ಕಲಬುರಗಿ | ಪ್ರಾಧ್ಯಾಪಕ ಶಿವಾನಂದ ಬಂಟನೂರಗೆ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ

Date:

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಂಗೀತ ಮತ್ತು ಲಲಿತ ಕಲಾ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಿವಾನಂದ ಬಂಟನೂರು ಅವರಿಗೆ ಕಲಾ ಇತಿಹಾಸ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಇತಿಹಾಸ ಅಕಾಡೆಮಿಯ ವತಿಯಿಂದ ಡಾ.ಪ್ರತಿಭಾ ಚಿಣ್ಣಪ್ಪ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

- Advertisement -

ಡಾ.ಶಿವಾನಂದ ಬಂಟನೂರು ಅವರ ಸಾಧನೆಗೆ ಸಂತಸ ವ್ಯಕ್ತಪಡಿಸಿರುವ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹಾಗೂ ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ ಅವರು ಅಭಿನಂದಿಸಿದ್ದಾರೆ. ಈ ಗೌರವ ವಿಶ್ವವಿದ್ಯಾಲಯಕ್ಕೆ ಹೆಮ್ಮೆಯ ಸಂಗತಿಯಾಗಿದ್ದು, ಅವರ ಸಾಧನೆ ಇತರರಿಗೆ ಪ್ರೇರಣೆಯಾಗಲಿದೆ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಪ್ರಶಸ್ತಿ ಸ್ವೀಕರಿಸಿದ ಡಾ.ಶಿವಾನಂದ ಬಂಟನೂರು ಮಾತನಾಡಿ, “ಈ ಗೌರವ ದೊರೆಯುವಲ್ಲಿ ವಿಶ್ವವಿದ್ಯಾಲಯದ ಕುಲಪತಿ, ಕುಲಸಚಿವರು, ವಿವಿಧ ವಿಭಾಗಗಳ ಡೀನ್‌ಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೀಡಿದ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೆ, ವಿದ್ವತ್‌ಲೋಕದ ವಿದ್ವಾಂಸರು ಹಾಗೂ ಇತಿಹಾಸಾಸಕ್ತರು ನೀಡಿದ ಬೆಂಬಲ ಮತ್ತು ಪ್ರೋತ್ಸಾಹಕ್ಕೆ ಸದಾ ಋಣಿಯಾಗಿರುವೆ” ಎಂದು ತಿಳಿಸಿದ್ದಾರೆ.

WhatsApp Image 2026 10 10 at 7.46.08 PM 23

ಕರ್ನಾಟಕ ಇತಿಹಾಸ ಅಕಾಡೆಮಿಯ 40ನೇ ವಾರ್ಷಿಕ ರಾಷ್ಟ್ರೀಯ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವು ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲದ ಅನುಭವ ಮಂಟಪ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಡಾ. ಶಿವಾನಂದ ಬಂಟನೂರು ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಇದನ್ನೂ ಓದಿ : ಬೀದರ್‌ | ಕಸಾಪ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧಾರ : ಸಿ.ಸೋಮಶೇಖರ್‌

ಸಮಾರಂಭದಲ್ಲಿ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಇತಿಹಾಸ ಅಕಾಡೆಮಿಯ ಅಧ್ಯಕ್ಷ ಡಾ.ದೇವರಕೊಂಡಾರೆಡ್ಡಿ, ಬಸವಕಲ್ಯಾಣದ ಅನುಭವ ಮಂಟಪ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು, ಭಾಲ್ಕಿ ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು, ಸಮ್ಮೇಳನದ ಸರ್ವಾಧ್ಯಕ್ಷ ಡಾ.ಕೆ.ರವೀಂದ್ರನಾಥ್ ಹಾಗೂ ಹಂಪಿ ವಿಶ್ವವಿದ್ಯಾಲಯದ ಕುಲಪತಿ ಡಾ.ಡಿ.ವಿ. ಪರಮ ಶಿವಮೂರ್ತಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...