ಕಲಬುರಗಿ | ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕವಾಗಿ ಜಾರಿಗೆ ಒತ್ತಾಯ

Date:

ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್, ಮೇ 2026ರಲ್ಲಿ ಜಾರಿಗೊಳ್ಳಲಿರುವ ವಿಶೇಷ ಸಮಗ್ರ ಪರಿಶೀಲನೆ ಎಸ್‌ಐಆರ್ ಪ್ರಕ್ರಿಯೆಯನ್ನು ಕಾನೂನುಬದ್ಧ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವಂತೆ ವೆಲ್ಫೇರ್ ಪಾರ್ಟಿ ವತಿಯಿಂದ ಮುಖ್ಯ ಚುನಾವಣಾ ಆಯುಕ್ತರಿಗೆ ಸೋಮವಾರ ಜ್ಞಾಪಕ ಪತ್ರ ಸಲ್ಲಿಸಿದರು.

- Advertisement -

ಬಳಿಕ ಮಾತನಾಡಿ ಮುಖಂಡರು, ‘ಬಿಹಾರ, ಉತ್ತರ ಪ್ರದೇಶ ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜಾರಿಗೊಂಡಿದ್ದ SIR ಪ್ರಕ್ರಿಯೆಯಲ್ಲಿ ಅನೇಕ ನೈಜ ಮತದಾರರು ಅಸಂಗತ ದಾಖಲೆಗಳ ಅವಶ್ಯಕತೆ ಹಾಗೂ ಪ್ರಕ್ರಿಯಾತ್ಮಕ ವೈಫಲ್ಯಗಳಿಂದ ತೊಂದರೆ ಅನುಭವಿಸಿರುವುದು ಉಲ್ಲೇಖಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇಂತಹ ದೋಷಗಳು ಮರುಕಳಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು’ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

‘ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಪ್ರತಿಯೊಂದು ಮನೆಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಅಗತ್ಯವಿದ್ದಲ್ಲಿ ಕನಿಷ್ಠ ಮೂರು ಬಾರಿ ಪರಿಶೀಲನೆ ಪೂರ್ಣಗೊಳಿಸಬೇಕು ಎಂದು ಮನವಿಯಲ್ಲಿ ಸೂಚಿಸಲಾಗಿದೆ. ಮತದಾರರನ್ನು ತಪ್ಪಾಗಿ ‘ಕಾಣೆಯಾದ ಮತದಾರರು’ ಎಂದು ವರ್ಗೀಕರಿಸುವುದನ್ನು ತಪ್ಪಿಸಲು ಸಮಗ್ರ ಪರಿಶೀಲನೆ ನಡೆಸಬೇಕು’ ಎಂದು ಮನವಿ ಮಾಡಿದರು.

‘ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವ ಸಂಬಂಧ ನಮೂನೆ–7 (Form-7) ಅಡಿಯಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಮ್ಮುಖದಲ್ಲಿ ಸ್ವೀಕರಿಸಿ, ಅವುಗಳ ಬಗ್ಗೆ ಸೂಕ್ಷ್ಮ ಪರಿಶೀಲನೆ ನಡೆಸಬೇಕು’ ಎಂದು ಆಗ್ರಹಿಸಿದರು.

‘ಹಳೆಯ ಮತದಾರರ ಪಟ್ಟಿಯ ದೋಷಗಳನ್ನು ಆಧಾರವನ್ನಾಗಿ ಮಾಡಿಕೊಂಡು ನೈಜ ಮತದಾರರಿಗೆ ಕಿರುಕುಳ ನೀಡಬಾರದು. SIR ಪ್ರಕ್ರಿಯೆ ನಂತರ ಹೆಸರು ಕೈಬಿಡಲ್ಪಟ್ಟವರಿಗೆ ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಸಮರ್ಪಕ ಅವಕಾಶ ಕಲ್ಪಿಸಬೇಕು ಹಾಗೂ ಸರ್ವೋಚ್ಚ ನ್ಯಾಯಾಲಯದ ಮಧ್ಯಂತರ ಆದೇಶಗಳನ್ನು ಪಾಲಿಸಬೇಕು’ ಎಂದು ಹೇಳಿದರು.

ಇದನ್ನು ಓದಿದ್ದೀರಾ? ಕಲಬುರಗಿ | ಅಂಬೇಡ್ಕರ್ ಜಯಂತೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ, ಭಾಷಣ ಸ್ಪರ್ಧೆ

ಈ ಸಂದರ್ಭದಲ್ಲಿ ಜ್ಞಾಪಕ ಪತ್ರಕ್ಕೆ ವೆಲ್ಫೇರ್ ಪಾರ್ಟಿ ಜಿಲ್ಲಾ ಅಧ್ಯಕ್ಷ ಸಲೀಮ್ ಚಿತ್ತಾಪುರಿ, ರಾಜ್ಯ ಕಾರ್ಯದರ್ಶಿ ಮುಬೀನ್ ಅಹಮದ್ ಸೇರಿದಂತೆ ನಾಸಿರುದ್ದೀನ್, ರಿಜ್ವಾನ್ ಸಿದ್ದಿಕಿ, ಸಾದಿಕ್ ಪಟೇಲ್, ಹೈದರ್ ಅಲಿ ಬಗ್ಬನ್ ಮತ್ತು ಮೌಲಾನಾ ಅಬ್ದುಲ್ ಹಮೀದ್ ಬಕ್ವಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...

ಕಲಬುರಗಿ | SIR ಎಡವಟ್ಟು: ಬದುಕಿರುವವರಿಗೂ ಮತದಾರರ ಪಟ್ಟಿಯಲ್ಲಿ ‘Death’ ಮುದ್ರೆ?

ಮತದಾರರ ಪಟ್ಟಿಯನ್ನು ಶುದ್ಧೀಕರಿಸುವ ಉದ್ದೇಶದಿಂದ ಕೈಗೊಳ್ಳಲಾಗಿರುವ ವಿಶೇಷ ತೀವ್ರ ಪರಿಷ್ಕರಣೆ (SIR)...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...