕು” ಎಂದು ಆಗ್ರಹಿಸಿದರು.

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮುಂಬರುವ ಬಜೆಟ್‌ನಲ್ಲಿ ಈ ಎಲ್ಲ ಅಂಶಗಳನ್ನು ಸೇರ್ಪಡೆಗೊಳಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಧಾನಿ ಮೋದಿ ಡೋಂಗಿ ಪ್ರಚಾರ ಮಾಡುತ್ತಿದ್ದಾರೆ: ಸಿಪಿಐ

ಹೋರಾಟದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ರಾಜ್ಯ ಮಂಡಳಿ ಸದಸ್ಯ ಮೌಲಾ ಮುಲ್ಲಾ, ಸಿಪಿಐ ಜಿಲ್ಲಾ ಸಹಕಾರ್ಯದರ್ಶಿಗಳಾದ ಪ್ರಭುದೇವ ಯಳಸಂಗಿ, ಪದ್ಮಾವತಿ ಪಾಟೀಲ್, ಸಿಪಿಐ ಕಾರ್ಯಕಾರಿ ಮಂಡಳಿ ಸದಸ್ಯ ಭೀಮಾಶಂಕರ ಮಾಡಿಯಾಳ, ಸಿಪಿಐ ನಗರ ಸಹ ಕಾರ್ಯದರ್ಶಿ ಶಿವಲಿಂಗಮ್ಮ ಲೇಂಗಟೀಕರ್, ಸಿಪಿಐ ತಾಲೂಕು ಕಾರ್ಯದರ್ಶಿ ಶರಣಬಸಪ್ಪ ಗಣಜಲಖೇಡ, ಸಹ ಕಾರ್ಯದರ್ಶಿ  ಶರಣಮ್ಮ, ಜಿಲ್ಲಾ ಖಜಾಂಚಿ ಹೆಚ್ ಎಸ್ ಪತಕಿ, ಸಿಪಿಐ ಜೇವರ್ಗಿ ತಾಲೂಕು ಕಾರ್ಯದರ್ಶಿ ಮಲ್ಲಿಕಾರ್ಜುನ ದೊಡ್ಡಮನಿ, ಯಡ್ರಾಮಿ ತಾಲೂಕು ಕಾರ್ಯದರ್ಶಿ ಭೀಮರಾಯ ಮುದಬಸ್ಸಪ್ಪಗೋಳ, ಆಳಂದ ತಾಲುಕು ಕಾರ್ಯದರ್ಶಿ ಮೈಲಾರಿ ಜೋಗೆ, ನಗರ ಮುಖಂಡರುಗಳಾದ ಜಯಶ್ರೀ, ಅನಿಲ ಕಾಂಬಳೆ ಸೇರಿದಂತೆ ಬಹುತೇಕರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್ ವಿಭಾಗದ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಾಗಾರ

ಬೆಂಗಳೂರು ನಿಮ್ಹಾನ್ಸ್ ಟೆಲಿ-ಮನಸ್ ಅಪೆಕ್ಸ್ ತಂಡದಿಂದ ಧಾರವಾಡ ಡಿಮ್ಹಾನ್ಸ್ ಸಂಸ್ಥೆಯ ಟೆಲಿ-ಮನಸ್...

ಕಲಬುರಗಿ | ಶಾಲಾ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ; ಗ್ರಾಮಸ್ಥರಿಂದ ಪ್ರತಿಭಟನೆ

ಸೇಡಂ ತಾಲ್ಲೂಕಿನ ಮಲ್ಕಾಪಲ್ಲಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೇಲ್ಚಾವಣಿ...

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

Download Eedina App Android / iOS

X