ಕಲಬುರಗಿ | ಕುಡಿಯುವ ನೀರಿಗೆ ಹಾಹಾಕಾರ: ಮೋಟಾರ್‌ ದುರಸ್ತಿಗೆ ಶರಣಬಸಪ್ಪ ಮಮಶೆಟ್ಟಿ ಆಗ್ರಹ

Date:

ಕಲಬುರಗಿ ಜಿಲ್ಲೆಯ ಚಿಂಚೊಳಿ ತಾಲೂಕಿನ ಮಿರಿಯಾಣ ಗ್ರಾಮದ ಇಂದಿರಾ ನಗರ ಬಡಾವಣೆ ಯಲ್ಲಿ ಕುಡಿಯುವ ನೀರಿನ ಹಾಹಾಕಾರ ತುಂಬಾ ಉಲ್ಭಣಗೊಂಡಿದ್ದು, ಜನರು ನೀರಿಗಾಗಿ ತತ್ತರಿಸಿ ಪರದಾಡುವಂತಾಗಿದೆ ಬೇಸಿಗೆ ಕಾಲದಲ್ಲಿ ಕೊಡ ಹಿಡಿದುಕೊಂಡು ನೀರಿಗಾಗಿ ಸಾರ್ವಜನಿಕರು ಅಲೆದಾಡುತ್ತಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಮೋಟಾರು ಮತ್ತು ಸ್ಟಾಟರ್ ಕೆಟ್ಟಿದ್ದು, ಅವುಗಳನ್ನು ಕೂಡಲೇ ದುರಸ್ತಿ ಮಾಡಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು KPRS ಜಿಲ್ಲಾ ಅಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಆಗ್ರಹಿಸಿದರು.

- Advertisement -

ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ತಹಶೀಲ್ದಾರ್‌, ಆರೋಗ್ಯ ಅಧಿಕಾರಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಮಿರಿಯಾಣ ಗ್ರಾಮದಲ್ಲಿ ಸಾರ್ವಜನಿಕ ಕುಡಿಯುವ ನೀರಿನ ಹೆಸರಿನಲ್ಲಿ ಜಲಜೀವನ ಮಿಷನ್ ಯೋಜನೆ ಅಡಿಯಲ್ಲಿ ಮಂಜೂರಾದ ಕಾಮಗಾರಿ ಸಂಪೂರ್ಣ ಕಳಪೆಮಟ್ಟದ್ದಾಗಿದೆ. ಕಾಮಗಾರಿ ಮಾಡಿ ಸರ್ಕಾರದ ಹಣ ಖರ್ಚಾಗುವುದು ತಪ್ಪುತ್ತಿಲ್ಲ, ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿದಿಲ್ಲ. ದಿನೇ ದಿನೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ಜನರು ಕುಡಿಯುವ ನೀರಿಗಾಗಿ ಕೊಡ ಹಿಡಿದುಕೊಂಡು ಪರದಾಡುವಂತಾಗಿದೆ. ಊರಿನಲ್ಲಿದ್ದ ಬೋರ್‌ವೆಲ್‌ಗಳೂ ಕೂಡ ಕೆಟ್ಟುಹೋಗಿವೆ. ದುರಸ್ತಿ ಮಾಡದಿರುವ ಕಾರಣ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಕೂಡಲೇ ಇದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಗ್ರಾಮದ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು” ಎಂದು ಗ್ರಾಮಸ್ಥರು ಆಗ್ರಹಿಸಿದರು.

ಮಿರಿಯಾಣ ಗ್ರಾಮದಲ್ಲಿ ವೃದ್ಧರು, ವಯಸ್ಕರರು ಅವರಿಗೆ ಬರುವ ಮಾಸಾಶನ ಪಿಂಚಣಿ ಹಣದ ಮೇಲೆ ನಂಬಿಕೆ ಇಟ್ಟುಕೊಂಡು ಬದುಕುತ್ತಿದ್ದಾರೆ. ಗಂಜಿ ಆಸರೆಯಾಗಿದ್ದ ಪಿಂಚಣಿ ಹಣ ಸ್ಥಗಿತಗೊಂಡಿರುವುದರಿಂದ ವಯಸ್ಕರರ ಬದುಕು ಅಧೋಗತಿಯಾಗಿದೆ. ಅವರ ಗೋಳು ಕೇಳುವವರು ಯಾರೂ ಇಲ್ಲದಂತಾಗಿದೆ. ತಹಶೀಲ್ದಾರರ ಕಚೇರಿಗೆ ಅಲೆದಾಡಿದರೂ ಅಲ್ಲಿ ಕೇವಲ ಕುಂಟು ನೆಪ ಹೇಳಿ ಸತಾಯಿಸುತ್ತಿದ್ದಾರೆ. ಉರಿ ಬಿಸಿಲಿನಲ್ಲಿ ತಹಶೀಲ್ದಾರರ ಕಚೇರಿಗೆ ಓಡಾಡಿ ಸುಸ್ತಾದ ವೃದ್ಧರು ಗೋಳಾಡುತ್ತಿದ್ದಾರೆ. ಹಣ್ಣಾದ ಜೀವಗಳಿಗೆ ಬರುತ್ತಿದ್ದ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಯಾಪ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

“ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧವಾದ ಕುಡಿಯುವ ನೀರು ಇಲ್ಲದೆ ದೊಡ್ಡ ಸಮಸ್ಯೆಯಾಗಿದೆ. ಶಾಲೆಯಲ್ಲಿದ್ದ ಕುಡಿಯುವ ನೀರಿನ ಶುದ್ದೀಕರಣ ಘಟಕ ಕೆಟ್ಟು ಹೋಗಿದ್ದು, ಮಕ್ಕಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕುಡಿಯುವ ನೀರಿನ ಶುದ್ದೀಕರಣ ಘಟಕವನ್ನು ತುರ್ತಾಗಿ ದುರಸ್ತಿಗೊಳಿಸಬೇಕು” ಎಂದು ಸ್ಥಳೀಯರ ಪರವಾಗಿ ಆಗ್ರಹಿಸಿದರು.

ಇದನ್ನೂ ಓದಿದ್ದೀರಾ? ಚಿತ್ರದುರ್ಗ | ನ್ಯಾಯಾಲಯ ಆದೇಶಕ್ಕೂ ಕವಡೆ ಕಿಮ್ಮತ್ತಿಲ್ಲ: ʼನಗದು ಘೋಷಣೆ ವಹಿʼ ಮಾಹಿತಿಗೆ ಅಧಿಕಾರಿಗಳ ಹಿಂದೇಟು

“ಮಿರಿಯಾಣ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ವಸತಿ ಕಟ್ಟಡ ಕಾಮಗಾರಿ ಮುಗಿದು 4 ವರ್ಷಗಳಾದರೂ ವಸತಿಗೃಹ ಕಟ್ಟಡ ಅಪೂರ್ಣವಾಗಿದೆ. ಆದರೆ ಗುತ್ತಿಗೆದಾರರು ಬೋಗಸ್ ಬಿಲ್ ಎತ್ತಿಹಾಕಿದ್ದಾರೆ ಸುಣ್ಣ-ಬಣ್ಣ ಇಲ್ಲ ಮತ್ತು ಗೇಟ್‌ಗಳು ಹಾಳಾಗಿವೆ. ವಸತಿಗೃಹಗಳ ಒಳಗಡೆ ಪರಸಿ ಹಾಕಿರುವುದಿಲ್ಲ. ಕಳಪೆ ಮಟ್ಟದ ಕಾಮಗಾರಿ ಮಾಡಿದ್ದು, ಬಿಲ್ ತೆಗೆದುಕೊಂಡಿದ್ದಾರೆ. ಆದರೂ ವಸತಿಗೆ ಯೋಗ್ಯವಾಗಿರುವುದಿಲ್ಲ. ಕೂಡಲೇ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ತಪ್ಪಿತಸ್ಥರ ವಿರುದ್ಧ ತನಿಖೆ ನಡೆಸಬೇಕು. ಕಾನೂನಿನ ಪ್ರಕಾರ ಕ್ರಿಮಿನಲ್ ಪೊಲೀಸ್ ಪ್ರಕರಣ ದಾಖಲಿಸಿ, ಗುತ್ತಿಗೆದಾರರು ಪರವಾನಗಿ ಕಪ್ಪುಪಟ್ಟಿಗೆ ಸೇರಿಸಿ ಪುನಃ ಕಾಮಗಾರಿ ಪೂರ್ತಿಗೊಳಿಸಬೇಕು” ಎಂದು ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ಚಿತ್ರದುರ್ಗ | ನ್ಯಾಯಾಲಯ ಆದೇಶಕ್ಕೂ ಕವಡೆ ಕಿಮ್ಮತ್ತಿಲ್ಲ: ʼನಗದು ಘೋಷಣೆ ವಹಿʼ ಮಾಹಿತಿಗೆ ಅಧಿಕಾರಿಗಳ ಹಿಂದೇಟು

KPRS ಚಿಂಚೊಳಿ ತಾಲೂಕು ಅಧ್ಯಕ್ಷ ಜಾಫರ್ ಖಾನ್ ಸಾಬ್ ಸೇರಿದಂತೆ ಗ್ರಾಮಸ್ಥರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಕಲಬುರಗಿ | ₹3 ಸಾವಿರ ಲಂಚ ಸ್ವೀಕಾರ: ಪೊಲೀಸ್ ಕಾನ್‌ಸ್ಟೆಬಲ್ ಲೋಕಾಯುಕ್ತ ಬಲೆಗೆ

ಜಾಮೀನು ಪಡೆದ ವ್ಯಕ್ತಿಯ ಹಾಜರಾತಿ ದಾಖಲಿಸುವ ವಿಚಾರದಲ್ಲಿ ₹3 ಸಾವಿರ ಲಂಚ...