ಕಲಬುರಗಿ | ತಾರತಮ್ಯವಿಲ್ಲದೆ ಎಲ್ಲ ರೈತರಿಗೆ ಬೆಳೆವಿಮೆ ಪರಿಹಾರ ಬಿಡುಗಡೆ ಮಾಡಬೇಕು: ಶರಣಬಸಪ್ಪ ಮಮಶೆಟ್ಟಿ

Date:

ಬರಪೀಡಿತ ಎಲ್ಲ ರೈತರಿಗೆ ತಾರತಮ್ಯವಿಲ್ಲದೆ ಬೆಳೆವಿಮೆ ಪರಿಹಾರವನ್ನು ತಕ್ಷಣವೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ(ಕೆಪಿಆರ್‌ಎಸ್) ಕಲಬುರಗಿ ಜಿಲ್ಲಾ ಘಟಕವು ರಾಜ್ಯ ಸರ್ಕಾರ ಮತ್ತು ಬೆಳೆವಿಮಾ ಕಂಪನಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿತು.

- Advertisement -

ಸಂಘದ ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಅವರು ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿ, “ರಾಜ್ಯದಲ್ಲಿ ರೈತರು ಭೀಕರ ಬರಗಾಲದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸರ್ಕಾರ ಸಚಿವ ಸಂಪುಟ ರಚನೆ, ಅಧಿಕಾರದ ರಾಜಕಾರಣದಲ್ಲಿ ತೊಡಗಿದೆ. ರೈತರ ಸಮಸ್ಯೆಗಳಿಗೆ ಆದ್ಯತೆ ನೀಡುವ ಬದಲು ರಾಜಕೀಯ ಬೆಳವಣಿಗೆಗಳಿಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ” ಎಂದು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಜಿಲ್ಲೆಯಲ್ಲಿ ಉದ್ದು, ಸೋಯಾಬಿನ್, ಎಳ್ಳು ಸೇರಿದಂತೆ ವಿವಿಧ ಬೆಳೆಗಳು ಮಳೆ ಕೊರತೆಯಿಂದ ಹಾನಿಗೊಳಗಾಗಿದ್ದು, ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಲದ ಹೊರೆಯಿಂದ ನಲುಗುತ್ತಿರುವ ರೈತರಿಗೆ ಬೆಳೆ ವಿಮೆ ಪರಿಹಾರವೂ ಸಮರ್ಪಕವಾಗಿ ದೊರೆಯುತ್ತಿಲ್ಲ. ವಿಮಾ ಕಂಪನಿಗಳು ಮತ್ತು ಸರ್ಕಾರ ತಾರತಮ್ಯದಿಂದ ನಡೆದುಕೊಂಡು ಅನೇಕ ರೈತರನ್ನು ವಿಮೆ ಹಣದಿಂದ ವಂಚಿಸಿವೆ” ಎಂದು ಅವರು ದೂರಿದರು.

ಈ ಸುದ್ದಿ ಓದಿದ್ದೀರಾ? ಗದಗ | ಎಚ್ ಕೆ ಪಾಟೀಲ್‌ಗೆ ತಪ್ಪಿದ ಸಚಿವ ಸ್ಥಾನ: ಕಾಂಗ್ರೆಸ್ ಸದಸ್ಯರ ರಾಜೀನಾಮೆ

“ಜಿಲ್ಲಾಡಳಿತ, ರಾಜ್ಯ ಸರ್ಕಾರ ಹಾಗೂ ಬೆಳೆವಿಮಾ ಕಂಪನಿಗಳು ಕೂಡಲೇ ಮಧ್ಯಪ್ರವೇಶಿಸಿ ಎಲ್ಲ ಅರ್ಹ ರೈತರಿಗೆ ಯಾವುದೇ ತಾರತಮ್ಯವಿಲ್ಲದೆ ಬೆಳೆವಿಮೆ ಪರಿಹಾರವನ್ನು ಬಿಡುಗಡೆ ಮಾಡಬೇಕು. ಬರಗಾಲದಿಂದ ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ತಕ್ಷಣ ಧಾವಿಸಬೇಕು” ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಪರವಾಗಿ ಒತ್ತಾಯಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....