ಕಲಬುರಗಿ | ಕ್ರೂಸರ್-ಲಾರಿ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಐವರ ಸಾವು

Date:

ಕ್ರೂಸರ್‌ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಕಲಬುರಗಿ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದೆ.

- Advertisement -

ಮೃತರೆಲ್ಲರೂ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ಒಂದೇ ಕುಟುಂಬದವರು ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ತೋಲುಸಾಬ್ ಕ್ಯಾಶ್ವಾರ್ (27), ಹುಸೇನ್ ಷಾ (48), ಮೈಬೂಬ್ ಅಲಿ (45), ರಸೂಲ್ ಬೀ (42) ಮತ್ತು ಫಾತೀಮಾ ಅಲಿ (38) ಮೃತರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ವೈಯಕ್ತಿಕ ಕೆಲಸದ ನಿಮಿತ್ತ ಕ್ರೂಸರ್ ವಾಹನದಲ್ಲಿ ಯಾದಗಿರಿ ತೆರಳಿ ಮಧ್ಯರಾತ್ರಿ ವಾಪಸ್‌ ಬರುವಾಗ ತಮ್ಮ ಊರಾದ ಇಂಗಳಗಿಗೆ ವಾಪಸ್ ಆಗುತ್ತಿದ್ದರು. ಈ ವೇಳೆ ಲಾಡ್ಲಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಿನಿಂದ ವೇಗವಾಗಿ ಬಂದ ಲಾರಿ ಕ್ರೂಸರ್ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಕ್ರೂಸರ್ ವಾಹನವು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಘಟನಾ ಸ್ಥಳಕ್ಕೆ ವಾಡಿ ಠಾಣೆಯ ಪೊಲೀಸರು, ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ್ದಾರೆ. ಅಪಘಾತ ನಡೆದ ಜಾಗವನ್ನು ಪರಿಶೀಲನೆ ನಡೆಸಲಾಗಿದ್ದು, ನುಜ್ಜುಗುಜ್ಜಾದ ವಾಹನದಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಕಂಬನಿ ಮಿಡಿದ ಸಚಿವ ಪ್ರಿಯಾಂಕ್‌ ಖರ್ಗೆ :

ಕಲಬುರಗಿ ಜಿಲ್ಲೆಯ ವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ರೂಜರ್ ಮತ್ತು ಲಾರಿ ನಡುವಿನ ಭೀಕರ ಅಪಘಾತದಲ್ಲಿ ಕ್ರೂಸರ್ ಗಾಡಿಯಲ್ಲಿದ್ದ ಇಂಗಳಗಿ ಗ್ರಾಮದ ಐವರು ಸ್ಥಳದಲ್ಲೇ ಮೃತರಾಗಿರುವ ವಿದ್ರಾವಕ ಸುದ್ದಿಯು ಮನಸಿನಲ್ಲಿ ತಲ್ಲಣವನ್ನುಂಟು ಮಾಡಿದೆ. ಭಾರವಾದ ಮನಸ್ಸಿನಿಂದಲೇ ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ, ಮೃತರ ಕುಟುಂಬ ವರ್ಗವು ಧೈರ್ಯ ತಂದುಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ಬ್ರಿಮ್ಸ್ ವೈದ್ಯನ ಮೇಲೆ ಹಲ್ಲೆ ಪ್ರಕರಣ : ಸಂಸದ ಸಾಗರ್‌ ಖಂಡ್ರೆ, ಡಿಸಿ ಶಿಲ್ಪಾ ಶರ್ಮಾ ಭೇಟಿ, 7 ಜನರ ಬಂಧನ

ʼಈ ಕುರಿತು ಜಿಲ್ಲಾ ಪೊಲೀಸ್ ಇಲಾಖೆಯೊಂದಿಗೆ ಮಾತನಾಡಿದ್ದೇನೆ, ನಾನು ಮತ್ತು ಜಿಲ್ಲಾಡಳಿತವು ಮೃತರ ಕುಟುಂಬದವರ ಅಗತ್ಯ ನೆರವಿಗೆ ಪೂರ್ಣ ಸಹಕಾರ ನೀಡಲಿದ್ದೇವೆ. ಕುಟುಂಬ ವರ್ಗಕ್ಕೆ ಪ್ರೀತಿಪಾತ್ರರ ಅಗಲಿಕೆ ಭರಿಸುವ ಶಕ್ತಿ ಸಿಗುವಂತಾಗಲಿʼ ಎಂದು ಸಚಿವರು ಕಂಬನಿ ಮಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಇಸ್ಪೀಟ್ ಜೂಜಾಟದ ಮೇಲೆ ಸಿಸಿಬಿ ದಾಳಿ; ನಾಲ್ವರ ಬಂಧನ, ₹8,570 ವಶ

ನಗರದ ಹೊರವಲಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ನಾಲ್ವರನ್ನು ಸಿಸಿಬಿ...

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ದಸರಾ ಹಿನ್ನೆಲೆ: ಬೆಂಗಳೂರು ಬೆಳಗಾವಿ ನಡುವೆ ವಿಶೇಷ ರೈಲು

ವಾರಾಂತ್ಯ ಹಾಗೂ ದಸರಾ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿರ್ವಹಿಸಲು...

ಸುಳ್ಳು ಹೇಳಿಕೆ ಆರೋಪ: 6 CBI ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಕ್ರಮಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ಪ್ರಕರಣವೊಂದರಲ್ಲಿ ಸರ್ಕಾರದೊಂದಿಗೆ ನಡೆದ ಪತ್ರವ್ಯವಹಾರದ ಕುರಿತು ನ್ಯಾಯಾಲಯಕ್ಕೆ ಸುಳ್ಳು ಮಾಹಿತಿ ನೀಡಿದ...