ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ಮೂವರ ಬಂಧನ

Date:

ಅಶೋಕ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಶಕ್ತಿನಗರದಲ್ಲಿ ಭಾನುವಾರ ನಡೆದ ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ಡ್ಯಾನ್ಸ್‌ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಗಳು ಶಕ್ತಿನಗರದ ಸಂಜಯ ರಾಜೇಶ್ ಗಾಯಕವಾಡ್ (23), ತುಷಾರ್ ರಾಜೇಶ್ ಗಾಯಕವಾಡ್ (24) ಹಾಗೂ ಬಸವನಗರದ ಹನುಮಾನ್ ದೇವರ ಗುಡಿ ಸಮೀಪದ ನಿವಾಸಿ ರಾಜವರ್ಧನ್ ಮಹಾದೇವಪ್ಪ ಸಂಗವಾರ (31) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಪೊಲೀಸರ ಮಾಹಿತಿ ಪ್ರಕಾರ, ಫೆಬ್ರವರಿ 22ರಂದು ಎಂ.ಜಿ. ರಸ್ತೆಯಲ್ಲಿರುವ ಆದರ್ಶ ಕಲ್ಯಾಣ ಮಂಟಪದಲ್ಲಿ ತುಷಾರ್ ಗಾಯಕವಾಡ ಅವರ ವಿವಾಹ ನೆರವೇರಿತ್ತು. ಅದೇ ದಿನ ಸಂಜೆ ಸುಮಾರು 7 ಗಂಟೆಗೆ ಶಕ್ತಿನಗರದಲ್ಲಿನ ಅವರ ಮನೆ ಎದುರು ನಡೆದ ಮದುವೆ ಮೆರವಣಿಗೆಯ ವೇಳೆ ತುಷಾರ್ ಗಾಯಕವಾಡ ಅವರು ಸಂಜಯ್‌ಗೆ ಚಾಕು ಹಾಗೂ ರಾಜವರ್ಧನ್‌ಗೆ ಮಚ್ಚು ನೀಡಿ ಡ್ಯಾನ್ಸ್‌ ಮಾಡಲು ಪ್ರಚೋದನೆ ನೀಡಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಕಲಬುರಗಿ | ಮದುವೆ ಮೆರವಣಿಗೆಯಲ್ಲಿ ಮಾರಕಾಸ್ತ್ರ ಪ್ರದರ್ಶನ; ವೀಡಿಯೊ ವೈರಲ್

ಮಾರಕಾಸ್ತ್ರಗಳನ್ನು ಹಿಡಿದು ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ರೀತಿಯಲ್ಲಿ ವರ್ತಿಸಿದ್ದ ಹಿನ್ನೆಲೆಯಲ್ಲಿ ಮೂವರ ಸೇರಿದಂತೆ ಇತರರ ವಿರುದ್ಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...