ಕಲಬುರಗಿ | ರಸ್ತೆ ಅಪಘಾತದಲ್ಲಿ ದಸ್ತಾಪುರ ದರ್ಗಾ ಮುತ್ತವಲ್ಲಿ ಸೈಯದ್ ಸರ್ದಾರ್ ಸಾಹೇಬ್ ದುರ್ಮರಣ

Date:

ಚಿಂಚೋಳಿ ತಾಲೂಕಿನ ದಸ್ತಾಪುರ ಗ್ರಾಮದ ಸೈಯದ್ ಅನ್ವರ್ ಅಲಿ ಸಾಹೇಬ್ ದರ್ಗಾದ ಮುತ್ತವಲ್ಲಿಯಾಗಿದ್ದ ಸೈಯದ್ ಸರ್ದಾರ್ ಸಾಹೇಬ್ (36) ಅವರು ಗುರುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಗ್ರಾಮದಲ್ಲಿ ಶೋಕದ ವಾತಾವರಣ ಮೂಡಿಸಿದೆ.

- Advertisement -

ತೆಲಂಗಾಣ ರಾಜ್ಯದ ದಿಗ್ವಾಲ್ ಮತ್ತು ರಂಜೋಳ ನಡುವಿನ ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಹೈದರಾಬಾದ್‌ನಿಂದ ಸ್ವಗ್ರಾಮ ದಸ್ತಾಪುರಕ್ಕೆ ಮರಳುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ವಾಹನ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಸೈಯದ್ ಸರ್ದಾರ್ ಸಾಹೇಬ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಸೈಯದ್ ಸರ್ದಾರ್ ಸಾಹೇಬ್ ಅವರು ದಸ್ತಾಪುರ ಗ್ರಾಮದ ಸೈಯದ್ ಅನ್ವರ್ ಅಲಿ ಸಾಹೇಬ್ ದರ್ಗಾದ ಮುತ್ತವಲ್ಲಿಯಾಗಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಭಕ್ತರು ಮತ್ತು ಗ್ರಾಮಸ್ಥರ ನಡುವೆ ಅಪಾರ ಗೌರವ ಗಳಿಸಿದ್ದರು. ಅವರ ಸರಳ ಸ್ವಭಾವ, ಸೇವಾಭಾವ ಮತ್ತು ಧಾರ್ಮಿಕ ನಿಷ್ಠೆಯಿಂದಾಗಿ ಗ್ರಾಮದಲ್ಲಿ ವಿಶೇಷ ಸ್ಥಾನಮಾನ ಪಡೆದಿದ್ದರು.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ ದಸ್ತಾಪುರ ಗ್ರಾಮದಲ್ಲಿ ದುಃಖದ ವಾತಾವರಣ ನಿರ್ಮಾಣವಾಯಿತು. ಅಪಾರ ಸಂಖ್ಯೆಯ ಭಕ್ತರು, ಅನುಯಾಯಿಗಳು, ಬಂಧುಗಳು ಹಾಗೂ ಗ್ರಾಮಸ್ಥರು ಮೃತರ ನಿವಾಸಕ್ಕೆ ಮತ್ತು ದರ್ಗಾ ಆವರಣಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು. ಮಹಿಳೆಯರ ಆಕ್ರಂದನ ಮುಗಿಲುಮುಟ್ಟಿದ್ದು, ಕುಟುಂಬಸ್ಥರ ದುಃಖ ಕಂಡು ಗ್ರಾಮಸ್ಥರು ಕಣ್ಣೀರಿಟ್ಟರು.

ಮೃತರು ತಾಯಿ, ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಅವರ ಅಕಾಲಿಕ ನಿಧನದಿಂದ ಕುಟುಂಬಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಗ್ರಾಮಸ್ಥರು ಸಂತಾಪ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಪ್ರತಿ ಕ್ವಿಂಟಾಲ್‌ಗೆ ₹7,721 ದರ ನಿಗದಿ

ಸಂಜೆ ಧಾರ್ಮಿಕ ವಿಧಿವಿಧಾನಗಳ ಅನುಸಾರ ದಸ್ತಾಪುರದ ಅನ್ವರ್ ಅಲಿ ಸಾಹೇಬ್ ದರ್ಗಾ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಧಾರ್ಮಿಕ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಭಕ್ತರು ಮೃತರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ಧಾಂಜಲಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...