ಕಲಬುರಗಿ | ರೈತರ ಸಾಲಮನ್ನಾ, ಎಕರೆಗೆ ₹50 ಸಾವಿರ ಪರಿಹಾರಕ್ಕೆ ಆಗ್ರಹ

Date:

ಅನಾವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಶೇ.100ರಷ್ಟು ಬೆಳೆ ವಿಮೆ ಪರಿಹಾರ ನೀಡಬೇಕು, ಪ್ರತಿ ಎಕರೆಗೆ ₹50 ಸಾವಿರ ರಾಷ್ಟ್ರೀಯ ವಿಪತ್ತು ಪರಿಹಾರ ಘೋಷಿಸಬೇಕು ಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ನಗರದ ಹೊರವಲಯದ ಮಾಡಬೂಳ ಕ್ರಾಸ್‌ನ ಟೋಲ್‌ ನಾಕಾ ಬಳಿ ಪ್ರತಿಭಟನೆ ನಡೆಸಲಾಯಿತು.

- Advertisement -

ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಮುಂಗಾರು ಮತ್ತು ಹಿಂಗಾರು ಬೆಳೆಗಳು ಹಾನಿಗೀಡಾಗಿದ್ದು, ರೈತರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಾಗೂ ವಿಮಾ ಕಂಪನಿಗಳು ಬೆಳೆ ನಷ್ಟದ ಪರಿಹಾರ ಮತ್ತು ಬೆಳೆ ವಿಮೆ ಮೊತ್ತವನ್ನು ತಕ್ಷಣ ಮಂಜೂರು ಮಾಡಿ ರೈತರ ಖಾತೆಗಳಿಗೆ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಹಿಂಗಾರು ಹಂಗಾಮಿನ ಜೋಳ, ಕಡಲೆ, ಕುಸುಬೆ ಮತ್ತು ಶೇಂಗಾ ಬೆಳೆಗಳು ಮಳೆಯಿಲ್ಲದೆ ಹಾನಿಗೀಡಾಗಿವೆ. ಹೀಗಾಗಿ ಪ್ರತಿ ಎಕರೆಗೆ ₹50 ಸಾವಿರ ಪರಿಹಾರ ನೀಡಬೇಕು. ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಕೇಂದ್ರ ಸರ್ಕಾರ ಮನ್ನಾ ಮಾಡಬೇಕು. ಡಿಸಿಸಿ ಬ್ಯಾಂಕ್‌ಗಳು ಹಾಗೂ ವಿಎಸ್‌ಎಸ್‌ಎನ್‌ ಸಹಕಾರ ಸಂಘಗಳಲ್ಲಿನ ಸಾಲವನ್ನು ರಾಜ್ಯ ಸರ್ಕಾರ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿದಿದ್ದು, ಹಳ್ಳ-ಕೊಳ್ಳ, ನಾಲೆ ಮತ್ತು ನದಿಗಳು ಬತ್ತಿಹೋಗಿವೆ. ಇದರಿಂದ ಜನರು, ಜಾನುವಾರುಗಳು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗಿದೆ. ಜಾನುವಾರುಗಳಿಗೆ ಮೇವಿನ ಕೊರತೆಯೂ ಎದುರಾಗಿದ್ದು, ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕವಾಗಿ ಮೇವು ಪೂರೈಸಬೇಕು ಎಂದು ಒತ್ತಾಯಿಸಿದರು.

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಉತ್ಪಾದನಾ ವೆಚ್ಚದ ಮೇಲೆ ಶೇ.50ರಷ್ಟು ಲಾಭ ಸೇರಿಸಿ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸುವ ಕಾನೂನು ಜಾರಿಗೆ ತರಬೇಕು. ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ ₹15 ಸಾವಿರ ಬೆಂಬಲ ಬೆಲೆ ಘೋಷಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲಿ ತ್ರಿಫೇಸ್ ವಿದ್ಯುತ್ ಪೂರೈಸಬೇಕು. ಸುಟ್ಟುಹೋದ ವಿದ್ಯುತ್ ಪರಿವರ್ತಕಗಳನ್ನು (ಟಿಸಿ) ತಕ್ಷಣ ಬದಲಾಯಿಸಿ ನಿರಂತರ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸಾಗಿಸುವ ರೈತರ ವಾಹನಗಳಿಂದ ಟೋಲ್ ಶುಲ್ಕ ವಸೂಲಿ ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.

ರೈತರ ಸಮಸ್ಯೆಗಳಿಗೆ ಸರ್ಕಾರಗಳು ಕೂಡಲೇ ಸ್ಪಂದಿಸಿ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಬೀದರ್‌ | ಸಮತೆಯ ಪಾಲನೆಗಾಗಿ ವಚನ ಕ್ರಾಂತಿ ನಡೆಸಿದ ಶರಣರು: ಹಂಸಲೇಖ

ಪ್ರತಿಭಟನೆಯಲ್ಲಿ ರೈತ ಹೋರಾಟಗಾರರಾದ ಶರಣಬಸಪ್ಪ ಮಮಶೆಟ್ಟಿ, ಪರಮೇಶ್ವರ ಕಾಂತಾ, ವಿರಣ್ಣ ಗಂಗಾಣಿ, ಕರೆಪ್ಪ ಕರಗೊಂಡ, ದಿಲೀಪ್ ನಾಗೂರ, ಜಾಫರ್ ಖಾನ್, ಜಗನ್ನಾಥ ತೆಲಿ, ಶರಣಪ್ಪ ಪೂಜಾರಿ, ವಚ್ಚಾ, ಸಿದ್ದು ಎಸ್.ಎಲ್. ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಸವಕಲ್ಯಾಣ ಅನುಭವ ಮಂಟಪ ನಿರ್ಮಾಣ ಕಾರ್ಯ ವರ್ಷದೊಳಗೆ ಪೂರ್ಣ : ಸಚಿವ ಈಶ್ವರ ಖಂಡ್ರೆ

ವಿಶ್ವಕ್ಕೆ ಸಮಾನತೆ, ಕಾಯಕ ಮತ್ತು ದಾಸೋಹದ ಪರಿಕಲ್ಪನೆಗಳನ್ನು ನೀಡಿದ ಬಸವಣ್ಣನವರು ಮನುಕುಲದ...

ಮಕ್ಕಳಿಗೆ ಇಂಟರ್ನೆಟ್‌ ನಿರ್ಬಂಧ | ಸ್ವಾತಂತ್ರ್ಯಕ್ಕೆ ಕಡಿವಾಣವಲ್ಲ, ಡಿಜಿಟಲ್ ಜಗತ್ತಿಗೆ ಹೊಣೆಗಾರಿಕೆಯ ಚೌಕಟ್ಟು ಅಗತ್ಯ

ಇಂಟರ್ನೆಟ್ ಪ್ರವೇಶವನ್ನು ಕೇವಲ ತಾಂತ್ರಿಕ ಸೌಲಭ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ. ಇದೇ ಡಿಜಿಟಲ್...

ಬೀದರ್ | ನ.7ಕ್ಕೆ ಜಿಲ್ಲಾ ಪ್ರಥಮ ದಲಿತ ಬಂಡಾಯ ಸಮ್ಮೇಳನ

ಬೀದರ್ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ...

ಕೇಂದ್ರದ ಆಡಳಿತ ಕರಡು ತಿರಸ್ಕರಿಸಿದ ಲಡಾಖ್ ನಾಯಕರು: ‘ಏಕಪಕ್ಷೀಯ’ ನಿರ್ಧಾರ ಖಂಡಿಸಿ ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಲಡಾಖ್ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸಿದ್ಧಪಡಿಸಿರುವ ನೂತನ ಆಡಳಿತಾತ್ಮಕ ಕರಡನ್ನು ಪ್ರಮುಖ...