ಕಲಬುರಗಿ | ಖಾಸಗಿ ಶಾಲೆಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಶಿಕ್ಷಣ ಇಲಾಖೆಗೆ ದಲಿತ ವಿದ್ಯಾರ್ಥಿ ಪರಿಷತ್ ಮನವಿ

Date:

ಜಿಲ್ಲೆಯ ಖಾಸಗಿ ಶಾಲೆಗಳಲ್ಲಿ ಡೋನೆಷನ್ ಹಾವಳಿ ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

- Advertisement -

ಮನವಿ ಸಲ್ಲಿಸಿ ದಲಿತ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಸಂಚಾಲಕ ಬಾಲಾಜಿ ಕಾಂಬಳೆ ಮಾತನಾಡಿ, “2026-27ನೇ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆ ವಿದ್ಯಾರ್ಥಿಗಳು ಮತ್ತು ಪೋಷಕರು ಶಾಲಾ ಪ್ರವೇಶಕ್ಕಾಗಿ ತೆರಳುತ್ತಿರುವ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಡೋನೆಷನ್ ಒತ್ತಾಯದಿಂದ ತೊಂದರೆ ಅನುಭವಿಸುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

“ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಅಕ್ರಮ ವಸೂಲಿ ನಡೆಯುತ್ತಿದ್ದು, ನೋಟ್‌ಬುಕ್, ಸಮವಸ್ತ್ರ ಹಾಗೂ ಶೂಗಳನ್ನು ಶಾಲೆಯಲ್ಲಿಯೇ ಹೆಚ್ಚಿನ ದರಕ್ಕೆ ಖರೀದಿಸುವಂತೆ ಒತ್ತಾಯಿಸಲಾಗುತ್ತಿದೆ. ಕೆಲವು ಶಿಕ್ಷಣ ಸಂಸ್ಥೆಗಳು ಪುಟ್ಟ ಮಕ್ಕಳಿಗೂ ಪ್ರವೇಶ ಪರೀಕ್ಷೆ ನಡೆಸಿ ಆರ್.ಟಿ.ಇ. ನಿಯಮಗಳನ್ನು ಉಲ್ಲಂಘಿಸುತ್ತಿವೆ” ಎಂದು ಆರೋಪಿಸಿದರು.

“ಶಿಕ್ಷಣ ಇಲಾಖೆ ನಿಗದಿಪಡಿಸಿದ ಶುಲ್ಕ ವಿವರಪಟ್ಟಿಯನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರದರ್ಶಿಸದೇ ಇರುವುದರಿಂದ ಪೋಷಕರಿಗೆ ಸ್ಪಷ್ಟ ಮಾಹಿತಿ ದೊರೆಯುತ್ತಿಲ್ಲ. ಸರ್ಕಾರದ ಆದೇಶದಂತೆ ಶಾಲಾ ಶುಲ್ಕ ಹಾಗೂ ಶಿಕ್ಷಕರ ವಿವರಗಳನ್ನು ವೆಬ್‌ಸೈಟ್ ಅಥವಾ ಪ್ಲೆಕ್ಸ್ ಮೂಲಕ ಪ್ರಕಟಿಸುವ ನಿಯಮವನ್ನೂ ಪಾಲಿಸಲಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಡೊನೇಷನ್ ಹಾವಳಿ ತಡೆಗಟ್ಟಲು ‘ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ’ ರಚಿಸಬೇಕು. ಇದರಲ್ಲಿ ಪೋಷಕರು ಹಾಗೂ ವಿದ್ಯಾರ್ಥಿ ಸಂಘಟನೆಗಳ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಮೇ 15ರಂದು ಶಹಾಪುರನಲ್ಲಿ ಬಸವಾದಿ ಶರಣರ ಜಾಗೃತಿ ಸಮಾವೇಶ

“ಶಿಕ್ಷಣವು ಸಂವಿಧಾನದ ಮೂಲಭೂತ ಹಕ್ಕಾಗಿದ್ದು, ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಭೆ ನಡೆಸಿ ಡೋನೆಷನ್ ಹಾವಳಿಗೆ ಕಡಿವಾಣ ಹಾಕಬೇಕು. ವಿದ್ಯಾರ್ಥಿಗಳ ದಾಖಲಾತಿಗೆ ಸಂಬಂಧಿಸಿದಂತೆ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು” ಎಂದು ಮನವಿಯಲ್ಲಿ ಆಗ್ರಹಿಸಲಾಯಿತು.

ಈ ವೇಳೆ ವೈ.ಎಸ್. ಸಿಂದಗೇರಿ, ನಾಗಪ್ಪ, ಮಹಮದ್ ಅಸ್ಲಮ್ ಹಾಗೂ ಸಿದ್ಧಾರ್ಥ್ ಭಾಗವಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಸುಗೂಸನ್ನು ಕಸದ ರಾಶಿಗೆ ಎಸೆದು ಪರಾರಿ; ತಾಯಿ, ಅಜ್ಜಿ ಪೊಲೀಸರ ವಶಕ್ಕೆ

ಕಲಬುರಗಿ ತಾಲೂಕಿನ ಶ್ರೀನಿವಾಸ ಸರಡಗಿ ಗ್ರಾಮದಲ್ಲಿ ಒಂದು ದಿನದ ಹಸುಗೂಸನ್ನು ಕಸದ...

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...