ಕಲಬುರಗಿ | ಓದುವ ಹವ್ಯಾಸ ಬೆಳೆಸಿಕೊಳ್ಳಿ : ಡಾ. ನಿಲಾಂಬಿಕಾ ಮಾಲಿ ಪಾಟೀಲ್

Date:

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಕಡಿಮೆಯಾಗುತ್ತಿದ್ದು, ಬರವಣಿಗೆ ಸಂಸ್ಕೃತಿ ಸ್ಥಗಿತಗೊಳ್ಳುತ್ತಿದೆ. ವಿದ್ಯಾರ್ಥಿಗಳು ನಿರ್ಲಿಪ್ತರಾಗದೆ ಹೊಸ ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಧಕರ ಜೀವನ ಅಧ್ಯಯನ ಮಾಡುವ ಮೂಲಕ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನ ಆವರಣ ಶಾಲಾ, ಕಾಲೇಜುಗಳ ನಿರ್ದೇಶಕರಾದ ಡಾ. ನಿಲಾಂಬಿಕಾ ಮಾಲಿ ಪಾಟೀಲ್ ಸಲಹೆ ನೀಡಿದರು.

- Advertisement -

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಸಮಿತಿಗಳ ಕಾರ್ಯಚಟುವಟಿಕೆಗಳ ಸಮಾರೋಪ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಜೇವರ್ಗಿಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶಿವಶರಣಪ್ಪ ಮಾತನಾಡಿ, ವಿದ್ಯಾರ್ಥಿಗಳು ಗುರಿಯೆಡೆಗೆ ಗಮನಹರಿಸಿ ಶ್ರಮಪಟ್ಟು ಅಭ್ಯಾಸ ಮಾಡಿ ಸಮಾಜದ ಋಣ ತೀರಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಡಾ. ಶಾಂತಾ ಅಸ್ಟಿಗೆ ಮಾತನಾಡಿ, ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಉನ್ನತ ಗುರಿಯನ್ನು ಹೊಂದಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಾಂಸ್ಕೃತಿಕ ಸಮಿತಿಯ ಸಂಚಾಲಕ ಡಾ. ಖಾಜಾವಲಿ ಈಚನಾಳ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆ ಮೇಲೆ ರೆಡ್ ಕ್ರಾಸ್ ಸಂಯೋಜಕಿ ಡಾ. ಖುತೇಜಾ ನಸ್ರಿನ್, ಗ್ರಂಥಪಾಲಕ ತಿಪ್ಪಣ್ಣ ವಗ್ದಾಳ್, ರೋವರ್ಸ್ ಲೀಡರ್ ಡಾ. ರಾಮುಲು, ರೇಂಜರ್ಸ್ ಲೀಡರ್ ಭಾಗ್ಯಶ್ರೀ, ಕ್ರೀಡಾ ನಿರ್ದೇಶಕ ಡಾ. ಉತ್ತಮ ಬಾಳುವಾಲೆ, ಡಾ. ಬಿ.ಆರ್. ಅಂಬೇಡ್ಕರ್ ಸ್ಮರಣಾರ್ಥ ಸ್ಪರ್ಧಾಕೂಟ ಸಂಚಾಲಕ ಭೀಮಣ್ಣ ಬೆಡಕಪಳ್ಳಿ, ಐಕ್ಯುಏಸಿ ಸಹ ಸಂಚಾಲಕ ಡಾ. ರವೀಂದ್ರ, ಎನ್ನೆಸ್ಸೆಸ್ ಸಂಯೋಜಕಿ ಅಪರ್ಣಾ, ಪತ್ರಾಂಕಿತ ವ್ಯವಸ್ಥಾಪಕಿ ಫುಲಾಬಾಯಿ ಜಲ್ದೆ ಹಾಗೂ ಅತಿಥಿ ಉಪನ್ಯಾಸಕ ಡಾ. ನಾಗನಗೌಡ ಉಪಸ್ಥಿತರಿದ್ದರು.

ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎನ್.ಜಿ. ಶ್ರೀಧರ, ಐಕ್ಯುಏಸಿ ಸಂಯೋಜಕ ಡಾ. ಸಂದೀಪ್ ತಿವಾರಿ, ಡಾ. ಶಿವಕುಮಾರ್, ನಿರ್ವಹಣಾ ಶಾಸ್ತ್ರ ವಿಭಾಗದ ಅಧ್ಯಾಪಕರಾದ ಡಾ. ಹೊನ್ನೂರಸ್ವಾಮಿ, ಡಾ. ಮೋಹನ್ ಬೈಲಪತ್ತಾರ ಹಾಗೂ ವಿಕಾಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವಿವಿಧ ಸಮಿತಿ ಹಾಗೂ ಘಟಕಗಳ ಸಂಚಾಲಕರು ವಾರ್ಷಿಕ ವರದಿ ಮಂಡಿಸಿದರು. ಬಿ.ಎಸ್ಸಿ ವಿದ್ಯಾರ್ಥಿನಿ ತೇಜಶ್ವಿನಿ ಪ್ರಾರ್ಥಿಸಿದರು. ಎನ್ನೆಸ್ಸೆಸ್ ಸಂಚಾಲಕ ಡಾ. ಶರಣಪ್ಪ ಗುಂಡಗುರ್ತಿ ಸ್ವಾಗತಿಸಿದರು. ಉದ್ಯೋಗ ಕೋಶ ಸಂಚಾಲಕಿ ಡಾ. ಶಿಲ್ಪಾ ಜೆ ನಿರೂಪಿಸಿದರು. ಎನ್ನೆಸ್ಸೆಸ್ ಸಂಚಾಲಕ ಕುಪೇಂದ್ರ ರಾಠೋಡ್ ವಂದಿಸಿದರು.

ಇದನ್ನು ಓದಿದ್ದೀರಾ? ಶಹಾಬಾದ್‌ನಲ್ಲಿ ಅಂಬೇಡ್ಕರ್ ಹಬ್ಬದ

ಸಾಂಸ್ಕೃತಿಕ, ಕ್ರೀಡಾ ಹಾಗೂ ರೆಡ್ ಕ್ರಾಸ್ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಗ್ರಂಥಾಲಯ ವಿಭಾಗದಿಂದ ಉತ್ತಮ ಗ್ರಂಥಾಲಯ ಬಳಕೆದಾರರಾದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಮಟಕಾ ಜೂಜಾಟದ ಮೇಲೆ ಚೌಕ ಪೊಲೀಸರ ದಾಳಿ; ₹1,120 ನಗದು ವಶ

ಸಾರ್ವಜನಿಕ ಸ್ಥಳದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಚೌಕ ಠಾಣೆ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : 14 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ, 1 ನಾಮಪತ್ರ ತಿರಸ್ಕೃತ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...